
ಮಡಿಕೇರಿ ಏ.14 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.14ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ತೆನ್ನಿರ ಮತ್ತು ಮುಕ್ಕಾಟಿರ (ಬೇತ್ರಿ) ನಡುವಿನ ಪಂದ್ಯದಲ್ಲಿ ಮುಕ್ಕಾಟಿರ 10 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ತೆನ್ನಿರ 6 ಓವರ್‍ಗಳಲ್ಲಿ 4 ವಿಕೆಟ್ ನಷ್ಟಕ್ಕೆ 54 ರನ್ ಗಳನ್ನು ಗಳಿಸಿತು. ಮುಕ್ಕಾಟಿರ ಯಾವುದೇ ವಿಕೆಟ್ ನಷ್ಟವಿಲ್ಲದೆ 4.4 ಓವರ್ ಗಳಲ್ಲಿ 55 ರನ್ ಗಳನ್ನು ಸೇರಿಸಿ ಗೆಲುವಿನ ನಗೆ ಬೀರಿತು. ಮಿನ್ನಂಡ ಮತ್ತು ಚೌರಿರ ತಂಡಗಳ ನಡುವಿನ ಹಣಾಹಣಿಯಲ್ಲಿ ಸೂಪರ್ ಓವರ್ ನಲ್ಲಿ ಚೌರಿರ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಿಣ್ಣಂಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 50 ಮತ್ತು ಇದನ್ನು ಬೆನ್ನಟ್ಟಿದ ಚೌರಿರ 6 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 50 ರನ್ ಗಳನ್ನು ಗಳಿಸಿತು. ಸಮಬಲವಾದ ಹಿನ್ನೆಲೆಯಲ್ಲಿ ನಡೆದ ಸೂಪರ್ ಓವರ್ ನಲ್ಲಿ ಚೌರಿರ 1 ಓವರ್ ನಲ್ಲಿ 1 ವಿಕೆಟ್ ನಷ್ಟಕ್ಕೆ 20 ರನ್ ಗಳನ್ನು ಸೇರಿಸಿತು. ಮಿಣ್ಣಂಡ 1 ವಿಕೆಟ್ ನಷ್ಟಕ್ಕೆ 18 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ಕರ್ತಚ್ಚಿರ ಮತ್ತು ಬಾರಿಯಂಡ ನಡುವಿನ ಪಂದ್ಯದಲ್ಲಿ ವಾಕ್ ಓವರ್ ನಿಂದ ಬಾರಿಯಂಡ ಮುಂದಿನ ಸುತ್ತಿಗೆ ಅರ್ಹತೆ ಪಡೆಯಿತು.
ಉಡುವೆರ ಮತ್ತು ಮೇಪಾಡಂಡ ತಂಡಗಳ ನಡುವಿನ ಪಂದ್ಯದಲ್ಲಿ ಉಡುವೆರ 7 ವಿಕೆಟ್ ಗಳಿಂದ ವಿಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮೇಪಾಡಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 67 ರನ್ ಗಳನ್ನು ಗಳಿಸಿತು. ಇದನ್ನು ಬೆನ್ನಟ್ಟಿದ ಉಡುವೆರ 5 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 68 ರನ್ ಗಳನ್ನು ಸೇರಿಸಿ ಪಂದ್ಯವನ್ನು ಗೆದ್ದುಕೊಂಡಿತು. ಅಜ್ಜಮಕ್ಕಡ ಮತ್ತು ಮುಂಡಚಾಡಿರ ನಡುವಿನ ಪಂದ್ಯದಲ್ಲಿ ಮುಂಡಚಾಡಿರ 10 ವಿಕೆಟ್ ಗಳಿಂದ ಜಯ ಗಳಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಜ್ಜಮಕ್ಕಡ 6 ಓವರ್ ಗಳಲ್ಲಿ 10 ವಿಕೆಟ್ ನಷ್ಟಕ್ಕೆ 19 ರನ್ ಗಳನ್ನಷ್ಟೇ ಸೇರಿಸಿತು. ಮುಂಡಚಾಡಿರ ಕೇವಲ 1.3 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 24 ರನ್ ಗಳನ್ನು ಗಳಿಸಿ ಜಯಭೇರಿ ಬಾರಿಸಿತು. ಅಣ್ಣಳಮಾಡ (ಪೂಕಳ) ಮತ್ತು ಪಳಂಗಂಡ ತಂಡಗಳ ನಡುವಿನ ಪಂದ್ಯದಲ್ಲಿ ಅಣ್ಣಳಮಾಡ ತಂಡಕ್ಕೆ 10 ವಿಕೆಟ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಳಂಗಂಡ 6 ಓವರ್‍ಗಳಲ್ಲಿ 5 ವಿಕೆಟ್ ನಷ್ಟಕ್ಕೆ 60 ರನ್ ಗಳನ್ನು ಗಳಿಸಿತು. ಅಣ್ಣಳಮಾಡ 3.1 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 63 ರನ್ ಗಳನ್ನು ಸೇರಿಸಿ ಗೆಲುವು ಸಾಧಿಸಿತು. ಪಾಸುರ ಮತ್ತು ಮಂಡೇಪಂಡ ನಡುವಿನ ಪಂದ್ಯದಲ್ಲಿ ಮಂಡೇಪಂಡ 8 ವಿಕೆಟ್ ಗಳಿಂದ ಗೆಲುವು ದಾಖಲಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಸುರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನು ಸೇರಿಸಿತು. ಮಂಡೇಪಂಡ 5 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 63 ರನ್ ಗಳನ್ನು ಗಳಿಸಿ ಜಯ ಸಾಧಿಸಿತು.








