Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*
  • *ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ*
  • *ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ*
  • *ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ*
  • *ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*
  • *ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*
  • *ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*
  • *2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*
  • *ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»*ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*

ಏಪ್ರಿಲ್ 18, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಏ.18 NEWS DESK :  ಕೊಡವ ಅಭಿವೃದ್ಧಿ ನಿಗಮ ಘೋಷಣೆಯಾಗುವಲ್ಲಿ ಯುಕೊ ಸಂಘಟನೆಯ ಪಾತ್ರವನ್ನು ಪರಿಗಣಿಸಿ ಪೊನ್ನಂಪೇಟೆಯ ವಸಂತನಗರದ ಶ್ರೀ ಇಗ್ಗುತ್ತಪ್ಪ ಕೊಡವ ಕೂಟದ ವತಿಯಿಂದ ಯುಕೊ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಅವರನ್ನು ಸನ್ಮಾನಿಸಲಾಯಿತು. ಅರುವತೊಕ್ಲುವಿನ ಭರಣಿ ಸಭಾಂಗಣದಲ್ಲಿ ಕೂಟದ ಅಧ್ಯಕ್ಷರಾದ ಚೇಂದಿರ ಅಪ್ಪಯ್ಯ ಅವರ ನೇತೃತ್ವದಲ್ಲಿ ನಡೆದ ಕೂಟದ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ಮಂಜು ಚಿಣ್ಣಪ್ಪ ಅವರಿಗೆ ಚಿನ್ನದ ಸ್ಮರಣಿಕೆ ನೀಡಿ ಸನ್ಮಾನಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೂಟದ ಅಧ್ಯಕ್ಷ ಚೇಂದಿರ ಅಪ್ಪಯ್ಯ, ಎಲ್ಲರೂ ಸ್ವಂತಕ್ಕಾಗಿ ದುಡಿಯುವಲ್ಲಿ ನಿರತರಾಗಿರುವಾಗ ಸಮಾಜ ಹಾಗು ಜನಾಂಗಕ್ಕಾಗಿ ದುಡಿಯುವವರನ್ನು ಗೌರವದಿಂದ ಕಾಣಬೇಕಿದೆ. ಈ ನಿಟ್ಟಿನಲ್ಲಿ ಕೊಡವ ಜನಾಂಗದ ಏಳಿಗೆಗಾಗಿ ಅವಿರತವಾಗಿ ಶ್ರಮಿಸುತ್ತಿರುವ ಮಂಜು ಚಿಣ್ಣಪ್ಪ ಹಾಗೂ ಅವರ ಬಳಗದ ಕೊಡುಗೆ ಅಪಾರವಾದುದು. ಕೊಡವ ಅಭಿವೃದ್ಧಿ ನಿಗಮದ ಯಶಸ್ಸು ಸಾಮಾನ್ಯ ವಿಷಯವಲ್ಲ, ಈ ನಿಟ್ಟಿನಲ್ಲಿ ಅವರನ್ನು ಗೌರವಿಸುವುದು ನಮಗೆ ಹೆಮ್ಮೆಯೆನಿಸಿದೆ ಎಂದು ಹೇಳಿದರು. ಹಿರಿಯರಾದ ಕಳ್ಳೆಂಗಡ ಶಂಬು ಮಾತನಾಡಿ, ಕೊಡವ ಅಭಿವೃದ್ಧಿ ನಿಗಮ ಘೋಷಣೆಯಾಗಿರುವುದು ನಮಗೆಲ್ಲ ಅತೀವ ಸಂತೋಷ ತಂದಿದೆ. ಈ ವಿಷಯದಲ್ಲಿ ಶಾಸಕ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಹಾಗೂ ಮಂಜು ಚಿಣ್ಣಪ್ಪನವರ ಶ್ರಮಕ್ಕೆ ಬೆಲ್ಕಟ್ಟಲಾಗದು. ನಿಗಮದ ಮೂಲಕ ಕೊಡವರ ಅಭಿವೃದ್ದಿಗೆ ಬಹಳಷ್ಟು ಕೆಲಸ ಮಾಡಬಹುದಾಗಿದೆ. ಕೊಡವರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು. ಕೂಟದ ಕಾರ್ಯದರ್ಶಿ ಹಾಗು ಕರ್ನಾಟಕ ಕೊಡವ ಸಾಹಿತ್ಯ ಅಖಾಡೆಮಿಯ ಮಾಜಿ ಅಧ್ಯಕ್ಷ ಚಿರಿಯಪಂಡ ರಾಜಾ ನಂಜಪ್ಪ ಮಾತನಾಡಿ, ನಮ್ಮಲ್ಲಿ ಮಾತನಾಡುವವರ ಸಂಖ್ಯೆ ಬಹಳಷ್ಟಿದೆ, ಆದರೆ ಜನಾಂಗಕ್ಕೆ ಕೆಲಸ ಮಾಡುವವರು ವಿರಳ. ಅಂತದ್ದರಲ್ಲಿ ಯುಕೊ ಸಂಘಟನೆ ಸದ್ದಿಲ್ಲದೆ ಹಿಡಿದ ಕೆಲಸವನ್ನು ಸಾಧಿಸಿ ತೋರಿಸಿರುವುದು ಕೊಡವರಿಗೆ ಹೆಮ್ಮೆಯ ವಿಷಯ ಎಂದು ಹೇಳಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ, ನೂತನವಾಗಿ ಕೊಡವ ಅಭಿವೃದ್ದಿ ನಿಗಮ ಸ್ಥಾಪಿಸಬೇಕೆಂಬ ನಮ್ಮ ಉದ್ದೇಶದಲ್ಲಿ ಸ್ಪಷ್ಟತೆಯಿತ್ತು, ಕೆಲಸದಲ್ಲಿ ಬದ್ಧತೆಯಿತ್ತು, ಆದರೆ ಶಾಸಕ ಪೊನ್ನಣ್ಣನವರಿಂದಾಗಿ ಇಂದು ಕೊಡವ ಅಭಿವೃದ್ಧಿನಿಗಮದ ಕನಸು ನನಸಾಗಿದೆ. ಕೊಡವರು ಎಲ್ಲದರಲ್ಲಿ ರಾಜಕೀಯ ಹುಡುಕುವ ಮನಸ್ಥಿತಿಯಿಂದ ಹೊರಬಂದು ನಿಗಮವನ್ನು ಕೊಡವರ ಸಮಗ್ರ ಅಭಿವೃದ್ದಿಗೆ ಬಳಸಿಕೊಳ್ಳಬೇಕಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಚೆಪ್ಪುಡಿರ ಸುಜು ಕರುಂಬಯ್ಯ ಸ್ವಾಗತಿಸಿ ಚಿರಿಯಪಂಡ ರಾಜಾ ನಂಜಪ್ಪ ವಂದಿಸಿದರು. ಶ್ರೀ ಇಗ್ಗುತ್ತಪ್ಪ ಕೊಡವ ಕೂಟದ ಸದಸ್ಯರು ಹಾಜರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*

ಅಕ್ಟೋಬರ್ 9, 2026

*ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ*

ಅಕ್ಟೋಬರ್ 9, 2026

*ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ*

ಅಕ್ಟೋಬರ್ 9, 2026

*ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ*

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಇದೇ ನವೆಂಬರ್, 01 ರಂದು ಕನ್ನಡ ರಾಜ್ಯೋತ್ಸವವನ್ನು ಜಿಲ್ಲಾಡಳಿತ ವತಿಯಿಂದ ನಗರದ ಪೊಲೀಸ್…

*ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ*

ಅಕ್ಟೋಬರ್ 9, 2026

*ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ*

ಅಕ್ಟೋಬರ್ 9, 2026

*ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಅಕ್ಟೋಬರ್ 9, 2026

*ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*

ಅಕ್ಟೋಬರ್ 9, 2026

*ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*

ಅಕ್ಟೋಬರ್ 9, 2026

*ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 9, 2026

*2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*

ಅಕ್ಟೋಬರ್ 9, 2026

*ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.