Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*
  • *ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*
  • *ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*
  • *ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*
  • *2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*
  • *ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*
  • *ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*
  • *ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*
  • *ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*

ಏಪ್ರಿಲ್ 21, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಏ.21 NEWS DESK : ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 9ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನವು ಇದೇ 23 ರಿಂದ ಮೇ, 22 ರವರೆಗೆ ನಡೆಯಲಿದ್ದು, ಯಾವುದೇ ಜಾನುವಾರು ಲಸಿಕೆಯಿಂದ ಬಿಟ್ಟು ಹೋಗದಂತೆ ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ ಸಂಬಂಧ ಮಂಗಳವಾರ ಭಿತ್ತಿಪತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು. ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಜಾನುವಾರುಗಳ ರಕ್ಷಣೆ, ಸುರಕ್ಷತೆ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಯಶಸ್ಸುಗೊಳಿಸಬೇಕು ಎಂದರು. ಜಾನುವಾರುಗಳು ರೈತರ ಹಾಗೂ ರಾಷ್ಟ್ರದ ಆಸ್ತಿಯಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಜವಾಬ್ದಾರಿ ಎಲ್ಲರದ್ದಾಗಿದೆ. ಹೈನುಗಾರಿಕೆ ರೈತರ ಆರ್ಥಿಕ ಸಂಕಷ್ಟವನ್ನು ನಿವಾರಿಸಲು ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಜಾನುವಾರುಗಳ ಆರೋಗ್ಯ ಕಾಪಾಡುವುದು ಅತೀ ಮುಖ್ಯವಾಗಿದೆ ಎಂದರು. ಪಶುಪಾಲನೆ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ ಅವರು ಮಾತನಾಡಿ ಜಾನುವಾರುಗಳಿಗೆ ಕಾಲುಬಾಯಿ ರೋಗವು ವೈರಾಣುವಿನಿಂದ ಬರುವ ಅಂಟು ಜಾಡ್ಯವಾಗಿದ್ದು, ಲಸಿಕೆ ಹಾಕಿಸುವುದೊಂದೇ ರೋಗ ನಿಯಂತ್ರಿಸಲು ಸಾಧ್ಯವಾಗಲಿದೆ ಎಂದರು.
ಕಾಲುಬಾಯಿ ರೋಗವು ಹಸು, ಎತ್ತು, ಹೋರಿ, ಎಮ್ಮೆಗೆ ತಗುಲುವ ಮಾರಕ ರೋಗವಾಗಿದ್ದು, ರೈತರ ಆರ್ಥಿಕ ನಷ್ಟ ಉಂಟು ಮಾಡಲಿದೆ. ಆದ್ದರಿಂದ ಜಾನುವಾರುಗಳ ರಕ್ಷಣೆ, ಸುರಕ್ಷತೆ ಬಗ್ಗೆ ಒತ್ತು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ವರ್ಷದಲ್ಲಿ ಎರಡು ಬಾರಿ ಜಾನುವಾರುಗಳಿಗೆ ಲಸಿಕೆ ಹಾಕುವುದರಿಂದ ರೋಗ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು. ಮೂರು ತಿಂಗಳ ಮೇಲ್ಪಟ್ಟ ಎಲ್ಲಾ ಕರುಗಳಿಗೆ ತಪ್ಪದೆ ಒಮ್ಮೆ ಲಸಿಕೆ ಹಾಕಿಸಿದ ನಂತರ ಮತ್ತೊಮ್ಮೆ 3 ರಿಂದ 5 ವಾರದೊಳಗೆ ದನ ಹಾಗೂ ಎಮ್ಮೆಗಳಿಗೆ ಬೂಸ್ಟರ್ ಲಸಿಕೆ ಹಾಕಿಸಬೇಕು ಎಂದು ವಿವರಿಸಿದರು. ಗರ್ಭಧರಿಸಿದ ಹಸು ಹಾಗೂ ಎಮ್ಮೆಗಳಿಗೂ ತಪ್ಪದೇ ಲಸಿಕೆ ಹಾಕಿಸಬೇಕು. ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದರೂ ಸಹ ಪ್ರತೀ ಆರು ತಿಂಗಳಿಗೊಮ್ಮೆ ಕೈಗೊಳ್ಳುವ ಲಸಿಕೆ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಲಸಿಕೆ ಹಾಕಿಸುವುದು ಅತೀ ಮುಖ್ಯವಾಗಿದೆ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಸದ್ಯ 9ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ ಸಂದರ್ಭದಲ್ಲಿ ದನ ಹಾಗೂ ಎಮ್ಮೆಗಳಿಗೆ ಲಸಿಕೆ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ 52,985 ದನ ಹಾಗೂ 2,136 ಎಮ್ಮೆಗಳಿಗೆ ಲಸಿಕೆ ನೀಡಲಾಗುತ್ತಿದೆ ಎಂದು ಲಿಂಗರಾಜ ದೊಡ್ಡಮನಿ ಅವರು ಹೇಳಿದರು. ಜಿಲ್ಲೆಯ ಸಂಚಾರಿ ತುರ್ತು ಪಶು ಚಿಕಿತ್ಸಾ ವಾಹನ ನಾಲ್ಕನೇಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ನಡೆಸಿದರು. ಈ ಕುರಿತು ಮಾಹಿತಿ ನೀಡಿದ ಪಶುಪಾಲನಾ ಇಲಾಖೆ ಉಪ ನಿರ್ದೇಶಕರು ಜಿಲ್ಲೆಯಲ್ಲಿ 5 ಸಂಚಾರಿ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು, ಜಾನುವಾರುಗಳಿಗೆ ರೈತರ ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು. ಪಾಲಿ ಕ್ಲೀನಿಕ್‍ನ ಉಪ ನಿರ್ದೇಶಕರಾದ ಡಾ.ತಿಮ್ಮಯ್ಯ, ಹಾಸನ ಹಾಲು ಒಕ್ಕೂಟದ ವ್ಯವಸ್ಥಾಪಕರಾದ ಪ್ರಸನ್ನ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ರಾಜಶೇಖರ್(ಸೋಮವಾರಪೇಟೆ), ಡಾ.ಲತಾ ಪ್ರಸನ್ನ (ಮಡಿಕೇರಿ), ಡಾ.ನವೀನ್ (ವಿರಾಜಪೇಟೆ), ಡಾ.ಶಿಂಧೆ (ಕುಶಾಲನಗರ), ಡಾ.ಚಂದ್ರಶೇಖರ್ (ಪೊನ್ನಂಪೇಟೆ), ಡಾ.ವಿವೇಕ್ (ಜಿಲ್ಲಾ ಪ್ರತಿನಿದಿ, ಸಂಚಾರಿ ಪಶು ಚಿಕಿತ್ಸಾ ಘಟಕ) ಇತರರು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಅಕ್ಟೋಬರ್ 9, 2026

*ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*

ಅಕ್ಟೋಬರ್ 9, 2026

*ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ನವದೆಹಲಿ, NEWS DESK ಅ.9: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹಾಗೂ ಭಾರತೀಯ ಚುನಾವಣಾ ಆಯೋಗದ ಕಾರ್ಯನಿರ್ವಹಣೆಯನ್ನು…

*ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*

ಅಕ್ಟೋಬರ್ 9, 2026

*ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*

ಅಕ್ಟೋಬರ್ 9, 2026

*ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 9, 2026

*2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*

ಅಕ್ಟೋಬರ್ 9, 2026

*ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*

ಅಕ್ಟೋಬರ್ 9, 2026

*ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*

ಅಕ್ಟೋಬರ್ 9, 2026

*ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*

ಅಕ್ಟೋಬರ್ 9, 2026

*ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.