Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*

ಏಪ್ರಿಲ್ 17, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.17  NEWS DESK : ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಹಾಗೂ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘವ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಟರ್ಫ್ ‘ಸೌಹಾರ್ದ ಕಪ್’ ಪಂದ್ಯಾವಳಿಯಲ್ಲಿ ಮೀಡಿಯಾ ಸೂಪರ್ ಕಿಂಗ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸಿದ್ದಾಪುರದ ಟರ್ಫ್ ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ನಡೆದ ಪಂದ್ಯಾವಳಿಯಲ್ಲಿ 8 ತಂಡಗಳು ಪಾಲ್ಗೊಂಡಿತ್ತು. ಫೈನಲ್ ಪಂದ್ಯಾವಳಿಯಲ್ಲಿ ಕಾವೇರಿ ತಂಡದ ಪರವಾಗಿ ಜಯಪ್ರಕಾಶ್ ಅವರ 26 ರನ್ ಗಳ ಸಹಾಯದಿಂದ ತಂಡ 49 ರನ್ ಗಳಿಸಿತು. ಮೀಡಿಯಾ ಸೂಪರ್ ಕಿಂಗ್ಸ್ ತಂಡದ ಇಸ್ಮಾಯಿಲ್28, ರೆಜಿತ್ 18 ರನ್ ಗಳನ್ನು ಗಳಿಸಿ ಸುಲಭ ಜಯ ಸಾಧಿಸಿತು. ಇದಕ್ಕೂ ಮೊದಲು ನಡೆದ ಕ್ವಾಲಿಫೈಯರ್ ಪಂದ್ಯದಲ್ಲಿ ಕಾವೇರಿ ಮಿಡಿಯಾ ತಂಡ ಮಿಡಿಯಾ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿತು. ಎಲಿಮಿನೇಟರ್ ಪಂದ್ಯದಲ್ಲಿ ಬ್ರಾಡ್ ಕಾಸ್ಟ್ ಇಬ್ನಿ ಬ್ಲಾಸ್ಟರ್ ತಂಡ ಮೀಡಿಯಾ ರೋಯಲ್ಸ್ ತಂಡವನ್ನು ಮಣಿಸಿತು. ಎರಡನೇ ಕ್ಲಾಲಿಫೈಯರ್ ಪಂದ್ಯದಲ್ಲಿ ಬ್ರಾಡ್ ಕಾಸ್ಟ್ ಇಬ್ನಿ ಬ್ಲಾಸ್ಟರ್ ಹಾಗೂ ಮೀಡಿಯಾ ಸೂಪ್ ಕಿಂಗ್ಸ್ ತಂಡದ ನಡುವಿನ ಪಂದ್ಯವು ಸಮಬಲ ಆಗಿದ್ದು, ಸೂಪರ್ ಓವರ್ ನಲ್ಲಿ ಮೀಡಿಯಾ ಸೂಪರ್ ಕಿಂಗ್ಸ್ ಜಯ ಸಾಧಿಸಿತು. ಪಂದ್ಯಾವಳಿಯ ಫೈನಲ್‌ಪಂದ್ಯದ ಪಂದ್ಯ ಪುರುಷೋತ್ತಮ ರೆಜಿತ್ ಕುಮಾರ್ ಗುಹ್ಯ, ಬೆಸ್ಟ್ ಬ್ಯಾಟ್ಸ್ ಮನ್ ಇಸ್ಮಾಯಿಲ್ ಕಂಡಕ್ಕರೆ, ಬೆಸ್ಟ್ ಬೌಲರ್ ಯುಗ ದೇವಯ್ಯ, ಬೆಸ್ಟ್ ಕೀಪರ್ ಜಯಪ್ರಕಾಶ್, ಬೆಸ್ಟ್ ಕ್ಯಾಚ್ ಪ್ರದೀಪ್, ಸರಣಿ ಶ್ರೇಷ್ಠ ಆದರ್ಶ್, ಉತ್ತಮ ಮಹಿಳಾ ಆಟಗಾರರಾಗಿ ಪ್ರಮಿಳಾ ನಾಚಯ್ಯ, ಉತ್ತಮ ಹಿರಿಯ ಆಟಗಾರ ಹನೀಫ್ ಕೊಡ್ಲಿಪೇಟೆ, ಬೆಸ್ಟ್ ಫೀಲ್ಡರ್ ವಿನು ಕುಶಾಲಪ್ಪ ಪಡೆದುಕೊಂಡರು. ಪಂದ್ಯಾವಳಿಯಲ್ಲಿ ನನ್ನ ಧ್ವನಿ, ಕಾಪಿನಾಡ್, ಗೋಣಿಕೊಪ್ಪ ಮೀಡಿಯಾ ಕಿಂಗ್ಸ್, ಟೀಮ್ ಅಯರ ತಂಡಗಳು ಪಾಲ್ಗೊಂಡಿತು. :: ಒತ್ತಡದ ಬದುಕಿಗೆ ಕ್ರೀಡಾಕೂಟ ಅತ್ಯಗತ್ಯ : ಮಾದಂಡ ತಿಮ್ಮಯ್ಯ ::  ಪಂದ್ಯಾವಳಿಯನ್ನು ಅಂತರಾಷ್ಟ್ರೀಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪತ್ರಕರ್ತರು ಸದಾ ಒತ್ತಡದ ಬದುಕಿನಲ್ಲಿದ್ದು, ಕ್ರೀಡೆಯ ಮೂಲಕ ಉತ್ತಡಕ್ಕೆ ವಿರಾಮವನ್ನು ಕಂಡುಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಜಿಲ್ಲೆಯಲ್ಲಿ ಕ್ರೀಡೆಯ ಬೆಳವಣಿಗೆಗೆ ಪತ್ರಕರ್ತರ ಕೊಡುಗೆಯೂ ಅಪಾರವಾಗಿದೆ ಎಂದರು. ಯುವ ಮುಖಂಡ ಎಡಿಕೇರಿ ಪ್ರಸನ್ನ ಮಾತನಾಡಿ, ಕ್ರೀಡೆಯು ದೈಹಿಕ ಆರೋಗ್ಯವನ್ನು ಹೆಚ್ಚಿಸಲು ಉಪಯುಕ್ತವಾಗಲಿದೆ. ಪತ್ರಕರ್ತರು ಸಮಾಜದ ಪ್ರತಿಯೊಂದು ವಿಷಯದಲ್ಲೂ ಗಮನ ಹರಿಸುತ್ತಿದ್ದು, ತಮ್ಮ ಆರೋಗ್ಯದ ಕಡೆಯೂ ಗಮನಹರಿಸುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಬೊಳ್ಳಜೀರ ಬಿ ಅಯ್ಯಪ್ಪ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಾಚರಣಿಯಂಡ ಅನು ಕಾರ್ಯಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರಾದ ಬಿ.ಆರ್ ಸವಿತಾ ರೈ, ಅಯರ ತಂಡದ ಮಾಲೀಕರಾದ ಪಿ.ವಿಷ್ಣು, ಸಮಾಜ ಸೇವಕರಾದ ಎ.ಎನ್ ಪದ್ಮನಾಭ ಹಾಜರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ ವಹಿಸಿದ್ದರು. :: ಜಿಲ್ಲಾ ಕೇಂದ್ರದಲ್ಲಿ ಟರ್ಫ್ ಮೈದಾನ ಅಗತ್ಯ ::  ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚಿರಿಯಪಂಡ ಸುರೇಶ್ ನಂಜಪ್ಪ ಮಾತನಾಡಿ, ಪತ್ರಕರ್ತರಲ್ಲಿ ಉತ್ತಮ ಕ್ರಿಕೆಟ್ ಆಟಗಾರರನ್ನು ಹೊಂದಿದ್ದು, ವೃತ್ತಿಪರ ಆಟಗಾರರಂತೆ ಆಡುತ್ತಿರುವುದು ಶ್ಲಾಘನೀಯ. ಜಿಲ್ಲಾ ಕೇಂದ್ರದಲ್ಲಿಯೂ ಟರ್ಫ್ ಮೈದಾನ ಅಗತ್ಯವಾಗಿದೆ .