
ಮಡಿಕೇರಿ ಏ.22 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.22 ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* (ಲಾಲು ಮುದ್ದಯ್ಯ ಮೈದಾನ) ಮೋಟನಾಳಿರ ಮತ್ತು ಚೌರೀರ ತಂಡಗಳ ನಡುವಿನ ಪಂದ್ಯದಲ್ಲಿ ಮೋಟನಾಳಿರ 25 ರನ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮೋಟನಾಳಿರ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 114 ರನ್ ಗಳನ್ನು ಗಳಿಸಿತು. ಚೌರೀರ 6 ಓವರ್‍ಗಳಲ್ಲಿ 5 ವಿಕೆಟ್ ನಷ್ಟಕ್ಕೆ 89 ರನ್ ಗಳನ್ನು ಸೇರಿಸಿ ಸೋಲು ಕಂಡಿತು.
ಮಚ್ಚಮಾಡ ಮತ್ತು ಸರ್ಕಂಡ ನಡುವಿನ ಪಂದ್ಯದಲ್ಲಿ ಮಚ್ಚಮಾಡ 57 ರನ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಚ್ಚಮಾಡ 6 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 100 ರನ್ ಗಳನ್ನು ಸೇರಿಸಿತು. ಸರ್ಕಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 43 ರನ್ ಗಳನ್ನಷ್ಟೇ ಗಳಿಸಿ ಸೋಲೊಪ್ಪಿಕೊಂಡಿತು. ಪಾಂಡ್ಯಂಡ ಮತ್ತು ಪೊನ್ನಚಂಡ ನಡುವಿನ ಪಂದ್ಯದಲ್ಲಿ ಪಾಂಡ್ಯಂಡಕ್ಕೆ 10 ವಿಕೆಟ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪೊನ್ನಚಂಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 61 ರನ್ ಗಳನ್ನು ಗಳಿಸಿತು. ಪಾಂಡ್ಯಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ 3.5 ಓವರ್ ಗಳಲ್ಲಿ 65 ರನ್ ಗಳನ್ನು ಸೇರಿಸಿ ಗೆಲುವು ಕಂಡಿತು. ಮುಕ್ಕಾಟಿರ (ಬೇತ್ರಿ) ಮತ್ತು ಮಾದೆಯಂಡ (ಮಾದಾಪುರ) ನಡುವಿನ ಪಂದ್ಯದಲ್ಲಿ ಮಾದೆಯಂಡ 31 ರನ್ ಗಳಿಂದ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಾದೆಯಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 70 ರನ್ ಗಳನ್ನು ಸೇರಿಸಿತು. ಮುಕ್ಕಾಟಿರ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 39 ರನ್ ಗಳನ್ನು ಗಳಿಸಿ ಸೋಲು ಅನುಭವಿಸಿತು.
ಗೀಜಿಗಂಡ ಮತ್ತು ಬೊಳ್ಳೆಪಂಡ ನಡುವಿನ ಪಂದ್ಯದಲ್ಲಿ ಗೀಜಿಗಂಡ ತಂಡಕ್ಕೆ 35 ರನ್ ಗಳ ಜಯ ಲಭಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಗೀಜಿಗಂಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 78 ರನ್ ಗಳನ್ನು ಗಳಿಸಿತು. ಬೊಳ್ಳೆಪಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 48 ರನ್ ಗಳನ್ನು ಸೇರಿಸಿ ಸೋಲೊಪ್ಪಿಕೊಂಡಿತು. *ಮೈದಾನ 2* (ಅರಮೇರಿ ಎಸ್‍ಎಂಎಸ್) ಚೇರಂಡ ಮತ್ತು ಕೋಳೇರ ನಡುವಿನ ಪಂದ್ಯದಲ್ಲಿ ಕೋಳೇರ ತಂಡ 7 ವಿಕೆಟ್ ಗಳಿಂದ ಗೆಲುವು ಕಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೇರಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 39 ರನ್ ಗಳನ್ನು ಸೇರಿಸಿತು. ಕೋಳೇರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 42 ರನ್ ಗಳನ್ನು ಗಳಿಸಿ ಜಯ ಸಾಧಿಸಿತು. ಮೂಕಳೇರ ಮತ್ತು ಕೂತಂಡ ನಡುವಿನ ಹಣಾಹಣಿಯಲ್ಲಿ ಮೂಕಳೇರ 29 ರನ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮೂಕಳೇರ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 65 ರನ್ ಗಳನ್ನು ಗಳಿಸಿತು. ಕೂತಂಡ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 36 ರನ್ ಗಳನ್ನು ಸೇರಿಸಿ ಸೋಲು ಕಂಡಿತು. ಕೋಳುಮಾಡಂಡ (ಅರ್ವತ್ತೊಕ್ಲು) ಮತ್ತು ಚೊಟ್ಟಂಗಡ ನಡುವಿನ ಪಂದ್ಯದಲ್ಲಿ ಚೊಟ್ಟಂಗಡ ತಂಡಕ್ಕೆ 9 ವಿಕೆಟ್‍ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೋಳುಮಾಡಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 57 ರನ್ ಗಳನ್ನು ಸೇರಿಸಿತು. ಚೊಟ್ಟಂಗಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 61 ರನ್ ಗಳನ್ನು ಗಳಿಸಿ ಗೆಲುವು ಸಾಧಿಸಿತು. ಮುಕ್ಕಾಟಿರ (ಹರಿಹರ ಬೆಳ್ಳೂರು) ಹಾಗೂ ಕಂಗಂಡ ನಡುವಿನ ಪಂದ್ಯದಲ್ಲಿ ಮುಕ್ಕಾಟಿರ 10 ವಿಕೆಟ್ ಗಳಿಂದ ಜಯ ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಕಂಗಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 28 ರನ್ ಗಳನ್ನು ಗಳಿಸಿತು. ಮುಕ್ಕಾಟಿರ 2.1 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 32 ರನ್ ಗಳನ್ನು ಸೇರಿಸಿ ಗೆಲುವು ಕಂಡಿತು. ಪಾರುವಂಡ ಮತ್ತು ಬೊಳ್ಳಚೆಟ್ಟೀರ ನಡುವೆ ಪಂದ್ಯ ನಡೆಯಬೇಕಾಗಿತ್ತಾದರೂ ಬೊಳ್ಳಚೆಟ್ಟೀರ ತಂಡದಲ್ಲಿ ಆಟಗಾರರ ಕೊರತೆ ಉಂಟಾದ ಹಿನ್ನೆಲೆ ಪಾರುವಂಡ ಮುಂದಿನ ಸುತ್ತಿಗೆ ಪ್ರವೇಶ ಪಡೆಯಿತು.








