
ಮಡಿಕೇರಿ ಏ.13 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.13ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ಕೊಲ್ಲಿರ (ಚೆಯ್ಯಂಡಾಣೆ) ಮತ್ತು ಕೂತಂಡ ತಂಡಗಳ ನಡುವಿನ ಪಂದ್ಯದಲ್ಲಿ ಕೂತಂಡಕ್ಕೆ 10 ವಿಕೆಟ್ ಗಳ ಭರ್ಜರಿ ಜಯ ಲಭಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಕೊಲ್ಲಿರ 6 ಓವರ್‍ಗಳಲ್ಲಿ 9 ವಿಕೆಟ್ ನಷ್ಟಕ್ಕೆ 20 ರನ್ ಗಳನ್ನು ಗಳಿಸಿತು. ಕೂತಂಡ ಕೇವಲ 1.4 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 23 ರನ್ ಗಳನ್ನು ಸೇರಿಸಿ ವಿಜಯ ಸಾಧಿಸಿತು. ಅಲ್ಲಂಗಡ ಮತ್ತು ಬಾಚಳ್ಳಿರ ನಡುವಿನ ಪಂದ್ಯದಲ್ಲಿ ಅಲ್ಲಂಗಡ ತಂಡಕ್ಕೆ 8 ವಿಕೆಟ್ ಗಳ ಜಯ ದೊರೆಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾಚಳ್ಳಿರ 6 ಓವರ್‍ಗಳಲ್ಲಿ 5 ವಿಕೆಟ್ ನಷ್ಟಕ್ಕೆ 45 ರನ್ ಗಳನ್ನು ಸೇರಿಸಿತು. ಅಲ್ಲಂಗಡ ತಂಡ 2 ವಿಕೆಟ್ ನಷ್ಟಕ್ಕೆ 49 ರನ್ ಗಳನ್ನು ಗಳಿಸಿ ಗೆಲುವು ಸಾಧಿಸಿತು. ತೆಕ್ಕಡ ಮತ್ತು ಕೊಟ್ಟುಕತ್ತೀರ ನಡುವಿನ ಪಂದ್ಯದಲ್ಲಿ ತೆಕ್ಕಡ ತಂಡಕ್ಕೆ 10 ವಿಕೆಟ್‍ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೊಟ್ಟುಕತ್ತೀರ ತಂಡ 6 ಓವರ್‍ಗಳಲ್ಲಿ 7 ವಿಕೆಟ್ ನಷ್ಟಕ್ಕೆ 34 ರನ್ ಗಳನ್ನು ಗಳಿಸಿತು. ತೆಕ್ಕಡ ತಂಡ 3 ಓವರ್‍ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 38 ರನ್ ಗಳನ್ನು ಸೇರಿಸಿ ಪಂದ್ಯವನ್ನು ಗೆದ್ದುಕೊಂಡಿತು. ಅಲ್ಲಪಂಡ ಮತ್ತು ನಂದಿನೆರವಂಡ ನಡುವಿನ ಪಂದ್ಯದಲ್ಲಿ ನಂದಿನೆರವಂಡ ತಂಡಕ್ಕೆ 6 ವಿಕೆಟ್‍ಗಳ ಜಯ ದೊರೆಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಲ್ಲಪಂಡ ತಂಡ 6 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 70 ರನ್ ಗಳನ್ನು ಗಳಿಸಿತು. ನಂದಿನೆರವಂಡ 5.3 ಓವರ್‍ಗಳಲ್ಲಿ 4 ವಿಕೆಟ್ ನಷ್ಟಕ್ಕೆ 74 ರನ್ ಗಳನ್ನು ಸೇರಿಸಿ ಜಯ ಸಾಧಿಸಿತು. ಹಂಚೆಟ್ಟಿರ ಮತ್ತು ವಾಂಚಿರ ತಂಡಗಳ ನಡುವಿನ ಪಂದ್ಯದಲ್ಲಿ ಹಂಚೆಟ್ಟಿರ ತಂಡಕ್ಕೆ 10 ವಿಕೆಟ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವಾಂಚಿರ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 26 ರನ್ ಗಳನ್ನು ಗಳಿಸಿತು. ಹಂಚೆಟ್ಟಿರ ತಂಡ 2 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 28 ರನ್ ಗಳನ್ನು ಸೇರಿಸಿ ಗೆಲುವು ಸಾಧಿಸಿತು. ಮಂಡೆಯಂಡ (ಮಾದಾಪುರ) ಮತ್ತು ಪಳೆಯಂಡ ನಡುವಿನ ಪಂದ್ಯದಲ್ಲಿ ಮಂಡೆಯಂಡ ತಂಡ 20 ರನ್ ಗಳಿಂದ ವಿಜಯ ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಮಂಡೆಯಂಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 87 ರನ್ ಗಳನ್ನು ಗಳಿಸಿತು. ಪಳೆಯಂಡ 3 ವಿಕೆಟ್ ನಷ್ಟಕ್ಕೆ 67 ರನ್ ಗಳನ್ನು ಸೇರಿಸಿ ಸೋಲೊಪ್ಪಿಕೊಂಡಿತು. *ಮೈದಾನ 