Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*
  • *ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*
  • *ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*
  • *ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*
  • *ಹಳ್ಳದಿಣ್ಣೆ ಗ್ರಾಮದ ರಸ್ತೆ ಅಭಿವೃದ್ಧಿಗೆ ₹25 ಲಕ್ಷ ಅನುದಾನ*
  • *ಅ.13 ಮತ್ತು 14ರಂದು ಕಾಫಿ ದಸರಾ ಸಂಭ್ರಮ: 50 ಮಳಿಗೆಗಳಲ್ಲಿ ಕಾಫಿ ಘಮ, 13 ಸಾಧಕರಿಗೆ ಸನ್ಮಾನ*
  • *ಪ್ರಜಾಪ್ರಭುತ್ವದ ಆಶಯ ಅರಿಯಲು ಯುವಸಂಸತ್ತು ಸಹಕಾರಿ: ಪ್ರೊ. ಅಶೋಕ ಸಂಗಪ್ಪ ಆಲೂರ*
  • *ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿದ್ಯಾಲಯದಲ್ಲಿ ಸಮಾಪನಗೊಂಡ ಸಮಾಗಮ ಬೇಸಿಗೆ ಶಿಬಿರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿದ್ಯಾಲಯದಲ್ಲಿ ಸಮಾಪನಗೊಂಡ ಸಮಾಗಮ ಬೇಸಿಗೆ ಶಿಬಿರ*

ಏಪ್ರಿಲ್ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಏ.23 NEWS DESK : ಪ್ರತಿಭೆ ಮತ್ತು ಕ್ರೀಡಾ ಚೈತನ್ಯ ಹೊಮ್ಮಿಸಿದ ಸಮಾಗಮ ಬೇಸಿಗೆ ಶಿಬಿರ ವಿವಿಧ ಕಲಾ ಪ್ರದರ್ಶನದೊಂದಿಗೆ ಸಮಾಪನಗೊಂಡಿತು. ನಗರದ ಕೊಡಗು ವಿದ್ಯಾಲಯದಲ್ಲಿ 22 ದಿನಗಳಿಂದ ನಡೆದ ಸಮಾಗಮ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭಕ್ಕೆ ವಿಜೃಂಭಣೆಯ ತೆರೆ ಬಿದ್ದಿತು. ಸಮಾಗಮ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಪ್ರಸಿದ್ಧ ಪಿಕಲ್‌ಬಾಲ್ ತರಬೇತುದಾರರು ಹಾಗೂ ಕರ್ನಾಟಕ ರಾಜ್ಯ ಪಿಕಲ್‌ಬಾಲ್ ಸಂಘದ ಸ್ಥಾಪಕ ಪ್ರಧಾನ ಕಾರ್ಯದರ್ಶಿ ಮತ್ತು ಏಷ್ಯಾ ಪಿಕಲ್‌ಬಾಲ್ ಮಹಾಸಂಘದ ಉಪಾಧ್ಯಕ್ಷ ರಜತ್ ಕಂಕರ್ ಎಂ. ಆರ್ ಆಗಮಿಸಿದ್ದರು. ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಜತ್ ಕಂಕರ್ , ಪೋಷಕರು ಮಕ್ಕಳೊಂದಿಗೆ ಸಮಯ ಕಳೆಯಬೇಕು ಹಾಗೂ ಅವರೊಂದಿಗೆ ಆಟವಾಡಬೇಕು ಎಂದು ಸಲಹೆ ನೀಡಿದರು. ಎಂಟು ವರ್ಷ ಮೇಲ್ಪಟ್ಟವರು ಪಿಕಲ್‌ಬಾಲ್ ಕ್ರೀಡೆಗಳಲ್ಲಿ ಭಾಗವಹಿಸಬಹುದು ಎಂದೂ ರಜತ್ ಕಂಕರ್ ಅವರು ಮಾಹಿತಿ ನೀಡಿದರು. ಈ ಕ್ರೀಡೆಯಲ್ಲಿ ಹಲವಾರು ವಿಭಾಗಗಳಿದ್ದು ಎಲ್ಲರಿಗೂ ಅವಕಾಶಗಳಿವೆ ಎಂದರು.ಮಕ್ಕಳು ವರ್ಷಪೂರ್ತಿ ಓದುವುದಷ್ಟೇ ಸಾಕಾಗುವುದಿಲ್ಲ, ಕ್ರೀಡೆ ಕೂಡ ಅಷ್ಟೇ ಮುಖ್ಯ ಎಂದು ರಜತ್ ಕಂಕರ್ ಹೇಳಿದರು. ಉತ್ತಮ ಅಂಕಗಳನ್ನು ಗಳಿಸುವುದಷ್ಟೇ ಗುರಿಯಾಗದೆ, ಕ್ರೀಡೆಯಲ್ಲಿ ಸಹ ತೊಡಗಿಸಬೇಕು ಎಂದು ಅವರು ಕಿವಿ ಮಾತು ಹೇಳಿದರು.ಮಕ್ಕಳ ಆರೋಗ್ಯಕರ ಜೀವನಕ್ಕಾಗಿ ಕೆಲವು ಮುಖ್ಯ ಸಲಹೆ ನೀಡಿದ ರಜತ್ ಕಂಕರ್, ಆರೋಗ್ಯಕ್ಕೆ ಸಮಸ್ಯೆ ತಂದೊಡ್ಡುವ ಆಹಾರ ಬೇಡ, ಮೊಬೈಲ್ ಬಳಕೆ ಕಡಿಮೆ ಮಾಡಬೇಕು,
ಎಂಟು ಗಂಟೆಗಳ ನಿದ್ರೆ ಅವಶ್ಯಕ ಎಂದರು. 21 ದಿನಗಳ ಸಮಾಗಮ ಶಿಬಿರದಲ್ಲಿ 240 ಮಕ್ಕಳು ಭಾಗವಹಿಸಿ, ವಿವಿಧ ಕ್ರೀಡೆ, ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಪಿಕಲ್‌ಬಾಲ್, ಬಾಸ್ಕೆಟ್‌ಬಾಲ್, ಕ್ರಿಕೆಟ್, ಹಾಕಿ, ಹ್ಯಾಂಡ್‌ಬಾಲ್, ಟೇಬಲ್ ಟೆನ್ನಿಸ್, ಚದುರಂಗ, ಸ್ಕೆಟ್‌ಬೋರ್ಡಿಂಗ್ ಮತ್ತು ಕರಾಟೆ ಮುಂತಾದ ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಅಭಿವೃದ್ಧಿಗೆ ಉತ್ತೇಜನ ನೀಡಿದವು. ಕಲೆ ಮತ್ತು ಕೈಗಾರಿಕಾ ವಿಭಾಗದಲ್ಲಿ ವಿದ್ಯಾರ್ಥಿಗಳು ತಮ್ಮ ಸೃಜನಾತ್ಮಕತೆಯನ್ನು ಪ್ರದರ್ಶಿಸಿದರು. ಮಕ್ಕಳಿಂದ ವಿವಿಧ ಭಂಗಿಯ ಯೋಗಾಭ್ಯಾಸ ಪ್ರದರ್ಶನವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾರಂಭಕ್ಕೆ ಮೆರುಗು ನೀಡಿದವು. ವಿದ್ಯಾರ್ಥಿಗಳು ಭರತನಾಟ್ಯ ಹಾಗೂ ಬಿಹು ನೃತ್ಯ ಪ್ರದರ್ಶನ ನೀಡಿ ಪ್ರೇಕ್ಷಕರ ಮನಸೆಳೆದರು. ಕರಾಟೆ ಪ್ರದರ್ಶನವೂ ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ತೋರಿಸಿತು. ಆರ್ಟ್ ಮತ್ತು ಕ್ರಾಫ್ಟ್ ವಿಭಾಗ ಹಾಗೂ ಕಿಡ್ಸ್ ಫೆಸ್ಟ್ ಮಕ್ಕಳಿಂದ ತಯಾರಿಸಲಾದ ವಿವಿಧ ಕಲಾಕೃತಿಗಳ ಪ್ರದರ್ಶನವನ್ನು ಮುಖ್ಯ ಅತಿಥಿಗಳು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ಶಾಲಾ ಪ್ರಾಂಶುಪಾಲರಾದ ಸುಮಿತ್ರ ಕೆ. ಎಸ್., ಆಡಳಿತ ವ್ಯವಸ್ಥಾಪಕ ರವಿ ಪಿ., ಆಡಳಿತ ಮಂಡಳಿ ಸದಸ್ಯರು, ತರಬೇತುದಾರರು, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ಬಿಂಧು ಕೆ. ಎಚ್ ಶಿಬಿರದ ಕುರಿತು ವರದಿ ವಾಚಿಸಿದರು. ದಕ್ಷ ಎನ್ ನಿರೂಪಿಸಿ, ಅತಿಥಿಗಳ ಪರಿಚಯವನ್ನು ತೃಪ್ತಿ ಟಿ. ಎನ್ ಮಾಡಿದರು. ಶೌರ್ಯ ಪೂಣಚ್ಚ ಸ್ವಾಗತಿಸಿ, ರಾಶಿ ಆರ್ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*

