Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*
  • *ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*
  • *AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*
  • *ಪ್ರವಾಸೋದ್ಯಮ  ಸಂಘ-ಸಂಸ್ಥೆಗಳ ಸಭೆ : ಕೊಡಗಿನ ಆತಿಥ್ಯ ಪ್ರವಾಸೋದ್ಯಮದ ಬಗ್ಗೆ ಆದಾರರಹಿತ ಟೀಕೆಗಳಿಗೆ ಕಡಿವಾಣ ಅಗತ್ಯ : ದಿನೇಶ್ ಕಾಯ೯ಪ್ಪ*
  • *ಫೀ.ಮಾ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ : 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ನೀಡಿದೆ : ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ*
  • *ಮೇ 29 ಮತ್ತು 30 ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ*
  • *ಮಡಿಕೇರಿ ನಗರಸಭೆಯ ಬಿಜೆಪಿ ಆಡಳಿತ ಮಂಡಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ* 
  • *ನಮ್ಮೂರ ಶಾಲೆ ನಮ್ಮದು, ನಮ್ಮೂರಲ್ಲೆ ಉಳಿಯಲಿ : ಎಐಡಿಎಸ್‍ಓ ವಿದ್ಯಾರ್ಥಿ ಸಂಘಟನೆ ಹಾಗೂ ಗ್ರಾಮಸ್ಥರ ಆಗ್ರಹ*
  • *ನಿವೇಶನಕ್ಕಾಗಿ ಆಗ್ರಹಿಸಿ ಮೇ 29 ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ*
  • *ದೇವಟ್ ಪರಂಬ್ ನಲ್ಲಿ ಹಿರಿಯರಿಗೆ ಗೌರವ ಅರ್ಪಿಸಿದ ಸಿಎನ್‌ಸಿ : ಅಂತರಾಷ್ಟ್ರೀಯ ಸ್ಮಾರಕ ನಿರ್ಮಾಣಕ್ಕೆ ಒತ್ತಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ

