
ಮಡಿಕೇರಿ NEWS DESK ಏ.26 : ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಮೀಸಲಾತಿ ಕುರಿತು ಸಹಿ ಸಂಗ್ರಹ ಕಾರ್ಯಕ್ರಮ ಏ.27 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ ಎಂದು ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಪುಷ್ಪಲತಾ ಜಿ.ಆರ್ ತಿಳಿಸಿದ್ದಾರೆ.
ಮಹಿಳೆಯರಿಗೆ ಶೀಘ್ರ ಶೇ.33 ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲು ಸಹಿ ಸಂಗ್ರಹ ಅಭಿಯಾನ ನಡೆಸಲಾಗುತ್ತಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.








