Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡವ ನ್ಯಾಷನಲ್ ಕೌನ್ಸಿಲ್ ನಿಂದ ಸಂಭ್ರಮದ ಎಡ್ಮ್ಯಾರ್ 1 ಆಚರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡವ ನ್ಯಾಷನಲ್ ಕೌನ್ಸಿಲ್ ನಿಂದ ಸಂಭ್ರಮದ ಎಡ್ಮ್ಯಾರ್ 1 ಆಚರಣೆ

ಏಪ್ರಿಲ್ 14, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಏ.14 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಆದಿಮಸಂಜಾತ ಏಕ-ಜನಾಂಗೀಯ ಪ್ರಕೃತಿ ಆರಾಧಕ ಕೊಡವರ ಹೊಸ ವರ್ಷದ ದಿನ ಎಡ್ಮ್ಯಾರ್ 1 ನ್ನು ಸಂಭ್ರಮದಿoದ ಆಚರಿಸಿತು. ಇಂದು ಮುಂಜಾನೆ ಬೆಂಗ್ನಾಡು ಗ್ರಾಮದ ಬೆಟ್ಟತ್ತೂರಿನಲ್ಲಿರುವ ಕುಪದೀರ ಎನ್.ಮೋಹನ್ ಅವರ ಭತ್ತದ ಗದ್ದೆಯಲ್ಲಿ ಭೂಮಿ ತಾಯಿಗೆ ಧಾರ್ಮಿಕ ಪೂಜೆಯನ್ನು ಸಲ್ಲಿಸಲಾಯಿತು. ಕೆಂಪಯ್ಯ ಹಾಗೂ ಕರಿಯ ಎಂಬ ಹೆಸರಿನ ಜೋಡೆತ್ತುಗಳ ಸಹಾಯದಿಂದ ಸಿ.ಎನ್.ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಸಾಂಪ್ರದಾಯಿಕ ಉಳುಮೆ, ನೇಗಿಲು ಹೊಡೆಯುವ ವಿಧಿಯನ್ನು ನೆರವೇರಿಸಿದರು. ಭೂತಾಯಿಗೆ ನಮಸ್ಕರಿಸುವ ಮೂಲಕ ಗೌರವ ಸಲ್ಲಿಸಿದರು. ಈ ಧಾರ್ಮಿಕ ಆಚರಣೆಗಳು ಕೊಡವ ಬುಡಕಟ್ಟು ಜನಾಂಗಕ್ಕೆ ಮಣ್ಣಿನೊಂದಿಗಿರುವ ಅವಿನಾಭಾವ ಸಂಬoಧವನ್ನು ಸಾಕ್ಷೀಕರಿಸುತ್ತದೆ ಎಂದು ಎನ್.ಯು.ನಾಚಪ್ಪ ತಿಳಿಸಿದರು. ಕೊಡವ ಕ್ಯಾಲೆಂಡರ್ ಪಂಚಾoಗದ ಪ್ರಕಾರ ಕೊಡವರ ಹೊಸ ವರ್ಷದ ದಿನವನ್ನು ಎಡ್ಮ್ಯಾರ್ 1 ರಂದು ಅಂದರೆ ಗ್ರೆಗೋರಿಯನ್ ಕ್ಯಾಲೆಂಡರ್ ನ ಏಪ್ರಿಲ್ 14 ರಂದು ಆಚರಿಸಲಾಗುತ್ತದೆ. ಕೊಡವರು