


ಮಡಿಕೇರಿ ಏ.28 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.28 ರಂದು ನಡೆದ ಪುರುಷರ ಕ್ವಾರ್ಟರ್ ಫೈನಲ್ಸ್ ನಲ್ಲಿ ಗೆಲುವು ಸಾಧಿಸಿದ ತಂಡಗಳು *ಮೈದಾನ 1* (ಲಾಲು ಮುದ್ದಯ್ಯ ಮೈದಾನ) ಚೆಕ್ಕೇರ ಮತ್ತು ಮಲ್ಲಜ್ಜಿರ ತಂಡಗಳ ನಡುವಿನ ಪಂದ್ಯದಲ್ಲಿ ಚೆಕ್ಕೇರ 64 ರನ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆಕ್ಕೇರ 8 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 100 ರನ್ ಗಳ ಸಾಧನೆ ಮಾಡಿತು. ಮಲ್ಲಜ್ಜಿರ 8 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 36 ರನ್ ಗಳನ್ನಷ್ಟೇ ಸೇರಿಸಿ ಸೋಲೊಪ್ಪಿಕೊಂಡಿತು. ಚೆಕ್ಕೇರ ಆಕರ್ಷ್ 47 ರನ್ ಗಳನ್ನು ಗಳಿಸಿ ತಂಡದ ಗೆಲುವಿಗೆ ಸಹಕಾರಿಯಾದರು. ಮಲ್ಲಜ್ಜಿರ ಪರ ರೋಷನ್ 2 ವಿಕೆಟ್ ಪಡೆದು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಮೋಟನಾಳಿರ ಮತ್ತು ಪಂದ್ಯಂಡ ನಡುವಿನ ಪಂದ್ಯದಲ್ಲಿ ಪಂದ್ಯಂಡ ತಂಡಕ್ಕೆ 7 ವಿಕೆಟ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮೋಟನಾಳಿರ 8 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 55 ರನ್ ಗಳನ್ನು ಸೇರಿಸಿತು. ಪಂದ್ಯಂಡ 4 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 59 ರನ್ ಗಳನ್ನು ಗಳಿಸಿ ಗೆಲುವು ದಾಖಲಿಸಿತು. ಮೋಟನಾಳಿರ ಶರತ್ 25 ರನ್ ಗಳನ್ನು ಸೇರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಪಂದ್ಯಂಡ ಅಯ್ಯಪ್ಪ 18 ರನ್ ಗಳನ್ನು ಗಳಿಸಿದರು. ಮಾಳೇಟಿರ (ಕೆದಮುಳ್ಳೂರು) ಮತ್ತು ಅಳಮೇಂಗಡ ನಡುವಿನ ಪಂದ್ಯದಲ್ಲಿ ಮಾಳೇಟಿರ 40 ರನ್ ಗಳಿಂದ ವಿಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಾಳೇಟಿರ 8 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 95 ರನ್ ಗಳನ್ನು ಗಳಿಸಿತು. ಅಳಮೇಂಗಡ 8 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 55 ರನ್ ಗಳನ್ನು ಸೇರಿಸಿ ಸೋಲು ಕಂಡಿತು. ಮಾಳೇಟಿರ ರಿಷಬ್ 64 ರನ್ ಗಳನ್ನು ಸೇರಿಸಿ ತಂಡದ ಗೆಲುವಿಗೆ ಸಹಕಾರಿಯಾದರು. ಅಳಮೇಂಗಡ ದಿಲೀಪ್ 34 ರನ್ ಗಳನ್ನು ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅಳಮೇಂಗಡ ಪರ ಸೋಮಣ್ಣ 3 ವಿಕೆಟ್ ಪಡೆದರು. ನೆರವಂಡ ಮತ್ತು ಪಾರುವಂಡ ನಡುವಿನ ಪಂದ್ಯದಲ್ಲಿ 8 ವಿಕೆಟ್ ಗಳಿಂದ ಪಾರುವಂಡ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನೆರವಂಡ 8 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 77 ರನ್ ಗಳನ್ನು ಸೇರಿಸಿತು. ಪರುವಂಡ 5.5 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 78 ರನ್ ಗಳನ್ನು ಗಳಿಸಿ ಗೆಲುವಿನ ನಗು ಬೀರಿತು. ಪ್ರವೀಣ್ 35 ರನ್ ಗಳನ್ನು ಸೇರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಪಾರುವಂಡ ಪ್ರಿನ್ಸ್ 59 ರನ್ ಗಳನ್ನು ಗಳಿಸಿ ತಂಡದ ಗೆಲುವಿಗೆ ಸಹಕಾರಿಯಾದರು.








