Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ*
  • *ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*
  • *ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*
  • *ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*
  • *ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*
  • *ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*
  • *2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*
  • *ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
  • *ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡಿಗೆ ಅಂಜೆಲಾ‌ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ಮಕ್ಕಳಿಗೆ ವಾಸ್ತವ್ಯ ಬೇಸಿಗೆ ಶಿಬಿರ; ಮಕ್ಕಳಲ್ಲಿ ಶಿಸ್ತು,ಸಂಯಮ, ನಾಯಕತ್ವ ಗುಣ ಬೆಳೆಸಲು ಸ್ಕೌಟ್ಸ್; ಗೈಡ್ಸ್ ಸಹಕಾರಿ:ಡಾ ಪ್ರವೀಣ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡಿಗೆ ಅಂಜೆಲಾ‌ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ಮಕ್ಕಳಿಗೆ ವಾಸ್ತವ್ಯ ಬೇಸಿಗೆ ಶಿಬಿರ; ಮಕ್ಕಳಲ್ಲಿ ಶಿಸ್ತು,ಸಂಯಮ, ನಾಯಕತ್ವ ಗುಣ ಬೆಳೆಸಲು ಸ್ಕೌಟ್ಸ್; ಗೈಡ್ಸ್ ಸಹಕಾರಿ:ಡಾ ಪ್ರವೀಣ್*

ಏಪ್ರಿಲ್ 12, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕೂಡಿಗೆ/ಕುಶಾಲನಗರ,  NEWS DESKಏ.12: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಶಿಸ್ತು- ಸಂಯಮ, ಉತ್ತಮ ನಾಯಕತ್ವ ಗುಣ, ರಾಷ್ಟ್ರೀಯ ಭಾವೈಕ್ಯತೆ, ಸೌಹಾರ್ದ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ‌ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಹೇಳಿದರು. ಕುಶಾಲನಗರ ತಾಲ್ಲೂಕಿನ‌ ಕೂಡಿಗೆ ಅಂಜೆಲಾ‌ ವಿದ್ಯಾನಿಕೇತನ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆ ಹಾಗೂ ಅಂಜೆಲಾ‌ ವಿದ್ಯಾನಿಕೇತನ ಶಾಲೆಯ ಸಂಯುಕ್ತಾಶ್ರಯದಲ್ಲಿ‌ ಶಾಲೆಯ ಕಬ್ಸ್ ಮತ್ತು ಬುಲ್ ಬುಲ್ಸ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಾಸ್ತವ್ಯ ಬೇಸಿಗೆ ಶಿಬಿರದ ಉದ್ಘಾಟನಶ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂತಹ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಹಾಗೂ ಕ್ರಿಯಾಶೀಲ ವ್ಯಕ್ತಿತ್ವ ಬೆಳೆಸಲು ತುಂಬಾ ಸಹಕಾರಿಯಾಗಿವೆ ಎಂದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಬಾಲಕರು ಮತ್ತು ಬಾಲಕಿಯರಿಗಾಗಿ ಸ್ವಯಂಪ್ರೇರಿತರಾಗಿ ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವ ಶೈಕ್ಷಣಿಕ ಆಂದೋಲನವಾಗಿದ್ದು, ಜಾತಿ, ಧರ್ಮವನ್ನು ಲೆಕ್ಕಿಸದೆ ಎಲ್ಲರಿಗೂ ಸಮಾನವಾಗಿ ಬದುಕುವ ಹಾಗೂ ಸಹಬಾಳ್ವೆ ಜೀವನ ನಡೆಸುವ
ಸಂಸ್ಥೆಯಾಗಿ ರೂಪುಗೊಂಡಿದೆ’ ಎಂದರು.
ಎಲ್ಲಾ ಶಾಲೆಗಳಲ್ಲಿಯೂ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಚಟುವಟಿಕೆ ಪ್ರಾರಂಭಿಸಬೇಕು’ . ಎಲ್ಲಾ ಶಾಲಾ ಮಕ್ಕಳು ಸ್ಕೌಟ್ಸ್‌ ಮತ್ತು ಗೈಡ್ಸ್‌ಗೆ ಸೇರ್ಪಡೆಗೊಳ್ಳಲು ಮುಂದಾಗಬೇಕು ಎಂದು ಡಾ ಪ್ರವೀಣ್ ದೇವರಗುಂಡ ಸಲಹೆ ನೀಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಬೆಳೆದುಬಂದ ದಾರಿ ಹಾಗೂ ಚಳವಳಿ ಕುರಿತು ಮಾಹಿತಿ ನೀಡಿದ ಶಾಲಾ ಸಂಸ್ಥಾಪನ ಮುಖ್ಯೋಪಾಧ್ಯಾಯಿನಿಯೂ ಆಗಿದ್ದ ಲೀಡರ್ಸ್ ತರಬೇತುದಾರ(ಎಲ್.ಟಿ.)ರಾದ ಸಿಸ್ಟರ್ ಬೆನ್ ವಿಟಾ ಮಾತನಾಡಿ, ಶಾಲಾ ರಜಾದಿನಗಳಲ್ಲಿ ನಡೆಸುವ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಪಠ್ಯ ಬೋಧನೆ ಮಾಡದೆ ಅವರ ಮನೋವಿಕಾಸಕ್ಕೆ ಪೂರಕವಾಗಿ ಪಠ್ಯೇತರ ಚಟುವಟಿಕೆಗಳನ್ನು ನಡೆಸಿದಾಗ ವಿದ್ಯಾರ್ಥಿಗಳು ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು ವಿವಿಧ ಅಭ್ಯಾಸಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಶಿಬಿರ ಉದ್ಘಾಟಿಸಿ ಮಾತನಾಡಿದ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಅನಿತಾ ಡಿ’ಸೋಜಾ, ವಿದ್ಯಾರ್ಥಿಗಳು ಇಂತಹ ಶಿಬಿರಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಉತ್ತಮ ತರಬೇತಿ ಹೊಂದಿ ಉತ್ತಮ ವ್ಯಕ್ತಿತ್ವ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ರಾಷ್ಟ್ರೀಯ ಭಾವೈಕ್ಯತೆಯನ್ನು ಎತ್ತಿ ಹಿಡಿಯಬೇಕು ಎಂದರು.

