Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ
  • ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
  • ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್
  • ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ
  • ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ
  • ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
  • ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್
  • ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ
  • ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ
  • ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು

ಏಪ್ರಿಲ್ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಚೆಟ್ಟಳ್ಳಿ ಏ.17 NEWS DESK : ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ, ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಹಾಗೂ ಇತರ ಕೃಷಿ ಪರಿಕರಗಳ ಆಳವಡಿಕೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಗಳು ಮಧುವನ, ಪಾಲಿಹೌಸ್ ಹಾಗೂ ತೆರೆದ ಸಭಾಂಗಣವನ್ನು ಉದ್ಘಾಟಿಸಿದರು. ಕೇಂದ್ರದಲ್ಲಿ ಬೆಳೆದ ಅರ್ಕಾ ಸುಪ್ರೀಮ್, ಅರ್ಕಾ ಕೂರ್ಗ್ ಬಟರ್ಫ್ರೂಟ್ ಸೇರಿದಂತೆ ವಿವಿಧ ಹಣ್ಣು-ಹಂಪಲುಗಳು, ಕ್ರಷಿಯನ್ನು ಬಾಧಿಸುವ ವಿವಿಧ ಕೀಟಗಳು,ಸಾವಯವ ಗೊಬ್ಬರಗಳು, ಪೋಷಕಾಂಶಗಳು, ಹಣ್ಣಿನ ಗಿಡಗಳು ಹಾಗೂ ಕೃಷಿಕರ ತಾಜಾ ಜೇನು ಪ್ರದರ್ಶನಕ್ಕಿಡಲಾಗಿತ್ತು. ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ. ಮುರಳಿಧರ ಬಿ.ಎಂ. ಸ್ವಾಗತಿಸಿ, ಸಂಸ್ಥೆಯ 80ನೇ ವರ್ಷದ ಸ್ಥಾಪನಾ ಹಿನ್ನೆಲೆ ಕುರಿತು ಮಾಹಿತಿ ನೀಡಿದರು. ಈ ವರ್ಷ ಒಂದು ಲಕ್ಷಕ್ಕೂ ಹೆಚ್ಚು ತೋಟಗಾರಿಕಾ ಗಿಡಗಳು, 60 ಸಾವಿರ ಬಟರ್ಫ್ರೂಟ್ ಗಿಡಗಳು ಹಾಗೂ 10 ಸಾವಿರ ಕೊಡಗಿನ ಕಿತ್ತಳೆ ಗಿಡಗಳನ್ನು ಮಾರಾಟ ಮಾಡಿ ಸುಮಾರು ರೂ.1.20 ಕೋಟಿ ಆದಾಯ ಗಳಿಸಿರುವುದಾಗಿ ತಿಳಿಸಿದರು. ಬೆಂಗಳೂರು ಐಸಿಏಆರ್ ನಿರ್ದೇಶಕರಾದ ಡಾ. ಎಸ್.ಎನ್.ಸುಶೀಲ್ ಮಾತನಾಡಿ, ಕೃಷಿ ಅಭಿವೃದ್ಧಿಯಲ್ಲಿ ತೋಟಗಾರಿಕೆ ಕ್ಷೇತ್ರದ ಪಾತ್ರ ಮಹತ್ವದ್ದಾಗಿದ್ದು, ರಾಸಾಯನಿಕ ಕೀಟನಾಶಕಗಳ ಬದಲಾಗಿ ಜೈವಿಕ ಕೀಟನಾಶಕಗಳನ್ನು ಬಳಸುವಂತೆ ರೈತರಿಗೆ ಸಲಹೆ ನೀಡಿದರು. ಐಸಿಏಆರ್‌ನ ಮತ್ತೊಬ್ಬ ನಿರ್ದೇಶಕರಾದ ಡಾ. ಅರ್ಥಬಂಧು ಸಾಹು, ಮಣ್ಣಿನ ಫಲವತ್ತತೆ ಕಾಪಾಡಲು ಸಾವಯವ ಪದಾರ್ಥಗಳ ಬಳಕೆ ಅಗತ್ಯವೆಂದರು. ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆ ಮಣ್ಣಿನ ಗುಣಮಟ್ಟ ಹಾನಿ ಮಾಡುವುದಾಗಿ ಎಚ್ಚರಿಸಿದರು. ದ್ವಿತೀಯ ಕೃಷಿ ನಿರ್ದೇಶನಾಲಯದ ನಿರ್ದೇಶಕರಾದ ವೆಂಕಟರಾಮ ರೆಡ್ಡಿ ಜೆ. ಪಾಟೀಲ್, ಚೆಟ್ಟಳ್ಳಿಯ ಕೇಂದ್ರವು ಇತರೆ ಕೃಷಿ ಕೇಂದ್ರಗಳಿಗೆ ಮಾದರಿಯಾಗಿದ್ದು, ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳಿಗೆ ₹3 ಲಕ್ಷದಿಂದ ರೂ.15 ಲಕ್ಷದವರೆಗೆ ಸಬ್ಸಿಡಿ ದೊರೆಯಲಿದೆ ಎಂದು ಹೇಳಿದರು. ಕಾಫಿ ಮಂಡಳಿಯ ಮಾಜಿ ಉಪಾಧ್ಯಕ್ಷ ಹಾಗೂ ಪ್ರಗತಿಪರ ಬೆಳೆಗಾರ ಬೋಸ್ ಮಂದಣ್ಣ ಮಾತನಾಡಿ, ಜಾಗತಿಕ ಪರಿಸ್ಥಿತಿಗಳ ಪರಿಣಾಮವಾಗಿ ಗೊಬ್ಬರ ಹಾಗೂ ಇತರ ಉತ್ಪನ್ನಗಳ ಕೊರತೆ ಉಂಟಾಗುವ ಸಾಧ್ಯತೆ ಇದೆ ಎಂದರು. ಕೊಡಗಿನ ಹವಾಮಾನದಲ್ಲಿ ಬದಲಾವಣೆ ಕಾಣಿಸುತ್ತಿದ್ದು, ನುರಿತ ಕಾರ್ಮಿಕರ ಕೊರತೆ ಕೃಷಿಗೆ ಸವಾಲಾಗಿದೆ ಎಂದು ಅಭಿಪ್ರಾಯಪಟ್ಟರು. ಕೃಷಿ ನಿರ್ದೇಶಕರಾದ ಡಾ. ಪುತ್ರ ಜಿ.ಟಿ. ಅವರು, ಯೂರಿಯಾ, ಡಿಎಪಿ, ಎಂಒಪಿ ಗೊಬ್ಬರಗಳ ಕಚ್ಚಾ ವಸ್ತುಗಳಿಗೆ ವಿದೇಶ ಅವಲಂಬನೆ ಹೆಚ್ಚಿರುವುದರಿಂದ ಪರಿಸರ ಸ್ನೇಹಿ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕೆಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ನಿರ್ದೇಶಕರಾದ ಡಾ. ತುಷಾರ್ ಕಾಂತಿ ಬೆಹೆರಾ ಮಾತನಾಡಿ, ಕೃಷಿ ಕೇಂದ್ರಗಳ ಅಭಿವೃದ್ಧಿಯಿಂದ ರೈತರ ಪ್ರಗತಿ ಸಾಧ್ಯವಾಗುತ್ತದೆ. ಕೊಡಗಿನ ಹವಾಮಾನಕ್ಕೆ ಅನುಕೂಲಕರವಾದ ಆಫ್-ಸೀಜನ್ ಲಿಚಿ ಬೆಳೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಹೊಂದಿದ್ದು, ಅದರ ಬೆಳವಣಿಗೆಗೆ ಒತ್ತು ನೀಡುವಂತೆ ಸಲಹೆ ನೀಡಿದರು. ಕಾರ್ಯಕ್ರಮದ ಅಂಗವಾಗಿ ಪೌಷ್ಟಿಕ ಕೈತೋಟ ಹಾಗೂ ವೈಜ್ಞಾನಿಕ ಜೇನುಸಾಕಾಣಿಕೆ ಕುರಿತ ಪುಸ್ತಕಗಳನ್ನು ಬಿಡುಗಡೆಗೊಳಿಸಲಾಯಿತು. ಎಸಿ, ಎಸ್ಪಿ ಹಾಗೂ ಟಿಎಸ್ಪಿ ಯೋಜನೆಯ ಫಲಾನುಭವಿಗಳಿಗೆ ಗಿಡಗಳು ಹಾಗೂ ಕೃಷಿ ಪರಿಕರಗಳನ್ನು ವಿತರಿಸಲಾಯಿತು. ಇದೇ ವೇಳೆ ನಿವೃತ್ತ ಸಿಬ್ಬಂದಿ, ಪ್ರಗತಿಪರ ಕೃಷಿಕರು, ಅತ್ಯುತ್ತಮ ಸೇವೆ ಸಲ್ಲಿಸಿದ ಸಿಬ್ಬಂದಿಗಳಾ ಸಿ.ಎಂ ಮೋಹನ್,ಎ.ಎಂ ಜಗದೀಶ್ ಹಾಗೂ ಪತ್ರಕರ್ತ ಪುತ್ತರಿರ ಕರುಣ್ ಕಾಳಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಡಾ. ಮುರುಳಿ ಬಿ.ಎಂ. ಸ್ವಾಗತಿಸಿದರು. ವಿಜ್ಞಾನಿ ಡಾ. ರಮೇಶ್ ಬಾಬು ವಂದಿಸಿದರು. ಡಾ. ಎ.ಟಿ. ರಾಣಿ ಕಾರ್ಯಕ್ರಮ ನಿರೂಪಿಸಿದರು.

ವರದಿ : ಪುತ್ತರಿರ ಕರುಣ್ ಕಾಳಯ್ಯ 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.