
ಮಡಿಕೇರಿ ಏ.14 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಮೈದಾನ 2 ರಲ್ಲಿ ಏ.14ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 2* ಅಪ್ಪುಮಣಿಯಂಡ ಮತ್ತು ಬಲ್ಲಂಡ ತಂಡಗಳ ನಡುವಿನ ಪಂದ್ಯದಲ್ಲಿ ಅಪ್ಪುಮಣಿಯಂಡ ತಂಡಕ್ಕೆ 7 ವಿಕೆಟ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಲ್ಲಂಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 70 ರನ್ ಗಳನ್ನು ಸೇರಿಸಿತು. ಅಪ್ಪುಮಣಿಯಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 73 ರನ್ ಗಳನ್ನು ಗಳಿಸಿ ಗೆಲುವು ಕಂಡಿತು. ಕಂಗಂಡ ಮತ್ತು ಚೆನಿಯಪಂಡ ನಡುವಿನ ಪಂದ್ಯದಲ್ಲಿ ಕಂಗಂಡ ತಂಡ 19 ರನ್ ಗಳ ಗೆಲುವು ದಾಖಲಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಕಂಗಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 66 ರನ್ ಗಳನ್ನು ಸೇರಿಸಿತು. ಚೆನಿಯಪಂಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 48 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ಕಾನತಂಡ ಮತ್ತು ಮುಕ್ಕಾಟಿರ (ಪುಲಿಕೋಟ್) ತಂಡಗಳ ನಡುವಿನ ಪಂದ್ಯದಲ್ಲಿ ಕಾನತಂಡ 6 ರನ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕಾನತಂಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 79 ರನ್ ಗಳನ್ನು ಸೇರಿಸಿತು. ಮುಕ್ಕಾಟಿರ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 73 ರನ್ ಗಳನ್ನು ಗಳಿಸಿ ಸೋಲು ಕಂಡಿತು. ಮೂಕಳೇರ ಮತ್ತು ಅರೆಯಡ ನಡುವಿನ ಪಂದ್ಯದಲ್ಲಿ ಮೂಕಳೇರ 30 ರನ್ ಗಳಿಂದ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮೂಕಳೇರ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 105 ರನ್ ಗಳನ್ನು ಗಳಿಸಿತು. ಅರೆಯಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 75 ರನ್ ಗಳನ್ನಷ್ಟೇ ಸೇರಿಸಿ ಸೋಲು ಅನುಭವಿಸಿತು. ಮುಕ್ಕಾಟಿರ (ಅರಪಟ್ಟು) ಮತ್ತು ಮಂಡುವಂಡ ನಡುವಿನ ಪಂದ್ಯದಲ್ಲಿ ಮಂಡುವಂಡ 54 ರನ್ ಗಳ ಅಂತರ ಜಯ ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಂಡುವಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 77 ರನ್ ಗಳನ್ನು ಗಳಿಸಿತು. ಮುಕ್ಕಾಟಿರ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 23 ರನ್ ಗಳನ್ನಷ್ಟೇ ಸೇರಿಸಿ ಸೋಲು ಕಂಡಿತು. ಕಳಕಂಡ ಮತ್ತು ತಾತಂಡ ನಡುವಿನ ಪಂದ್ಯದಲ್ಲಿ ಕಳಕಂಡ ವಾಕ್ ಓವರ್ ಮೂಲಕ ಮುಂದಿನ ಸುತ್ತಿಗೆ ಅರ್ಹತೆ ಪಡೆಯಿತು. ಸಿದ್ದಂಡ ಮತ್ತು ಪೊರುಕೊಂಡ ನಡುವಿನ ಹಣಾಹಣಿಯಲ್ಲಿ ಸಿದ್ದಂಡ 6 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪೊರುಕಂಡ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 50 ರನ್ ಗಳನ್ನು ಸೇರಿಸಿತು. ಸಿದ್ದಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 54 ರನ್ ಗಳನ್ನು ಗಳಿಸಿ ಜಯ ಸಾಧಿಸಿತು.







