Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ

ಏಪ್ರಿಲ್ 30, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು, ಏ.30 NEWS DESK : ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಭಾರತದ ಸರ್ವೋಚ್ಛ ನ್ಯಾಯಾಲಯ ‘ಸಮಾಧಾನ ಸಮಾರೋಹ-2026’ ಎಂಬ ವಿಶೇಷ ಲೋಕ ಅದಾಲತ್‍ನ್ನು ಆಗಸ್ಟ್ 21, 22 ಮತ್ತು 23 ರಂದು ಮೂರು ದಿನಗಳ ಕಾಲ ಹಮ್ಮಿಕೊಂಡಿದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ಅನು ಸಿವರಾಮನ್ ತಿಳಿಸಿದರು. ಇಂದು ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಸುಪ್ರೀಂ ಕೋರ್ಟ್ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಒಟ್ಟು 4,328 ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಸಂಧಾನಕ್ಕಾಗಿ ಗುರುತಿಸಿ ಈ ವಿಶೇಷ ಲೋಕ ಅದಾಲತ್ ಆಯೋಜಿಸಿದ್ದು, ಆಸಕ್ತಿವುಳ್ಳವರು ಸುಪ್ರೀಂ ಕೋರ್ಟ್‍ನಲ್ಲಿ ಬಾಕಿ ಇರುವ ತಮ್ಮ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ನೋಂದಣಿಗೆ ಸಹ ಅವಕಾಶ ಕಲ್ಪಿಸಲಾಗಿದೆ. ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಂಪರ್ಕಿಸುವ ಮೂಲಕ ಸಾರ್ವಜನಿಕರು ತಮ್ಮ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ಇಂದಿನಿಂದಲೇ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಆಯ್ಕೆಯಾದ ವ್ಯಾಜ್ಯಗಳನ್ನು ನೋಂದಾಯಿತ ಕಾನೂನು ಸಮನ್ವಯಕರ ಮಧ್ಯಸ್ಥಿಕೆಯಲ್ಲಿ ತಾವಿರುವ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿಯೇ ಸಮಸ್ಯೆಯನ್ನು ಬಗೆಹರಿಸಿ ಕೊಳ್ಳಬಹುದಾಗಿದೆ. ಪ್ರಸ್ತುತ ಸುಪ್ರೀಂ ಕೋರ್ಟ್ ಪ್ರಮುಖವಾಗಿ ಬ್ಯಾಂಕಿಂಗ್ ಮತ್ತು ವಿಮಾ ಸಂಬಂಧಿತ ಪ್ರಕರಣಗಳು, ನಾಗರೀಕ ಕಾನೂನು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ಗ್ರಾಹಕ ವ್ಯಾಜ್ಯಗಳು ಮತ್ತು ರೇರಾ, ಕ್ರಿಮಿನಲ್ ಪ್ರಕರಣಗಳು, ಕೌಟುಂಬಿಕ ವಿವಾದಗಳು, ಕಾರ್ಮಿಕ ಮತ್ತು ಕೈಗಾರಿಕಾ ಕಾನೂನುಗಳು ವಿವಾದಗಳು, ಭೂಸ್ವಾಧೀನ ಮತ್ತು ಪುನರ್ವಸತಿ, ಆಸ್ತಿ ತೆರಿಗೆ, ಬಾಡಿಗೆ ನಿಯಂತ್ರಣ ಮತ್ತು ಸಾರ್ವಜನಿಕ ಆವರಣ (ತೆರವುಗೊಳಿಸುವಿಕೆ) ಕಾಯ್ದೆ, ವರ್ಗಾವಣೆ ಅರ್ಜಿಗಳು ಮತ್ತು ಸೇವಾ ಕಾನೂನುಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಇತ್ಯರ್ಥಕ್ಕೆ ಗುರುತಿಸಲಾಗಿದೆ. ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಒಟ್ಟು 4,328 ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಸಂಧಾನಕ್ಕಾಗಿ ಗುರುತಿಸಲಾಗಿದ್ದು ಅದರಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ 1,245, ಬೆಳಗಾವಿ 517, ಕಲಬುರಗಿ 269, ವಿಜಯಪುರ 213, ಧಾರವಾಡ 188, ಬಾಗಲಕೋಟೆ 159, ಗದಗದಲ್ಲಿ 125, ಬಳ್ಳಾರಿ 109, ತುಮಕೂರು 101, ಕೊಪ್ಪಳ 98, ಹಾವೇರಿ 81, ಉಡುಪಿ 78, ಬೀದರ್ 77, ದಕ್ಷಿಣ ಕನ್ನಡ 75, ಶಿವಮೊಗ್ಗ 69, ರಾಯಚೂರು 69, ಚಿತ್ರದುರ್ಗ 58, ಮೈಸೂರು 56, ದಾವಣಗೆರೆ 47, ಉತ್ತರ ಕನ್ನಡ 35 ಮಂಡ್ಯ 30, ಚಿಕ್ಕಮಗಳೂರು 27, ಹಾಸನ 24, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 18, ರಾಮನಗರ 17, ಚಿಕ್ಕಬಳ್ಳಾಪುರ 17, ಕೊಡಗು 15, ಯಾದಗಿರಿ 14 ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ 4 ಪ್ರಕರಣಗಳು ಒಳಗೊಂಡಿವೆ. ಕರ್ನಾಟಕದ ವ್ಯಾಪ್ತಿಯ ಹೊರಗಿನಿಂದ 36 ಪ್ರಕರಣಗಳು ವರದಿಯಾಗಿದ್ದು, ಸರಿಯಾಗಿ ಗುರುತಿಸಲಾಗದ ಪ್ರಕರಣಗಳ ಸಂಖ್ಯೆ 347 ಆಗಿದೆ. ಸುಪ್ರೀಂ ಕೋರ್ಟ್ ಈಗಾಗಲೇ ಗುರುತಿಸಲಾದ ಪ್ರಕರಣಗಳಲ್ಲಿ 937ಕ್ಕೂ ಹೆಚ್ಚು ಪ್ರಕರಣಗಳು ಸರ್ಕಾರವು ಪಕ್ಷವಾಗಿರುವ ಪ್ರಕರಣಗಳಾಗಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸಲು ಮತ್ತು ಪ್ರಕರಣಗಳ ಇತ್ಯರ್ಥಕ್ಕೆ ಮುಂದಾಗುವಂತೆ ಮಾನ್ಯ ಅಡ್ವಕೇಟ್ ಜನರಲ್ ಅವರೊಂದಿಗೆ ಈಗಾಗಲೇ ಸಮಾಲೋಚನೆ ನಡೆಸಲಾಗಿದೆ ಎಂದರು. ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಆರ್ ದೇವದಾಸ್ ಅವರು ಮಾತನಾಡಿ ಈ ವಿಶೇಷ ಲೋಕ ಅದಾಲತ್ ಜನಸಾಮಾನ್ಯರಿಗೆ ತಮ್ಮ ಕಾನೂನು ಹೋರಾಟವನ್ನು ತ್ವರಿತವಾಗಿ ಮತ್ತು ಕಡಿಮೆ ವೆಚ್ಚದಲ್ಲಿ ಮುಗಿಸಿಕೊಳ್ಳಲು ಸಿಕ್ಕಿರುವ ಮಹತ್ವದ ಅವಕಾಶವಾಗಿದೆ. ಇದರಿಂದ ಸಮಯ ಮತ್ತು ಹಣ ಉಳಿತಾಯವಾಗುವುದಲ್ಲದೆ, ಉಭಯ ಪಕ್ಷಗಳ ನಡುವೆ ಸೌಹಾರ್ದ ಸಂಬಂಧ ಉಳಿಯಲು ಸಹಕಾರಿಯಾಗಲಿದೆ. ಸಾರ್ವಜನಿಕರು ಈ ಅದಾಲತ್ ಪ್ರಯೋಜನ ಪಡೆಯುವಂತೆ ಮನವಿ ಮಾಡಿದರು. ಆಸಕ್ತ ಕಕ್ಷಿದಾರರು ಅಥವಾ ಅವರ ವಕೀಲರು ಸರ್ವೋಚ್ಚ ನ್ಯಾಯಾಲಯದ ವೆಬ್‍ಸೈಟ್‍ನಲ್ಲಿ ನೀಡಲಾದ ಗೂಗಲ್ ಫಾರ್ಮ್ ಲಿಂಕ್ https://forms.gle/jqxefqF4BCWzukoP6 ಮೂಲಕ ಮೇ 31, 2026 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೋಟಿಸ್ ಪಡೆದ ಕಕ್ಷಿದಾರರು ತಾವಿರುವ ಜಿಲ್ಲಾ ಅಥವಾ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಮುಂದೆ ಖುದ್ದಾಗಿ ಅಥವಾ ವಿಡಿಯೋ ಕಾನ್ಫರೆನ್ಸ್ ಮೂಲಕ ಪೂರ್ವ ಸಂಧಾನ ಸಭೆಗಳಿಗೆ ಹಾಜರಾಗಬಹುದು. :: ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ::  ಭಾರತದ ಸರ್ವೋಚ್ಚ ನ್ಯಾಯಾಲಯದ ಒನ್ ಸ್ಟಾಪ್ ಕೇಂದ್ರದ ಸಂಪರ್ಕ ಸಂಖ್ಯೆ: 011-23112428, 011-23112528, 011-23116464, 011-23116465, 011-23115652. ಇಮೇಲ್: speciallokadalat2026 @sci.nic.in. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಸಂಪರ್ಕ ಸಂಖ್ಯೆ: 011-23382778, 011-23382121 ಹಾಗೂ ಟೋಲ್ ಫ್ರೀ ಸಂಖ್ಯೆ. 15100 ಸರ್ವೋಚ್ಚ ನ್ಯಾಯಾಲಯದ ಕಾನೂನು ಸೇವಾ ಸಮಿತಿಯ ಸಂಪರ್ಕ ಸಂಖ್ಯೆ: 011-23381257, 211-23116353, 011-23116354. ಇಮೇಲ್: sclsc@nic.in ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಂಪರ್ಕ ಸಂಖ್ಯೆ: 080-22111729, 080-22111714. ಇಮೇಲ್: samadhansamaroh@gmail.com ಹಾಗೂ ಟೋಲ್ ಫ್ರೀ ಸಂಖ್ಯೆ: 15100 (24*7) ಉಚ್ಛ ನ್ಯಾಯಾಲಯ ಕಾನೂನು ಸೇವಾ ಸಮಿತಿ, ಬೆಂಗಳೂರು ಸಂಪರ್ಕ ಸಂಖ್ಯೆ: 080-22869988. ಇ-ಮೇಲ್ : hclscbng@gmail.com ಗೆ ಸಂಪರ್ಕಿಸಬಹುದು.

Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿ ದಸರಾ ಬೈಲಾ ತಿದ್ದುಪಡಿಗೆ ಕ್ರಮ : ಶಾಸಕ ಡಾ.ಮಂತರ್ ಗೌಡ ಭರವಸೆ; ದಸರಾ ದಶಮಂಟಪ ಸಮಿತಿ ಸೇರಿದಂತೆ 62 ಸಂಘ ಸಂಸ್ಥೆಗಳಿಂದ ಪೌರ ಸನ್ಮಾನ

ನವೆಂಬರ್ 4, 2026

ಸುಂಟಿಕೊಪ್ಪಕ್ಕೆ ಕನ್ನಡ ಸಾಹಿತ್ಯ ಇತಿಹಾಸದಲ್ಲಿ ವಿಶೇಷ ಸ್ಥಾನವಿದೆ : ಪಿ.ಎಫ್. ಸೆಬಾಸ್ಟಿನ್; ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಹಿತಿ ಸತೀಶ್ ಕಾಜೂರು ಅವರಿಗೆ ಸನ್ಮಾನ

ನವೆಂಬರ್ 4, 2026

ಕೊಡಗಿನಲ್ಲಿ ನಿರಂತರ ಹುಲಿ ದಾಳಿ: 50ಕ್ಕೂ ಹೆಚ್ಚು ಜಾನುವಾರುಗಳು ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ; ಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಪರಿಶೀಲನೆ

ನವೆಂಬರ್ 4, 2026

ಸುಂಟಿಕೊಪ್ಪಕ್ಕೆ ಕನ್ನಡ ಸಾಹಿತ್ಯ ಇತಿಹಾಸದಲ್ಲಿ ವಿಶೇಷ ಸ್ಥಾನವಿದೆ : ಪಿ.ಎಫ್. ಸೆಬಾಸ್ಟಿನ್; ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಹಿತಿ ಸತೀಶ್ ಕಾಜೂರು ಅವರಿಗೆ ಸನ್ಮಾನ

ನವೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ನ.4: ಕನ್ನಡ ಸಾಹಿತ್ಯ ಇತಿಹಾಸದಲ್ಲಿ ಸುಂಟಿಕೊಪ್ಪಕ್ಕೆ ವಿಶೇಷ ಸ್ಥಾನಮಾನವಿದೆ ಎಂದು ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ…

ಕೊಡಗಿನಲ್ಲಿ ನಿರಂತರ ಹುಲಿ ದಾಳಿ: 50ಕ್ಕೂ ಹೆಚ್ಚು ಜಾನುವಾರುಗಳು ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ; ಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಪರಿಶೀಲನೆ

ನವೆಂಬರ್ 4, 2026

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಕೊಡಗು ಅರೇಬಿಕಾ ಹಾಗೂ ಮಂಡ್ಯ ತಂಡಗಳು ಜಂಟಿ ಚಾಂಪಿಯನ್

ನವೆಂಬರ್ 4, 2026

ಸೋಮವಾರಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದತ್ತಿನಿಧಿ ಕಾರ್ಯಕ್ರಮ; ವಿವಿಧ ವಿಷಯಗಳ ಕುರಿತು ಉಪನ್ಯಾಸ, ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆಗಳ ಸ್ಪರ್ಧೆ

ನವೆಂಬರ್ 4, 2026

ಕಕ್ಕಬ್ಬೆ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆ

ನವೆಂಬರ್ 4, 2026

ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ; ಕದಿರು ಬಿಡುವ ಹಂತದಲ್ಲಿದ್ದ ಭತ್ತದ ಬೆಳೆ ನಾಶ; ರೈತರಿಗೆ ಅಪಾರ ನಷ್ಟ

ನವೆಂಬರ್ 4, 2026

ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಗೆ ಚಾಲನೆ

ನವೆಂಬರ್ 4, 2026

ಕನ್ನಡ ಭಾಷೆಯ ಉಳಿವು ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ; ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ; ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ನವೆಂಬರ್ 4, 2026

ಮೂರ್ನಾಡು ಭಾರತೀಯ ನೃತ್ಯ ಕಲಾ ಶಾಲೆಗೆ ಶೇ.100ರಷ್ಟು ಫಲಿತಾಂಶ; ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 4, 2026

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಡ್ಡಂಡ ಕಾರ್ಯಪ್ಪ ಅವರಿಗೆ ಮಸಿ ಬಳಿದ ಘಟನೆ ಖಂಡನೀಯ: ಬಿಜೆಪಿ ರೈತ ಮೋರ್ಚಾ

ನವೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.