ಏಪ್ರಿಲ್ 21, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.21 NEWS DESK : ಆದಿ ಶಂಕರಾಚಾರ್ಯರು 8 ನೇ ಶತಮಾನದಲ್ಲಿ ಜನಿಸಿ ರಾಷ್ಟ್ರದಲ್ಲಿ ಅದ್ವೈತ ವೇದಾಂತ ಸಿದ್ಧಾಂತದ ಪ್ರವರ್ತಕರಾಗಿ ಬೆಳಕು ಚೆಲ್ಲಿದ್ದಾರೆ ಎಂದು ಕೊಡಗು ಜಾನಪದ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಬಿ.ಜಿ.ಅನಂತಶಯನ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಶ್ರೀ ಆದಿ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೇರಳದ ಕಾಲಡಿಯಲ್ಲಿ ಶಿವಗುರು-ಆರ್ಯಾಂಬಾ ದಂಪತಿಯ ಪುತ್ರರಾಗಿ ಜನಿಸಿದ ಶಂಕರಾಚಾರ್ಯ ಅವರು, ಕೇವಲ 32 ವರ್ಷಗಳ ಅಲ್ಪಾಯುಷ್ಯದಲ್ಲಿ ವೇದ ಉಪ ನಿಷತ್ತುಗಳಿಗೆ ಭಾಷ್ಯ ಬರೆದು ರಾಷ್ಟ್ರದದ್ಯಾಂತ ಸಂಚರಿಸಿ ಅದ್ವೈತ ತತ್ವವನ್ನು ಪ್ರಚಾರ ಮಾಡಿದ್ದಾರೆ ಎಂದು ಹೇಳಿದರು. ಶಂಕರಾಚಾರ್ಯರು 8ನೇ ವಯಸ್ಸಿನಲ್ಲಿಯೇ ವೇದಗಳನ್ನು ಅಧ್ಯಯನ ಮಾಡಿ ಅಸಾಧಾರಣ ಪ್ರತಿಭೆಯನ್ನು ಹೊಂದಿದ್ದರು. 8ನೇ ವಯಸ್ಸಿನಲ್ಲಿಯೇ ಸನ್ಯಾಸ ದೀಕ್ಷೆ ಪಡೆದು ಗೋವಿಂದ ಭಗವತ್ಪಾದರ ಬಳಿ ಶಿಷ್ಯರಾಗಿ ಬೆಳೆದರು ಎಂದು ಬಿ.ಜಿ.ಅನಂತಶಯನ ಅವರು ವಿವರಿಸಿದರು. ಅದ್ವೈತ ಸಿದ್ಧಾಂತದಲ್ಲಿ ಬ್ರಹ್ಮವೇ ಸತ್ಯ, ಆತ್ಮ ಮತ್ತು ಪರಮಾತ್ಮ ಬೇರೆಯಲ್ಲ ಎಂಬುದನ್ನು ಸಾರುತ್ತದೆ. ಭಗವತ್ ಗೀತೆ, ಉಪನಿಷತ್ತು ಮತ್ತು ಬ್ರಹ್ಮಸೂತ್ರಗಳಿಗೆ ಭಾಷ್ಯವನ್ನು ಶಂಕರಾಚಾರ್ಯರು ಬರೆದಿದ್ದಾರೆ. ವಿವೇಕಚೂಡಾಮಣಿ, ಭಜಗೋವಿಂದಂ, ಸೌಂದರ್ಯ ಲಹರಿ ಮತ್ತು ಆತ್ಮಬೋಧ ಮತ್ತಿತರ ಕೃತಿಗಳನ್ನು ಶಂಕರಾಚಾರ್ಯರು ರಚಿಸಿದ್ದಾರೆ ಎಂದು ತಿಳಿಸಿದರು. ಸನಾತನ ಧರ್ಮದ ಪ್ರಚಾರಕ್ಕಾಗಿ ಭಾರತದ ಪೂರ್ವಭಾಗದಲ್ಲಿ ಪುರಿ(ಗೋವರ್ಧನ ಪೀಠ), ಪಶ್ಚಿಮದಲ್ಲಿ ದ್ವಾರಕ(ಶಾರದ ಪೀಠ), ಉತ್ತರದಲ್ಲಿ ಬದರಿನಾಥ(ಜ್ಯೋರ್ತಿಪೀಠ), ದಕ್ಷಿಣದಲ್ಲಿ ಶೃಂಗೇರಿ(ಶಾರದ ಪೀಠ) ಸ್ಥಾಪಿಸಿದ್ದಾರೆ ಎಂದು ಹೇಳಿದರು. ಶೈವ, ವೈಷ್ಣವ, ಶಾಕ್ತ, ಗಾಣಪತ್ಯ, ಸೌರ ಹಾಗೂ ಸ್ಕಂದ ಮತಗಳನ್ನು ಒಗ್ಗೂಡಿಸಿ ಷಣ್ಮತ ಸ್ಥಾಪಕರಾದರು ಎಂದು ಕೊಡಗು ಜಾನಪದ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರು ವಿವರಿಸಿದರು. ತಾಯಿ ಆರ್ಯಾಂಬಾ ಮತ್ತು ತಂದೆ ಶಿವಗುರುಗಳ ಪುತ್ರರಾದ ಶಂಕರರು ಬಾಲ್ಯದಲ್ಲೇ ಅದ್ಭುತ ಪ್ರತಿಭೆ ತೋರಿದರು. ಅವರು ಗುರುಕುಲದಲ್ಲಿದ್ದು ವಿದ್ಯಾಭ್ಯಾಸ ಮಾಡುವಾಗ ಭಿಕ್ಷಾಟನೆಯ ಸಂದರ್ಭದಲ್ಲಿ ಒಣಗಿದ ನೆಲ್ಲಿಕಾಯಿಯನ್ನು ಭಿಕ್ಷೆಯಾಗಿ ನೀಡಿದ ಬಡಗೃಹಿಣಿಯ ದಾರಿದ್ರ್ಯವನ್ನು ನೋಡಿ, ಆ ಸ್ಥಿತಿಯನ್ನು ಸಹಿಸಲಾಗದೇ ಮಹಾಲಕ್ಷ್ಮಿಯನ್ನು ‘ಕನಕಧಾರಾಸ್ತ್ರೋತ್ರದ ಮೂಲಕ ಸ್ತುತಿಸಿ ನೆಲ್ಲಿಕಾಯಿಯ ಸುವರ್ಣ ವೃಷ್ಟಿಯಿಂದ ಆ ದಾರಿದ್ರ್ಯವನ್ನು ನಿವಾರಿಸಿದ ಮಹಿಮಾನ್ವಿತರು ಶ್ರೀಶಂಕರರು ಎಂದು ನುಡಿದರು. ಎಂಟನೇ ವಯಸ್ಸಿನಲ್ಲಿ ತಾಯಿಯ ಅನುಮತಿಯಿಂದ ಸನ್ಯಾಸ ಸ್ವೀಕರಿಸಿ, ನರ್ಮದಾ ನದಿ ತೀರದಲ್ಲಿ ಶ್ರೀ ಗೋವಿಂದ ಭಗವತ್ಪಾದರನ್ನು ಗುರುವಾಗಿ ಪಡೆದು ಬ್ರಹ್ಮ ವಿದ್ಯೆಯ ಅಧ್ಯಯನವನ್ನು ಮಾಡಿದರು ಎಂದರು. ‘ಶಂಕರಾಚಾರ್ಯರು ಸಮಾಜಕ್ಕೆ ನೀಡಿರುವ ಸಂದೇಶಗಳು ಮತ್ತು ತತ್ವಗಳನ್ನು ತಿಳಿದುಕೊಳ್ಳಬೇಕು. ಸಮಾಜ ನಿಂತಿರುವುದೇ ನಂಬಿಕೆ ಮತ್ತು ವಿಶ್ವಾಸದ ಮೇಲೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ಬಿ.ಜಿ.ಅನಂತರಶಯನ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.’ ಚಿಂತಕರಾದ ಚಿ.ನಾ.ಸೋಮೇಶ್ ಅವರು ಮಾತನಾಡಿ, ಶ್ರೀ ಶಂಕರಾಚಾರ್ಯರು ಸಂತ ಪರಂಪರೆಯ ಮೌಲ್ಯಗಳನ್ನು ಪುನರುತ್ಥಾನಗೊಳಿಸುವಲ್ಲಿ ಮತ್ತು ಅದ್ವೈತ ವೇದಾಂತದ ಮೂಲಕ ಸನಾತನ ಧರ್ಮದ ಮಹತ್ವ ಸಾರುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಕೊಡುಗೆಗಳು ಭಾರತದ ಸಾಂಸ್ಕøತಿಕ ಮತ್ತು ಆಧ್ಯಾತ್ಮಿಕ ಇತಿಹಾಸದಲ್ಲಿ ಧ್ರುವನಕ್ಷತ್ರದಂತೆ ಎಂದು ವರ್ಣಿಸಿದರು.
ಶ್ರೀ ಶಂಕರಾಚಾರ್ಯರು ಅಕ್ಷರ ಜ್ಞಾನದಿಂದ ಎಲ್ಲವನ್ನು ಉಣಬಡಿಸಿದ್ದಾರೆ. ಅವರೊಬ್ಬ ದಾರ್ಶನಿಕರು, ತಮ್ಮ ಹಿರಿಮೆ, ಗರಿಮೆ, ಶ್ರೇಷ್ಠತೆಯನ್ನು ಒಂದು ಚೌಕಟ್ಟಿನಲ್ಲಿ ನಿಲ್ಲಿಸಿದವರು, ತಮ್ಮ ಅದ್ವೈತ ಸಿದ್ಧಾಂತವನ್ನು ಪ್ರಸಾರ ಮಾಡಲು ಮತ್ತು ಸನಾತನ ಧರ್ಮವನ್ನು ರಕ್ಷಿಸಲು ಭಾರತದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪ್ರಮುಖ ಮಠಗಳನ್ನು (ಆಶ್ರಮ) ಸ್ಥಾಪಿಸಿದರು. ಇವರ ಜ್ಞಾನ ಸುಧೆಯನ್ನು ಯುವ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಶಂಕರಾಚಾರ್ಯರ ಜಯಂತಿ ಆಚರಣೆ ಅರ್ಥಪೂರ್ಣವಾಗಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಕಾರ್ಯದರ್ಶಿ ಬಿ.ಕೆ.ಜಗದೀಶ್, ಎಸ್.ಎಸ್.ಸಂಪತ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿ ಎಂ.ಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ವ್ಯವಸ್ಥಾಪಕರಾದ ಆಶಾ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ಸುನೀತ ಇತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶರಾದ ಕುಮಾರ ಸ್ವಾಗತಿಸಿದರು. ವಿದ್ವಾನ್ ಬಿ.ಸಿ.ಶಂಕರಯ್ಯ ನಾಡಗೀತೆ ಹಾಡಿದರು. ಮಣಜೂರು ಮಂಜುನಾಥ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*