ಎಲ್ಲರೂ ಆರೋಗ್ಯದ ಕಡೆ ಗಮನ ಹರಿಸಬೇಕೆಂದರು. ಉದ್ಯಮಿ ಮುದ್ದಂಡ ರಶಿನ್ ಸುಬ್ಬಯ್ಯ ಮಾತನಾಡಿ, ಧರ್ಮ ಜನರನ್ನು ಒಡೆಯುತ್ತದೆ. ಆದರೇ ಕ್ರೀಡೆ ಹಾಗೂ ವ್ಯಾಪಾರ ಎಲ್ಲರನ್ನು ಒಗ್ಗೂಡಿಸುತ್ತದೆ. ಕ್ರೀಡೆಯ ಮೂಲಕ ಪತ್ರಕರ್ತರು ಒಗ್ಗಟ್ಟು ಹೆಚ್ಚುತ್ತದೆ. ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸುವಂತೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಉದ್ಯಮಿ ಚೈಯಂಡ ಸತ್ಯ ಗಣಪತಿ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಬೊಳ್ಳಜೀರ ಬಿ ಅಯ್ಯಪ್ಪ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಾಚರಣಿಯಂಡ ಅನು ಕಾರ್ಯಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರಾದ ಬಿ.ಆರ್ ಸವಿತಾ ರೈ ಹಾಜರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರೆಜಿತ್ ಕುಮಾರ್ ವಹಿಸಿದ್ದರು. :: ಭಾಗವಹಿಸಿದ ತಂಡಗಳು : : ಇಸ್ಮಾಯಿಲ್ ಕಂಡಕ್ಕರೆ ಮಾಲೀಕರಾಗಿ ನೌಫಲ್ ಕಡಂಗ ನಾಯಕರಾಗಿರುವ ಮೀಡಿಯ ಸೂಪರ್ ಕಿಂಗ್ಸ್, ಸಂತೋಷ್ ರೈ ಹಾಗೂ ಸವಿತಾ ರೈ ಮಾಲಿಕತ್ವದ ಎ.ಎಸ್ ಮುಸ್ತಫ ನಾಯಕನಾರಾಗಿರುವ ಮೀಡಿಯಾ ರಾಯಲ್ಸ್, ಎಂ.ಎನ್ ಚಂದ್ರಮೋಹನ್ ಮಾಲೀಕರಾಗಿ ಹೆಚ್.ಸಿ ಜಯಪ್ರಕಾಶ್ ನಾಯಕರಾಗಿರುವ ಕಾವೇರಿ ಮೀಡಿಯಾ ಕ್ರಿಕೆಟರ್ಸ್, ಸಣ್ಣುವಂಡ ಕಿಶೋರ್ ನಾಚಪ್ಪ ಹಾಗೂ ವಿ.ವಿ ಅರುಣ್ ಕುಮಾರ್ ಮಾಲಿಕತ್ವದ ಮಂಡೇಡ ಅಶೋಕ್ ನಾಯಕರಾಗಿರುವ ಗೋಣಿಕೊಪ್ಪ ಮೀಡಿಯಾ ಕಿಂಗ್ಸ್, ವಿರಾಜಪೇಟೆಯ ಉದ್ಯಮಿ ಪಿ.ವಿಷ್ಣು ಮಾಲಿಕತ್ವದ ಡಾ.ಹೇಮಂತ್ ಕುಮಾರ್ ನಾಯಕರಾಗಿರುವ ಟೀಮ್ ಅಯರ, ಅನಿವಾಸಿ ಬಾರತೀಯ ಎ.ಎನ್ ಪದ್ಮನಾಭ ಮಾಲೀಕತ್ವದ ಪ್ರೇಮ್ ನಾಯಕತ್ವದ ನನ್ನ ಧ್ವನಿ, ಚೆಯ್ಯಂಡ ಸತ್ಯ ಮಾಲಿಕತ್ವದ ಆದರ್ಶ್ ನಾಯಕರಾಗಿರುವ ಬ್ರಾಡ್ ಕಾಸ್ಟ್ ಇಬ್ನಿ ಬ್ಲಾಸ್ಟರ್ಸ್ , ಮಚ್ಚಮಾಡ ಅನೀಶ್ ಮಾದಪ್ಪ ಮಾಲಿಕತ್ವದ ದಿವಾಕರ್ ಜಾಕಿ ನಾಯಕರಾಗಿರುವ ಟೀಂ ಕಾಫಿ ನಾಡ್ ಈ ಎಂಟು ತಂಡಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡಿತ್ತು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.