ತಮ್ಮ ಸಾಂಪ್ರದಾಯಿಕ ಪದ್ಧತಿಗಳನ್ನು ಪಾಲಿಸುತ್ತಾರೆ, ಎತ್ತುಗಳ ಮೂಲಕ ಭತ್ತದ ಗದ್ದೆಯನ್ನು ಉಳುವ ಕಾರ್ಯವು ಅವರ ಪರಂಪರೆ ಮತ್ತು ಭೂಮಿಯೊಂದಿಗಿನ ಬಲವಾದ ಸಂಬoಧವನ್ನು ತೋರಿಸುತ್ತದೆ. ಕೊಡವರ ವಿಶಿಷ್ಟ ಸಾಂಸ್ಕೃತಿಕ ಸಂಪ್ರದಾಯಗಳು ಮತ್ತು ಆಚರಣೆಗಳು ಆಕರ್ಷಕವಾಗಿವೆ. ಕೊಡವ ಹೊಸ ವರ್ಷದ ಶುಭ ದಿನವಾದ ಎಡ್ಮ್ಯಾರ್ 1 ರಂದು ಎತ್ತುಗಳಿಂದ ಗದ್ದೆ ಉಳುವ ವಿಧಿಯು ಒಂದು ಮಹತ್ವದ ಪ್ರಕ್ರಿಯೆಯಾಗಿದೆ ಎಂದು ಹೇಳಿದರು. ಕೊಡವ ಜನಾಂಗೀಯ ಸಮುದಾಯವು ಸೌರ ಕ್ಯಾಲೆಂಡರ್ ಅನ್ನು ಅನುಸರಿಸುತ್ತದೆ. ಸಿ.ಎನ್.ಸಿ ಪ್ರಾರಂಭವಾದಾಗಿನಿoದ, ಕೊಡವರ ಅಸ್ತಿತ್ವದ ಬಗ್ಗೆ ವಿಶ್ವಕ್ಕೆ ಅರಿವು ಮೂಡಿಸಲು ಮತ್ತು ಕೊಡವ ಜನಾಂಗದ ವಿಶಿಷ್ಟ ಸಂಸ್ಕೃತಿಯನ್ನು ವಿಶ್ವ ಸಮುದಾಯಕ್ಕೆ ಪ್ರದರ್ಶಿಸಲು, ಆ ಮೂಲಕ ವಿಶ್ವಸಂಸ್ಥೆಯ (UNO) ಮನ್ನಣೆ ಪಡೆಯಲು ಹಾಗೂ ಸಾಂವಿಧಾನಿಕ ಭರವಸೆಯ ಮೂಲಕ ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಮತ್ತು ಸಂರಕ್ಷಿಸಲು ಕೊಡವ ಹೊಸ ವರ್ಷದ ದಿನ – ಎಡ್ಮ್ಯಾರ್ 1 ಸೇರಿದಂತೆ ಎಲ್ಲಾ ಕೊಡವ ಜಾನಪದ ಸಾಂಪ್ರದಾಯಿಕ ಹಬ್ಬಗಳನ್ನು ಸಾರ್ವಜನಿಕವಾಗಿ ಆಚರಿಸುತ್ತಾ ಬಂದಿದ್ದೇವೆ ಎಂದು ಎನ್.ಯು.ನಾಚಪ್ಪ ವಿವರಿಸಿದರು.
*ಬೇಡಿಕೆಗಳ ಮಂಡನೆ* ಸoವಿಧಾನದ ವಿಧಿ 244, 371 ಮತ್ತು 6ನೇ ಹಾಗೂ 8ನೇ ಅನುಸೂಚಿಯ ಅಡಿಯಲ್ಲಿ ಕೊಡವನಾಡು ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತ ಹಾಗೂ ಆದಿಮಸಂಜಾತ ಏಕ-ಜನಾಂಗೀಯ ಸಮುದಾಯಕ್ಕೆ ಆಂತರಿಕ ರಾಜಕೀಯ ಸ್ವಯಂ ನಿರ್ಣಯದ ಹಕ್ಕು.
