
ಮಡಿಕೇರಿ ಏ.27 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.27 ರಂದು ಮಹಿಳೆಯರ ಕ್ವಾರ್ಟರ್ ಫೈನಲ್ಸ್ ನಲ್ಲಿ ಗೆಲುವು ಸಾಧಿಸಿದ ತಂಡಗಳು *ಮೈದಾನ 1* (ಲಾಲು ಮುದ್ದಯ್ಯ ಮೈದಾನ) ಮುಕ್ಕಾಟಿರ (ಬೆಳ್ಳೂರು – ಹರಿಹರ) ಮತ್ತು ಪಾಸುರ ನಡುವಿನ ಪಂದ್ಯದಲ್ಲಿ ಮುಕ್ಕಾಟಿರ ತಂಡಕ್ಕೆ 4 ರನ್ ಗಳ ಜಯ ಲಭಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮುಕ್ಕಾಟಿರ 5 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 43 ರನ್ ಗಳನ್ನು ಸೇರಿಸಿತು. ಪಾಸುರ 5 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 39 ರನ್ ಗಳನ್ನು ಗಳಿಸಿ ಸೋಲು ಕಂಡಿತು. ಮುಕ್ಕಾಟಿರ ಅಂಜನಾ 17 ರನ್ ಗಳನ್ನು ಗಳಿಸಿದರು. ಪಾಸುರ ಅಕ್ಷಿತಾ 22 ರನ್ ಗಳನ್ನು ಸೇರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಓಡಿಯಂಡ ಮತ್ತು ಚೆಕ್ಕೇರ ನಡುವಿನ ಹಣಾಹಣಿಯಲ್ಲಿ ಚೆಕ್ಕೇರ 5 ರನ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆಕ್ಕೇರ 5 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 35 ರನ್ ಗಳನ್ನು ಗಳಿಸಿತು. ಓಡಿಯಂಡ 5 ಓವರ್‍ಗಳಲ್ಲಿ 3 ವಿಕೆಟ್ ನಷ್ಟಕ್ಕೆ 30 ರನ್ ಗಳನ್ನು ಸೇರಿಸಿ ಸೋಲೊಪ್ಪಿಕೊಂಡಿತು. ಚೆಕ್ಕೇರ ದೇಚಮ್ಮ 15 ರನ್ ಗಳನ್ನು ಗಳಿಸಿದರು. 10 ರನ್ ಗಳನ್ನು ಸೇರಿಸಿದ ಓಡಿಯಂಡ ರೋಹಿಣಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.