ಮೇ 26, 2026

*ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*

ಮೇ 26, 2026

*AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*

ಮೇ 26, 2026

*ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*

ಮೇ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 26 NEWS DESK : ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಾರ್ಯಕ್ರಮಗಳು ಗ್ರಾಮ ಮಟ್ಟಕ್ಕೂ ತಲುಪುತ್ತಿದ್ದು,…

*AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*

ಮೇ 26, 2026

*ಪ್ರವಾಸೋದ್ಯಮ  ಸಂಘ-ಸಂಸ್ಥೆಗಳ ಸಭೆ : ಕೊಡಗಿನ ಆತಿಥ್ಯ ಪ್ರವಾಸೋದ್ಯಮದ ಬಗ್ಗೆ ಆದಾರರಹಿತ ಟೀಕೆಗಳಿಗೆ ಕಡಿವಾಣ ಅಗತ್ಯ : ದಿನೇಶ್ ಕಾಯ೯ಪ್ಪ*

ಮೇ 26, 2026

*ಫೀ.ಮಾ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ : 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ನೀಡಿದೆ : ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ*

ಮೇ 26, 2026

*ಮೇ 29 ಮತ್ತು 30 ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ*

ಮೇ 26, 2026

*ಮಡಿಕೇರಿ ನಗರಸಭೆಯ ಬಿಜೆಪಿ ಆಡಳಿತ ಮಂಡಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ* 

ಮೇ 26, 2026

*ನಮ್ಮೂರ ಶಾಲೆ ನಮ್ಮದು, ನಮ್ಮೂರಲ್ಲೆ ಉಳಿಯಲಿ : ಎಐಡಿಎಸ್‍ಓ ವಿದ್ಯಾರ್ಥಿ ಸಂಘಟನೆ ಹಾಗೂ ಗ್ರಾಮಸ್ಥರ ಆಗ್ರಹ*

ಮೇ 26, 2026

*ನಿವೇಶನಕ್ಕಾಗಿ ಆಗ್ರಹಿಸಿ ಮೇ 29 ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ*

ಮೇ 26, 2026

*ದೇವಟ್ ಪರಂಬ್ ನಲ್ಲಿ ಹಿರಿಯರಿಗೆ ಗೌರವ ಅರ್ಪಿಸಿದ ಸಿಎನ್‌ಸಿ : ಅಂತರಾಷ್ಟ್ರೀಯ ಸ್ಮಾರಕ ನಿರ್ಮಾಣಕ್ಕೆ ಒತ್ತಾಯ*

ಮೇ 26, 2026

*ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*

ಮೇ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.