Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ*:: *ಸರ್ಕಾರಿ ಶಾಲೆಗಳ ಪ್ರಗತಿಗೆ ಸಮುದಾಯದ ಪಾತ್ರ ಮುಖ್ಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ*:: *ಸರ್ಕಾರಿ ಶಾಲೆಗಳ ಪ್ರಗತಿಗೆ ಸಮುದಾಯದ ಪಾತ್ರ ಮುಖ್ಯ

ಏಪ್ರಿಲ್ 13, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಕೂಡಿಗೆ/ಕುಶಾಲನಗರ, NEWS DESK ಏ.13: ಸರ್ಕಾರಿ ಶಾಲೆಗಳ ಪ್ರಗತಿಯಲ್ಲಿ ಪೋಷಕರು, ಗ್ರಾಮಸ್ಥರು ಹಾಗೂ ಸಮುದಾಯದ ಪಾತ್ರವು ಅತ್ಯಂತ ಪ್ರಮುಖವಾದುದು ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿಯೂ ಆದ ಗೈಡ್ಸ್ ಕ್ಯಾಪ್ಟನ್ ಕೆ.ಟಿ.ಸೌಮ್ಯ ಹೇಳಿದರು.
ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ( ಕೂಡ್ಲೂರು ) ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಸಮುದಾಯದತ್ತ ಶಾಲಾ ಕಾರ್ಯಕ್ರಮ ಹಾಗೂ ಪೋಷಕರ ಸಭೆಯಲ್ಲಿ ಸರ್ಕಾರಿ ಶಾಲೆಗಳ ಪ್ರಗತಿಗೆ ಶಾಲಾ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ ( ಎಸ್ ಡಿ ಎಂ ಸಿ ) ಯೊಂದಿಗೆ ಪೋಷಕರು, ಗ್ರಾಮಸ್ಥರು ಮತ್ತು ಹಳೆಯ ವಿದ್ಯಾರ್ಥಿಗಳು ಹೆಚ್ಚಿನ ಪ್ರೋತ್ಸಾಹ ಹಾಗೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಣ ಹಾಗೂ ಆದುನಿಕ ತಂತ್ರಜ್ಞಾನ ಬಳಕೆ ಮೂಲಕ ಮಕ್ಕಳಿಗೆ ಸ್ಮಾರ್ಟ್ ಕ್ಲಾಸ್ ತರಗತಿಗಳನ್ನುನಡೆಸುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದರು. ಶಾಲೆಯ ಮೂಲಸೌಕರ್ಯ ಅಭಿವೃದ್ಧಿ, ಮಕ್ಕಳ ದಾಖಲಾತಿ ಹೆಚ್ಚಳ, ಶಾಲಾ ಪರಿಸರ ಅಭಿವೃದ್ಧಿ ಸೇರಿದಂತೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಹಾಗೂ ಶಾಲಾಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡುವ ಮೂಲಕ ಸರ್ಕಾರಿ ಶಾಲೆಗಳ ಉಳಿವು ಹಾಗೂ ಬೆಳವಣಿಗೆಗೆ ಸಮುದಾಯ ಸಹಕರಿಸಬೇಕು ಎಂದು ಶಿಕ್ಷಕಿ ಸೌಮ್ಯ ಪೋಷಕರಲ್ಲಿ ಮನವಿ ಮಾಡಿದರು. ಸರ್ಕಾರಿ ಪ್ರೌಢಶಾಲೆಗಳಲ್ಲಿ ವೈವಿಧ್ಯಮಯ ಕಾರ್ಯಕ್ರಮದ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಸನ ಹಾಗೂ ಕಲಿಕೆಗೆ ತಜ್ಞರಿಂದ ಮಾಹಿತಿ ಕೊಡಿಸುವುದು, ವಿಜ್ಞಾನ ಕಲಿಕೆಗೆ ವಿಜ್ಞಾನ ಪ್ರಯೋಗಾಲಯ ಸ್ಥಾಪನೆ, ಕಂಪ್ಯೂಟರ್‌ ಲ್ಯಾಬ್‌ ನಿರ್ಮಾಣ ಸೇರಿದಂತೆ ಪರಿಸರ ಚಟುವಟಿಕೆಗಳು, ಯೋಗ ಶಿಕ್ಷಣ, ಹೆಣ್ಣು ಮಕ್ಕಳಿಗೆ ಕರಾಟೆ ಕಲಿಕಾಭ್ಯಾಸ ಸೇರಿದಂತೆ ಮಕ್ಕಳಲ್ಲಿ ವಿವಿಧ ಕೌಶಲ್ಯಗಳನ್ನು ಹೆಚ್ಚಿಸಿ ಅವರಲ್ಲಿ ಆತ್ಮವಿಶ್ವಾಸ ಹಾಗೂ ಸಂಸ್ಕಾರ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಸೌಮ್ಯ ಹೇಳಿದರು.
ಸರ್ಕಾರಿ ಶಾಲೆ ಉಳಿವಿನಲ್ಲಿ ಗ್ರಾಮಸ್ಥರ ಪಾತ್ರ ಬಹುಮುಖ್ಯ ಸರ್ಕಾರಿ ಶಾಲೆಗಳು ಗ್ರಾಮೀಣ ಭಾರತದ ಶಿಕ್ಷಣದ ಬೆನ್ನೆಲುಬು. ಈ ಶಾಲೆಗಳಲ್ಲಿ ಇಂದಿನ‌ದಿನಮಾನದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವೃದ್ಧಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಆಕರ್ಷಣೀಯವಾಗಿ ಮಾಡಲು ಶಾಲಾ ಶಿಕ್ಷಣ ಇಲಾಖೆ‌ ಹಲವು ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸಿದೆ. ಇವುಗಳ ಅನುಷ್ಠಾನಕ್ಕೆ ಶಾಲೆಯ ಹಿರಿಯ ವಿದ್ಯಾರ್ಥಿಗಳು, ಪೋಷಕರು, ದಾನಿಗಳು ಹಾಗೂ ಸಮುದಾಯದ ಸಹಕಾರ ಬೇಕು ಎಂದು ಸೌಮ್ಯ ಹೇಳಿದರು. ಸರ್ಕಾರಿ ಶಾಲೆಗಳಲ್ಲಿ ಗ್ರಾಮೀಣ ಪ್ರದೇಶದ ಬಡ ಮಕ್ಕಳಿಗೆ ಗುಣಾತ್ಮಕ ಶಿಕ್ಷಣವನ್ನು ನೀಡಿ ಮಕ್ಕಳ ವ್ಯಕ್ತಿತ್ವವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ವಿವಿಧ ಯೋಜನೆ/ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದರು.
ಪೋಷಕರಾದ ಕೆ.ಜೆ.ಅನಿತಾ ಮತ್ತಿತರರು ಮಾತನಾಡದರು. ಶಾಲಾ ಸಿಬ್ಬಂದಿ ಎಂ.ಉಷಾ ಹಾಗೂ ವಿದ್ಯಾರ್ಥಿ- ಪೋಷಕರು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.