ಕೊಡವ ಭೂಪ್ರದೇಶದ ಆದಿಮ ಜನಾಂಗೀಯ ಸಮುದಾಯವೆಂದು ಅಂತರರಾಷ್ಟ್ರೀಯ ಒಪ್ಪಂದದ ಅಡಿಯಲ್ಲಿ ಆದಿಮ ಕಿರು ಜನಾಂಗೀಯ ಕೊಡವರಿಗೆ ವಿಶ್ವಸಂಸ್ಥೆಯ (UN) ಮನ್ನಣೆ.ಸಮಗ್ರ ಸಬಲೀಕರಣಕ್ಕಾಗಿ ಅತ್ಯಲ್ಪ ಸಂಖ್ಯಾತ ಆದಿಮ ಏಕ-ಜನಾಂಗೀಯ ಪ್ರಕೃತಿ ಆರಾಧಕ ಕೊಡವ ಸಮುದಾಯವನ್ನು ನಮ್ಮ ಸಂವಿಧಾನದ ವಿಧಿ 340 ಮತ್ತು 342ರ ಅಡಿಯಲ್ಲಿ ಎಸ್‌ಟಿ (ST) ಪಟ್ಟಿಯಲ್ಲಿ ವರ್ಗೀಕರಿಸಬೇಕು.ಕೊಡವ ಬುಡಕಟ್ಟಿನ ಮಾತೃಭಾಷೆಯಾದ ಶಾಸ್ತ್ರೀಯ ಆದಿಮ “ಕೊಡವ ತಕ್ಕ್” ಅನ್ನು ನಮ್ಮ ಸಂವಿಧಾನದ 8ನೇ ಅನುಸೂಚಿಯಲ್ಲಿ ಸೇರಿಸಬೇಕು.ರೋಮಾಂಚಕ, ಅದ್ಭುತ, ಶ್ರೀಮಂತ ಮತ್ತು ಬೃಹತ್ ಕೊಡವ ಸಾಂಸ್ಕೃತಿಕ-ಜಾನಪದ ಪರಂಪರೆಯನ್ನು ಯುನೆಸ್ಕೋ (UNESCO) ನ ಅಸ್ಪೃಶ್ಯ ಸಾಂಸ್ಕೃತಿಕ ಪರಂಪರೆಗಳ ಪಟ್ಟಿಯಲ್ಲಿ ಸೇರಿಸಬೇಕು.ಸಿಖ್ಖರ ಕಿರ್ಪಾನ್ ಮಾದರಿಯಲ್ಲಿ ಕೊಡವ ಧಾರ್ಮಿಕ “ಸಂಸ್ಕಾರ”ವಾದ ಕೋವಿ ವಿನಾಯಿತಿ ಸವಲತ್ತನ್ನು ನಮ್ಮ ಸಂವಿಧಾನದ ವಿಧಿ 25 ಮತ್ತು 26 ರ ಅಡಿಯಲ್ಲಿ ಮುಂದುವರಿಸಬೇಕು ಮತ್ತು ಖಾತರಿಪಡಿಸಬೇಕು. ಸಿಕ್ಕಿಂನ ಬೌದ್ಧ ಸಮುದಾಯಕ್ಕೆ ಇರುವ “ಸಂಘ” ಕ್ಷೇತ್ರದ ಮಾದರಿಯಲ್ಲಿ ವಿಧಾನಸಭೆ ಮತ್ತು ಸಂಸತ್ತಿನಲ್ಲಿ ಕೊಡವ ಜನಾಂಗಕ್ಕೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಹಕ್ಕೊತ್ತಾಯಗಳನ್ನು ಅವರು ಇದೇ ಸಂದರ್ಭ ಮಂಡಿಸಿದರು. ಲೆಫ್ಟಿನೆoಟ್ ಕರ್ನಲ್ ಬಿ.ಎಂ. ಪಾರ್ವತಿ, ಕೂಪದಿರ ಒಕ್ಕದ ಅಧ್ಯಕ್ಷರಾದ ಕೂಪದಿರ ಪುಷ್ಪ ಮುತ್ತಪ್ಪ, ಕೂಪದಿರ ಗಂಗವ್ವ, ಕೂಪದಿರ ಕಾವೇರಮ್ಮ, ನಯನ ಯಶ್ವಂತ್, ಬಾಚರಣಿಯಂಡ ಹ್ಯಾರಿ ತಮ್ಮಯ್ಯ, ಕೂಪದಿರ ಮೋಹನ್, ಮಂದಪoಡ ಮನೋಜ್ ಮಂದಣ್ಣ, ಕೂಪದಿರ ಸಾಬು, ಕೂಪದಿರ ರೋಷನ್, ಕೂಪದಿರ ಪ್ರಣಮ್, ಮಲ್ಲಾಜಿರ ಜನಮ್ ಬೋಪಣ್ಣ, ಮಲ್ಲಾಜಿರ ಆಯುಷ್ ಅಯ್ಯಣ್ಣ, ಯಶ್ವಂತ್ ಕುಮಾರ್ ಮತ್ತಿತರರು ಎಡ್ಮ್ಯಾರ್ 1 ಆಚರಣೆಗೆ ಸಾಕ್ಷಿಯಾದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.