Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ಕ್ರೀಡಾಕೂಟ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ಕ್ರೀಡಾಕೂಟ

ಏಪ್ರಿಲ್ 12, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ, NEWS DESK ಏ.12 :ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಮುನ್ನಡೆಯುವಂತಾಗಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಇಲಾಖೆ ಸಿಬ್ಬಂದಿಗಳಿಗೆ‌ ಎರಡು ದಿನಗಳ ಕಾಲ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೊಡಗು ಜಿಲ್ಲೆ ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯದಲ್ಲಿ 3 ನೇ ಸ್ಥಾನ ಪಡೆದಿದೆ. ಇದು ಜಿಲ್ಲೆಯವರಲ್ಲಿ ಸಂತಸ ಹಾಗೂ ಹೆಮ್ಮೆಯ ತರುತ್ತದೆ. ಜತೆಗೆ ಇವರಲ್ಲಿಯೂ ಸಹ ಶೇ.35, 40 ಅಂಕ ಪಡೆದವರೂ ಇದ್ದಾರೆ. ಇಂತವರು ಶಿಕ್ಷಣ ಜತೆಗೆ ಕ್ರೀಡೆ ಸೇರಿದಂತೆ ಆಸಕ್ತ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಸವಾಲನ್ನು ಮೆಟ್ಟಿ ನಿಂತು ಮೇಲೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಸಲಹೆ ಮಾಡಿದರು.
ಕ್ರೀಡೆ ಎಂದರೆ ಕೊಡಗು, ಕೊಡಗು ಎಂದರೆ ಕ್ರೀಡೆ ಎಂಬಂತಾಗಿದೆ. ಜಿಲ್ಲೆಯಿಂದ ಅತಿ ದೊಡ್ಡ ಪ್ರಮಾಣದಲ್ಲಿ ದೇಶಕ್ಕೆ ಕ್ರೀಡಾಪಟುಗಳನ್ನು ನೀಡಿದ ಜಿಲ್ಲೆ ಕೊಡಗು ಆಗಿದೆ ಎಂದರು.
ಬೇಸಿಗೆ ಕಾಲದಲ್ಲಿ ಜಿಲ್ಲೆಯಾದ್ಯಂತ ವಿವಿಧ ಕ್ರೀಡಾಕೂಟದ ಹಬ್ಬಗಳು ಜರುಗುವುದು ವಿಶೇಷ. ಆ ನಿಟ್ಟಿನಲ್ಲಿ ಕ್ರೀಡಾ ಪರಂಪರೆಯನ್ನು ಉಳಿಸಿ, ಬೆಳೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.
ಜಿಲ್ಲೆಯ ಸಣ್ಣ ಸಣ್ಣ ಮೈದಾನಗಳಲ್ಲಿಯೂ ವಿವಿಧ ಕ್ರೀಡಾ ಚಟುವಟಿಕೆಗಳು ನಡೆಯುತ್ತವೆ. ಇದರಿಂದ ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ಸಹಕಾರಿಯಾಗಿದೆ ಎಂದು
ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ನುಡಿದರು.
ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ, ಆದರೆ ಭಾಗವಹಿಸುವುದು ಅತಿಮುಖ್ಯ. ಸಣ್ಣ ವಯಸ್ಸಿನಲ್ಲಿಯೇ ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡರೆ ಉತ್ತಮ ಪ್ರಜೆಗಳಾಗಿ ಬೆಳೆಯಬಹುದು ಎಂದು ಎ.ಎಸ್.ಪೊನ್ನಣ್ಣ ಅವರು ವಿವರಿಸಿದರು.
ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಕಾಲೇಜುಗಳಲ್ಲಿಯೂ ಸಹ ಮಾನಸಿಕತೆಗೆ ಹೆಚ್ಚಿನ ಒತ್ತು ನೀಡುತ್ತಾರೆ. ಹಾಗೆಯೇ ಮಕ್ಕಳೇ ಹೆಚ್ಚಿನ ಒತ್ತಡ ತೆಗೆದುಕೊಂಡು ಮುನ್ನಡೆಯುತ್ತಿರುವುದನ್ನು ಕಾಣುತ್ತೇವೆ ಎಂದರು.
ಪ್ರತಿಯೊಬ್ಬರಿಗೂ ಮಾನಸಿಕ ಮತ್ತು ದೈಹಿಕ ಆರೋಗ್ಯ ಅತ್ಯಗತ್ಯ, ಆ ನಿಟ್ಟಿನಲ್ಲಿ ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಅರುಣ್ ಕುಮಾರ್ ಅವರು ಮಾತನಾಡಿ ಜಿಲ್ಲಾ ಕೇಂದ್ರದಲ್ಲಿ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಜಾಗ ಇದ್ದು, ಸರ್ಕಾರದಿಂದ ಅಗತ್ಯ ಅನುದಾನ ಬಿಡುಗಡೆಗೆ ಸಹಕಾರ ಮಾಡುವಂತೆ ಶಾಸಕರಲ್ಲಿ ಮನವಿ ಮಾಡಿದರು.
ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಪದ್ಧತಿಯಲ್ಲಿ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದು, ಇವರಿಗೆ ಸೇವಾ ಭದ್ರತೆ ಒದಗಿಸುವಂತಾಗಬೇಕು. ಹಾಗೆಯೇ ಮಿನಿ ಆರೋಗ್ಯ ಸೌಧ ನಿರ್ಮಾಣಕ್ಕೆ ಸಹಕರಿಸುವಂತೆ ಇದೇ ಸಂದರ್ಭದಲ್ಲಿ ಅರುಣ್ ಕುಮಾರ್ ಮನವಿ ಮಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಾಧಿಕಾರಿಗಳಾದ ಡಾ‌.ಆನಂದ್, ಡಾ.ಸನತ್ ಕುಮಾರ್, ಆಹಾರ ಸುರಕ್ಷತೆ ಅಧಿಕಾರಿ ಡಾ.ಅನಿಲ್ ಧವನ್, ಡಾ.ಇಂಧೂದರ, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ತಿಮ್ಮಯ್ಯ, ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಪಾಲಾಕ್ಷ, ನವೀನ್, ದೇವರಾಜು, ಶ್ರೀನಾಥ್, ಮಂಜುನಾಥ್ ಇತರರು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.