2* ಕೋಡಿರ ಮತ್ತು ಐಲಪಂಡ ತಂಡಗಳ ನಡುವಿನ ಪಂದ್ಯದಲ್ಲಿ ಐಲಪಂಡ 11 ರನ್ ಗಳಿಂದ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಐಲಪಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 77 ರನ್ ಗಳನ್ನು ಸೇರಿಸಿತು. ಕೋಡಿರ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 66 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ಕಾಳಪಂಡ ಮತ್ತು ಕನ್ನಿಗಂಡ ತಂಡಗಳ ನಡುವಿನ ಪಂದ್ಯದಲ್ಲಿ ಕನ್ನಿಗಂಡ 9 ವಿಕೆಟ್ ಗಳ ಗೆಲುವು ದಾಖಲಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಕಾಳಪಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 51 ರನ್ ಗಳನ್ನು ಗಳಿಸಿತು. ಕನ್ನಿಗಂಡ ಕೇವಲ 2.3 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 56 ರನ್ ಗಳನ್ನು ಸೇರಿಸಿ ಜಯ ಕಂಡಿತು. ಮುದ್ದಂಡ ಮತ್ತು ಬಲ್ಯಮೇದಿರ ನಡುವಿನ ಹಣಾಹಣಿಯಲ್ಲಿ ಬಲ್ಯಮೇದಿರ 6 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮುದ್ದಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 60 ರನ್ ಗಳನ್ನು ಸೇರಿಸಿತು. ಬಲ್ಯಮೇದಿರ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 61 ರನ್ ಗಳನ್ನು ಗಳಿಸಿ ಜಯ ಸಾಧಿಸಿತು. ನಾಗಚೆಟ್ಟಿರ ಮತ್ತು ಮುಕ್ಕಾಟಿರ (ಕುಂಜಿಲಗೇರಿ) ತಂಡಗಳ ನಡುವಿನ ಪಂದ್ಯದಲ್ಲಿ ಮುಕ್ಕಾಟಿರ ತಂಡಕ್ಕೆ 9 ವಿಕೆಟ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನಾಗಚೆಟ್ಟಿರ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 56 ರನ್ ಗಳನ್ನು ಸೇರಿಸಿತು. ಮುಕ್ಕಾಟಿರ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 57 ರನ್ ಗಳನ್ನು ಗಳಿಸಿ ಗೆಲುವಿನ ನಗು ಬೀರಿತು. ಮುಕ್ಕಾಟಿರ (ಮೂವತ್ತೊಕ್ಲು) ಮತ್ತು ನಾಪಂಡ ನಡುವಿನ ಪಂದ್ಯದಲ್ಲಿ ಮುಕ್ಕಾಟಿರ ತಂಡ ಭರ್ಜರಿ 10 ವಿಕೆಟ್ ಗÀಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನಾಪಂಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 56 ರನ್ ಗಳನ್ನು ಸೇರಿಸಿತು. ಮುಕ್ಕಾಟಿರ 3.3 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 57 ರನ್ ಗಳನ್ನು ಗಳಿಸಿ ಗೆಲುವಿನ ನಗು ಬೀರಿತು. ಮರುವಂಡ ಮತ್ತು ಮಂದಂಗಡ ತಂಡಗಳ ನಡುವಿನ ಪಂದ್ಯದಲ್ಲಿ ಮಂದಂಗಡ ತಂಡಕ್ಕೆ 63 ರನ್ ಗಳ ಜಯ ಲಭಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮಂದಂಗಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 114 ರನ್ ಗಳನ್ನು ಸೇರಿಸಿತು. ಮರುವಂಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 52 ರನ್ ಗಳನ್ನಷ್ಟೇ ಗಳಿಸಿ ಸೋಲೊಪ್ಪಿಕೊಂಡಿತು.