ಬೇಸಿಗೆ ಶಿಬಿರದ ಮಹತ್ವ ಕುರಿತು ಪ್ರಾಸ್ತವಿಕವಾಗಿ ಮಾತನಾಡಿದ ಜಿಲ್ಲಾ ಗೈಡ್ಸ್ ನ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನಾ,
ಸ್ಕೌಟಿಂಗ್, ಗೈಡಿಂಗ್ ನ ಮೂಲತತ್ವ, ಧ್ಯೇಯ, ಕೌಶಲ್ಯಗಳು, ಗ್ರಾಮೀಣ ವೃತ್ತಿ ಕೌಶಲ್ಯಗಳು ಹಾಗೂ ನಾಯಕತ್ವ ಬೆಳವಣಿಗೆ ಸೇರಿದಂತೆ
ಶಿಬಿರದಲ್ಲಿ ಮಕ್ಕಳಿಗೆ ಕಲಿಸುವ ವಿಚಾರಗಳ ಕುರಿತು ಮಾಹಿತಿ ನೀಡಿದರು. ಸ್ಕೌಟ್ಸ್ ನ‌ ಮುಖ್ಯ ತತ್ವಗಳು ಹಾಗೂ ತರಬೇತಿಯ ವಿವಿಧ ಚಟುವಟಿಕೆಗಳ ಕುರಿತ ವಿವರಿಸಿದ ಜಿಲ್ಲಾ ಸ್ಕೌಟ್ಸ್ ವಿಭಾಗದ ತರಬೇತಿ ಆಯುಕ್ತ ಕೆ.ಯು.ರಂಜಿತ್, ವಿದ್ಯಾರ್ಥಿಗಳು ಶಿಸ್ತು, ಪ್ರಾಮಾಣಿಕತೆ, ಮತ್ತು ಸೇವಾ ಮನೋಭಾವವನ್ನು ಬೆಳೆಸಿಕೊಂಡು ಇವುಗಳನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಸ್ಥಳೀಯ ಸಂಸ್ಥೆಯ ಕಾರ್ಯಾಧ್ಯಕ್ಷ ತಮ್ಮಯ್ಯ, ಕಾರ್ಯದರ್ಶಿ ಎಂ.ಎಸ್.ಗಣೇಶ್, ಸಹ ಕಾರ್ಯದರ್ಶಿ ಡಿ.ವಿ. ಗಣೇಶ್,
ಖಜಾಂಚಿ ಎನ್ ಎಸ್ ನರೇಶ್ ಕುಮಾರ್ , ಸದಸ್ಯ ವಸಂತ ,ಕಬ್ಸ್ ಮತ್ತು ಬುಲ್ ಬುಲ್ಸ್ ವಿಭಾಗದ ಕಮಿಷನರ್ ಡೈಸಿ ಫ್ರಾನ್ಸಿಸ್, ಗೈಡ್ ಕ್ಯಾಪ್ಟನ್ ಆಶಾ ,
ಸ್ಕೌಟ್ ಮಾಸ್ಟರ್ ಎಸ್.ಎಚ್. ವಸಂತ , ಫ್ಲಾಕ್ ಲೀಡರ್ ಭವ್ಯ , ಲೇಡಿ ಕಬ್ ಮಾಸ್ಟರ್ ಪಲ್ಲವಿ, ಫಾತಿಮಾ ಪ್ರೌಢ ಶಾಲೆಯ ಗೈಡ್ ಕ್ಯಾಪ್ಟನ್ ಶಿಫಾನತ್ , ಗೈಡ್ ವಿದ್ಯಾರ್ಥಿಗಳು ಮಡಿಕೇರಿ ಮುಕ್ತ ದಳ ಬುಲ್ ಬುಲ್ ಕಬ್ಸ್ ವಿದ್ಯಾರ್ಥಿಗಳು ಅಂಜೇಲ ವಿದ್ಯಾನಿಕೇತನ ವಿದ್ಯಾಸಂಸ್ಥೆಯ ಕಬ್ಸ್ ಮತ್ತು ಬುಲ್ ಬುಲ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ನ ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕರಿಂದ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಇದೇ ವೇಳೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ಉತ್ತಮ ಸೇವೆ ಸಲ್ಲಿಸಿದ ಸಂಸ್ಥೆಯ ಜಿಲ್ಲಾ ಗೈಡ್ಸ್ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನಾ ಹಾಗೂ ಲೀಡರ್ಸ್ ತರಬೇತುದಾರ( ಎಲ್.ಟಿ)ರಾದ
ಸಿಸ್ಟರ್ ಬೆನ್ ವಿಟಾ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಶಿಬಿರದಲ್ಲಿ ಸ್ಕೌಟ್ಸ್ ನ ಮೂಲಭೂತ ತತ್ವಗಳು, ರಾಷ್ಟ್ರೀಯ ಭಾವೈಕ್ಯತೆ, ನಾಯಕತ್ವ ಬೆಳವಣಿಗೆ, ವೃತ್ತಿ ಕೌಶಲ್ಯಗಳು, ಆರೋಗ್ಯ ಮತ್ತು ಸ್ವಚ್ಛತೆ ಮುಂತಾದ ವಿಷಯಗಳ ಬಗ್ಗೆ ಕಬ್ಸ್,‌ಬುಲ್, ಬುಲ್ಸ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ನ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ*

ಸೆಪ್ಟೆಂಬರ್ 16, 2026

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026 Uncategorized ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ.15: ವಿವಿಧತೆಯಲ್ಲಿ ಏಕತೆ ಹಾಗೂ ಶಾಂತಿಯ ತೋಟವಾಗಿರುವ ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವದ ಸಂಭ್ರಮ ಮನೆಮಾಡಿದ್ದು, ಇದೇ…

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*

ಸೆಪ್ಟೆಂಬರ್ 15, 2026

*ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*

ಸೆಪ್ಟೆಂಬರ್ 15, 2026

*ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಸೆಪ್ಟೆಂಬರ್ 15, 2026

*ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*

ಸೆಪ್ಟೆಂಬರ್ 15, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ 54.60 ರೂ. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.