
ಮಡಿಕೇರಿ NEWS DESK ಏ.25 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.25 ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* (ಲಾಲು ಮುದ್ದಯ್ಯ ಮೈದಾನ)
ಮಂಡುವoಡ ಮತ್ತು ಕಳಕಂಡ ತಂಡಗಳ ನಡುವಿನ ಪಂದ್ಯದಲ್ಲಿ ಮಂಡುವoಡ 16 ರನ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಂಡುವoಡ 6 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 54 ರನ್ ಗಳನ್ನು ಸೇರಿಸಿತು. ಕಳಕಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 38 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ಮoಡೇಪoಡ ಮತ್ತು ಮಲ್ಲಜ್ಜಿರ ನಡುವಿನ ಪಂದ್ಯದಲ್ಲಿ ಮಲ್ಲಜ್ಜಿರ 8 ವಿಕೆಟ್ ಗಳ ಜಯ ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಂಡೇಪoಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 50 ರನ್ ಗಳನ್ನು ಗಳಿಸಿತು. ಮಲ್ಲಜ್ಜಿರ 4.5 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 51 ರನ್ ಗಳನ್ನು ಸೇರಿಸಿ ಪಂದ್ಯವನ್ನು ಗೆದ್ದುಕೊಂಡಿತು. ಮಾಚೆಟ್ಟಿರ (ಬಾಳುಗೋಡು) ಮತ್ತು ಬೊಟ್ಟಂಗಡ ನಡುವಿನ ಪಂದ್ಯದಲ್ಲಿ ಬೊಟ್ಟಂಗಡ 62 ರನ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬೊಟ್ಟಂಗಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 124 ರನ್ ಗಳನ್ನು ಸೇರಿಸಿತು. ಮಾಚೆಟ್ಟಿರ 6 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನಷ್ಟೇ ಗಳಿಸಿ ಸೋಲು ಕಂಡಿತು. ಚೆಕ್ಕೇರ ಮತ್ತು ಓಡಿಯಂಡ ನಡುವಿನ ಪಂದ್ಯದಲ್ಲಿ ಚೆಕ್ಕೇರ 53 ರನ್ ಗಳಿಂದ ಜಯ ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆಕ್ಕೇರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 110 ರನ್ ಗಳನ್ನು ಗಳಿಸಿತು. ಓಡಿಯಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 57 ರನ್ ಗಳನ್ನು ಸೇರಿಸಿ ಸೋಲು ಅನುಭವಿಸಿತು.
ಬೊಳಕಾರಂಡ (ಕೊಣಂಜಗೇರಿ) ಮತ್ತು ಅಜ್ಜೇಟಿರ ನಡುವಿನ ಪಂದ್ಯದಲ್ಲಿ ಬೊಳಕಾರಂಡ 7 ವಿಕೆಟ್ ಗಳಿಂದ ಗೆಲುವು ಕಂಡಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಅಜ್ಜೇಟ್ಟಿರ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 54 ರನ್ ಗಳನ್ನು ಸೇರಿಸಿತು. ಬೊಳಕಾರಂಡ 4.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 55 ರನ್ ಗಳನ್ನು ಗಳಿಸಿ ಜಯ ಸಾಧಿಸಿತು. ಮಾಚಮಾಡ ಮತ್ತು ಮೋಟನಾಳಿರ ನಡುವಿನ ಪೈಪೋಟಿಯಲ್ಲಿ ಮೋಟನಾಳಿರ 42 ರನ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮೋಟನಾಳಿರ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 96 ರನ್ ಗಳನ್ನು ಗಳಿಸಿತು. ಮಾಚಮಾಡ 6 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 54 ರನ್ ಗಳನ್ನು ಸೇರಿಸಿ ಸೋಲು ಅನುಭವಿಸಿತು. ಪಂದ್ಯoಡ ಮತ್ತು ಚೊಟ್ಟಂಗಡ ನಡುವಿನ ಪಂದ್ಯದಲ್ಲಿ ಪಂದ್ಯoಡ 4 ರನ್ ಗಳ ಜಯ ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂದ್ಯoಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನು ಸೇರಿಸಿತು. ಚೊಟ್ಟಂಗಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 58 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ಪುದಿಯೊಕ್ಕಡ ಮತ್ತು ಹಂಚೆಟ್ಟಿರ ನಡುವಿನ ಪಂದ್ಯದಲ್ಲಿ ಪುದಿಯೊಕ್ಕಡ ತಂಡಕ್ಕೆ 34 ರನ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪುದಿಯೊಕ್ಕಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 96 ರನ್ ಗಳನ್ನು ಗಳಿಸಿತು. ಹಂಚೆಟ್ಟಿರ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನು ಸೇರಿಸಿ ಸೋಲು ಕಂಡಿತು.