ಅಕ್ಟೋಬರ್ 9, 2026

*ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*

ಅಕ್ಟೋಬರ್ 9, 2026

*ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*

ಅಕ್ಟೋಬರ್ 9, 2026

*ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 9: ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಹಾಗೂ ಸಂಘಟನೆಯನ್ನು ವ್ಯವಸ್ಥಿತಗೊಳಿಸುವ ಉದ್ದೇಶದಿಂದ ಅಖಿಲ ಭಾರತ…

*ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*

ಅಕ್ಟೋಬರ್ 9, 2026

*ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*

ಅಕ್ಟೋಬರ್ 9, 2026

*ಹಳ್ಳದಿಣ್ಣೆ ಗ್ರಾಮದ ರಸ್ತೆ ಅಭಿವೃದ್ಧಿಗೆ ₹25 ಲಕ್ಷ ಅನುದಾನ*

ಅಕ್ಟೋಬರ್ 9, 2026

*ಅ.13 ಮತ್ತು 14ರಂದು ಕಾಫಿ ದಸರಾ ಸಂಭ್ರಮ: 50 ಮಳಿಗೆಗಳಲ್ಲಿ ಕಾಫಿ ಘಮ, 13 ಸಾಧಕರಿಗೆ ಸನ್ಮಾನ*

ಅಕ್ಟೋಬರ್ 9, 2026

*ಪ್ರಜಾಪ್ರಭುತ್ವದ ಆಶಯ ಅರಿಯಲು ಯುವಸಂಸತ್ತು ಸಹಕಾರಿ: ಪ್ರೊ. ಅಶೋಕ ಸಂಗಪ್ಪ ಆಲೂರ*

ಅಕ್ಟೋಬರ್ 9, 2026

*ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*

ಅಕ್ಟೋಬರ್ 9, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.