Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ*
  • *ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*
  • *ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*
  • *ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*
  • *ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*
  • *ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*
  • *2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*
  • *ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
  • *ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೇ 7 ರಿಂದ ರಾಜ್ಯಮಟ್ಟದ ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಲೋಗೋ ಹಾಗೂ ಟ್ರೋಫಿಗಳ ಅನಾವರಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೇ 7 ರಿಂದ ರಾಜ್ಯಮಟ್ಟದ ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಲೋಗೋ ಹಾಗೂ ಟ್ರೋಫಿಗಳ ಅನಾವರಣ*

ಏಪ್ರಿಲ್ 11, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.11 NEWS DESK : ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಮೇ 7 ರಿಂದ 10 ರವರೆಗೆ ಸೋಮವಾರಪೇಟೆಯ ಸಿಂಥೆಟಿಕ್ ಟರ್ಫ್ ಮೈದಾನದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟದ ಲೋಗೋ ಹಾಗೂ ಟ್ರೋಫಿಗಳ ಅನಾವರಣ ಕಾರ್ಯಕ್ರಮ ಮಡಿಕೇರಿಯ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ಲೋಗೋವನ್ನು ಅನಾವರಣ ಮಾಡಿ ಮಾತನಾಡಿದ ಜಿಲ್ಲಾ ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು, ಕೊಡಗು ಜಿಲ್ಲೆ ಕ್ರೀಡೆಯ ತವರು. ಇಂತಹ ನೆಲದಲ್ಲಿ ಪ್ರತಿಷ್ಠಿತ ತಂಡಗಳ ನಡುವೆ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯನ್ನು ಆಯೋಜಿಸಿರುವುದು ಶ್ಲಾಘನೀಯ. ರಾಜ್ಯ ಮಟ್ಟದ ಹಾಕಿ ಕ್ರೀಡಾಕೂಟಕ್ಕೆ ಜಿಲ್ಲಾಡಳಿತದಿಂದ ಬೇಕಾಗುವ ಅಗತ್ಯ ನೆರವು ಒದಗಿಸಲಾಗುವುದು ಎಂದರು. ಟ್ರೋಫಿಗಳನ್ನು ಅನಾವರಣ ಮಾಡಿದ ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ. ವಿಸ್ಮಯಿ ಚಕ್ರವರ್ತಿ ಅವರು, ಇಲಾಖೆಯಿಂದ ಹಾಕಿ ಪಂದ್ಯಾವಳಿಗೆ ಅಗತ್ಯವಿರುವ ಎಲ್ಲಾ ರೀತಿಯ ನೆರವು ಒದಗಿಸಲಾಗುವುದು. ಸೋಮವಾರಪೇಟೆಯ ಹಾಕಿ ಟರ್ಫ್ ಅನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಸ್ಥಳೀಯ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಇಂತಹ ಪಂದ್ಯಾವಳಿಗಳು ನಿರಂತರವಾಗಿ ನಡೆಯಬೇಕು ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಾಕಿ ಕೂರ್ಗ್ನ ಕಾರ್ಯದರ್ಶಿ ಚೇತನ್ ಮಾತನಾಡಿ, ಕೊಡಗಿನಲ್ಲಿ 25 ವರ್ಷಗಳ ನಂತರ ರಾಜ್ಯಮಟ್ಟದ ಹಾಕಿ ಪಂದ್ಯಾವಳಿ ಆಯೋಜನೆಯಾಗುತ್ತಿರುವುದು ಶ್ಲಾಘನೀಯ. ಹಾಕಿ ಕ್ರೀಡೆಗೆ ಹಾಕಿ ಕೂರ್ಗ್ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದಿದೆ. ಅಂತೆಯೇ ರಾಜ್ಯಮಟ್ಟದ ಪಂದ್ಯಾವಳಿಗೂ ಅಗತ್ಯ ನೆರವು ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಶ್ರೀನಿಧಿ ಲಿಂಗಪ್ಪ ಮಾತನಾಡಿ, ಕೃಷಿ ಕ್ಷೇತ್ರದ ಜಾಗೃತಿಯೊಂದಿಗೆ ಸಾಮಾಜಿಕ ಸೇವಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿರುವ ಯಿಫಾ ಸಂಘಟನೆಯು ಇದೇ ಪ್ರಥಮವಾಗಿ ರಾಜ್ಯಮಟ್ಟದ ಹಾಕಿ ಕ್ರೀಡಾಕೂಟ ಆಯೋಜಿಸಿದೆ. ಕ್ರೀಡಾಕೂಟದಲ್ಲಿ ರಾಜ್ಯಮಟ್ಟದ ಪ್ರತಿಷ್ಠಿತ ತಂಡಗಳಾದ ಕೆನರಾ ಬ್ಯಾಂಕ್, ಕರ್ನಾಟಕ ಸ್ಟೇಟ್ ಪೊಲೀಸ್, ಎಜಿಓಆರ್.ಸಿ., ಸೌತ್ ವೆಸ್ಟರ್ನ್ ರೈಲ್ವೇಸ್, ಕಸ್ಟಮ್ಸ್, ಡಿವೈಇಎಸ್, ಸೌತರ್ನ್ ಕಮಾಂಡ್ ಹಾಗೂ ಆತಿಥೇಯ ಯಿಫಾ ತಂಡಗಳು ಭಾಗವಹಿಸುತ್ತಿವೆ ಎಂದು ಹೇಳಿದರು. ಸಂಘಟನೆಯ ಉಪಾಧ್ಯಕ್ಷ ಹರ್ಷಿತ್ ಶಿವಪ್ಪ ಮಾತನಾಡಿ, ಪಂದ್ಯಾಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮುವ ತಂಡಕ್ಕೆ ರೂ. 2 ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ರೂ.೧ ಲಕ್ಷ ನಗದು ಹಾಗೂ ಟ್ರೋಫಿ ನೀಡಲಾಗುವುದು. ಇದರೊಂದಿಗೆ ವೈಯುಕ್ತಿಕ ವಿಭಾಗದಲ್ಲಿಯೂ ಪ್ರಶಸ್ತಿಗಳನ್ನು ವಿತರಿಸಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಸಂಘಟನೆಯ ಸಲಹೆಗಾರ ವಿಜಯ್ ಹಾನಗಲ್ ಪ್ರಾಸ್ತವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಕಾಫಿ ಮಂಡಳಿ ಅಧಿಕಾರಿ ಲಕ್ಷಿ್ಮೀಕಾಂತ್ ಇದ್ದರು. ಯಿಫಾ ಸಂಘಟನೆಯ ಕಾರ್ಯದರ್ಶಿ ಸಜನ್ ಮಂದಣ್ಣ, ಖಜಾಂಚಿ ಮೋಹಿತ್ ತಿಮ್ಮಯ್ಯ, ಕ್ರೀಡಾಕೂಟ ಸಂಯೋಜಕ ಅಭಿಷೇಕ್ ಗೋವಿಂದಪ್ಪ, ಸಂಭ್ರಮ್, ಪದಾಧಿಕಾರಿಗಳಾದ ರಕ್ಷಿತ್, ಆದರ್ಶ್ ತಮ್ಮಯ್ಯ, ಜೀವನ್, ವಿನಯ್ ಕುಶಾಲಪ್ಪ, ಸಮರ್ಥ್, ಚರಣ್, ಚಿರಂಜೀವಿ, ವಿಕಾಸ್, ಪ್ರದೀಪ್, ಅನಂತ್, ಜಯಕೀರ್ತಿ, ಚತುರ್ಥ ಸೇರಿದಂತೆ ಸಂಘದ ಸದಸ್ಯರುಗಳು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ*

ಸೆಪ್ಟೆಂಬರ್ 16, 2026

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026 Uncategorized ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ.15: ವಿವಿಧತೆಯಲ್ಲಿ ಏಕತೆ ಹಾಗೂ ಶಾಂತಿಯ ತೋಟವಾಗಿರುವ ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವದ ಸಂಭ್ರಮ ಮನೆಮಾಡಿದ್ದು, ಇದೇ…

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*

ಸೆಪ್ಟೆಂಬರ್ 15, 2026

*ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*

ಸೆಪ್ಟೆಂಬರ್ 15, 2026

*ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಸೆಪ್ಟೆಂಬರ್ 15, 2026

*ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*

ಸೆಪ್ಟೆಂಬರ್ 15, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ 54.60 ರೂ. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.