Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಹೊಸಪಟ್ಟಣದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಸವೇಶ್ವರ ಕನ್ನಂಬಾಡಮ್ಮ ದೇವರ ಪೂಜೋತ್ಸವ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಹೊಸಪಟ್ಟಣದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಸವೇಶ್ವರ ಕನ್ನಂಬಾಡಮ್ಮ ದೇವರ ಪೂಜೋತ್ಸವ

ಏಪ್ರಿಲ್ 14, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಕುಶಾಲನಗರ ಏ.14 NEWS DESK : ದೇವಾಲಯ ಹಾಗೂ ಮಠ ಮಂದಿರಗಳು ಮನುಷ್ಯನ ಅಂತರಂಗ ಶುದ್ದಿಯ ಆಲಯಗಳು ಎಂದು ಅರಮೇರಿ ಕಳಂಚೇರಿ ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.  ಹೊಸಪಟ್ಟಣ ಗ್ರಾಮದ ಶ್ರೀ ಬಸವೇಶ್ವರ ಹಾಗೂ ಕನ್ನಂಬಾಡಮ್ಮ ದೇವರ ವಾರ್ಷಿಕ ಪೂಜೋತ್ಸವ ದಲ್ಲಿ ಭಾಗಿಯಾಗಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಮನುಷ್ಯ ಏನೆಲ್ಲಾ ಗಳಿಸಿದರೂ ಕೂಡ
ಮಾನಸಿಕ ಶಾಂತಿ ನೆಮ್ಮದಿ ಪಡೆಯಲು ದೇವಾಲಯಗಳಿಗೆ ಬರಬೇಕಿದೆ. ಪೂರ್ವಜರು ಆಚರಿಸಿಕೊಂಡು ಬಂದ ಗ್ರಾಮೀಣ ಹಬ್ಬಗಳು, ದೇವರ ಪೂಜೋತ್ಸವಗಳನ್ನು ಮುಂದಿನ ಪೀಳಿಗೆಗೂ ಜತನದಿಂದ ಒಯ್ಯುವುದೇ ಭಾರತೀಯ ಸಂಸ್ಕೃತಿಯ ಸೌಂದರ್ಯ ಎಂದು ಶ್ರೀಗಳು ಹೇಳಿದರು.
ಸೋಮವಾರ ಸಂಜೆಯಿಂದ ಆರಂಭವಾದ ದೇವತಾ ಪೂಜೋತ್ಸವ ಮಂಗಳವಾರ ಮಧ್ಯಾಹ್ನ ಸಮಾಪ್ತಿಗೊಂಡಿತು. ಮಂಗಳವಾರ ಬೆಳಗ್ಗೆ ವಾದ್ಯಮೇಳ, ಅಲಂಕೃತ ದೇವರುಗಳ ಪಲ್ಲಕ್ಕಿಯೊಂದಿಗೆ ಗ್ರಾಮದ ಕಾವೇರಿ ನದಿಗೆ ತೆರಳಿ ಗಂಗಾ ಸ್ನಾನ ನೆರವೇರಿಸಲಾಯಿತು. ಇದೇ ಸಂದರ್ಭ ಹೊಳೆನರಸೀಪುರ ತಾಲ್ಲೂಕಿನ ಉದ್ದೂರು ಗ್ರಾಮದ ವೀರಗಾಸೆ ಕಲಾವಿದ ರಾದ ರವಿಕುಮಾರ ತಂಡದಿಂದ ಆಕರ್ಷಕವಾದ ವೀರಭದ್ರ ನೃತ್ಯ ಭಕ್ತರನ್ನು ಆಕರ್ಷಿಸಿತು.
ಬಳಿಕ ಮಧ್ಯಾಹ್ನ 12 ಗಂಟೆಗೆ ದೇವಾಲಯದ ಮುಂಬದಿ ಅಳವಡಿಸಿದ್ದ ಕೊಂಡೋತ್ಸವದ ಪೂಜೆಯ ಬಳಿಕ ದೇವತಾ ಮೂರ್ತಿಗಳ ಉತ್ಸವ ಗಳನ್ನು ಹೊತ್ತ ಭಕ್ತರು ಬರಿಗಾಲಲ್ಲಿ ಕೆಂಡ ತುಳಿದು ಭಕ್ತಿ ಸಮರ್ಪಿಸಿದರು. ನಂತರ ಮಹಾಮಂಗಳಾರತಿ ಯೊಂದಿಗೆ ಪ್ರಸಾದ ಹಾಗೂ ಅನ್ನಸಂತರ್ಪಣೆ ನಡೆಯಿತು.
ಮೈಸೂರಿನ ಕೆ‌.ಎಸ್.ದಿನೇಶ್ ಶಾಸ್ತ್ರಿ ನೇತೃತ್ವದ ತಂಡ ದೇವಾಲಯದ ಧಾರ್ಮಿಕ ವಿಧಿಗಳನ್ನು ನಡೆಸಿತು. ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷೆ ಪೂರ್ಣಿಮಾ ಶಿವಕುಮಾರ್, ಉಪಾಧ್ಯಕ್ಷ ಅಯ್ಯಂಡ್ರ ಜಯಾನಂದ, ಕಾರ್ಯದರ್ಶಿ ತೇಜಸ್, ಖಜಾಂಚಿ ಸುಖೇಶ್, ಅರ್ಚಕ ಎಸ್.ಎಸ್.ಜಯರಾಜು, ನಿರ್ದೇಶಕರಾದ ತುಂತಜ್ಜಿರ ಡಾಲೇಶ್, ನೇಣಿರ ನವೀನ್ ಕುಮಾರ್, ಎಸ್.ಎಸ್.ಚಂದ್ರಶೇಖರ್, ಹೆಚ್.ಆರ್.ಶಿವಕುಮಾರ್, ಹೆಚ್.ವಿ.ಚಂದ್ರು, ಮಾಡಂಬಿ ಷಣ್ಮುಖ, ಎಂ.ಆರ್.ಮಹೇಶ್, ಶಿವಕುಮಾರ್ ಮೊದಲಾದವರಿದ್ದರು. ಹೆಜ್ಜೇನು ದಾಳಿ ಓಡಿದ ಭಕ್ತರು : ಗಂಗಾ ಪೂಜೆ ಸಂದರ್ಭ ಕಾವೇರಿ ನದಿಯಲ್ಲಿ ದಿಢೀರನೆ ಪ್ರತ್ಯಕ್ಷಗೊಂಡ ಹೆಜ್ಜೇನು ಹಿಂಡು ಭಕ್ತರಿಗೆ ಕಚ್ಚಿ ಗಾಯಗೊಳಿಸಿದ ಪ್ರಸಂಗ ನಡೆಯಿತು. ಅದೃಷ್ಟವಶಾತ್ ಯಾರಿಗೂ ಮಾರಣಾಂತಿಕ ಗಾಯವಾಗಿಲ್ಲ. ಹೆಜ್ಜೇನು ಹಿಂಡು ಕಂಡೊಡನೆ ಭಕ್ತರು ಓಡಿ ಹೋಗಿ ಪಾರಾದರು ಎಂದು ದೇವಾಲಯ ಸಮಿತಿ ಕಾರ್ಯದರ್ಶಿ ತೇಜಸ್ ಹೇಳಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.