
ಮಡಿಕೇರಿ NEWS DESK ಏ.24 : ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಜಿಲ್ಲೆಯ ಹೋಂಸ್ಟೇ, ಹೊಟೇಲ್ ಮತ್ತು ಟ್ರಾವೆಲ್ಸ್ ಮಾಲೀಕರ ಸಂಘದ ಪದಾಧಿಕಾರಿಗಳ ಸಭೆ ನಡೆಸಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಹಾಗೂ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಪ್ರವಾಸಿಗರ ಸುರಕ್ಷತೆಯ ಕುರಿತು ಸಲಹೆ ಸೂಚನೆಗಳನ್ನು ನೀಡಿದರು. ಹೋಂಸ್ಟೇ, ಹೊಟೇಲ್ ಗಳ ನೋಂದಣಿ, ಪ್ರವಾಸಿಗರ ಸುರಕ್ಷತೆ, ಕಾರ್ಮಿಕರ ಗುಣ ನಡತೆ ಪರಿಶೀಲನೆ, ವಿದೇಶೀ ಪ್ರವಾಸಿಗರ ನೋಂದಣಿ ಮುಂತಾದ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ವಾರ್ತಾ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.









