
ಮಡಿಕೇರಿ ಮೇ 1 NEWS DESK : ವಿರಾಜಪೇಟೆ ತಾಲ್ಲೂಕಿನ ಕಡಂಗಮರೂರು ಗ್ರಾಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿದರು. ಗ್ರಾಮದ ಪ್ರಸಿದ್ಧ ಶ್ರೀ ಭದ್ರಕಾಳಿ ಹಾಗೂ ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಆಗಮಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಇದೇ ಸಂದರ್ಭ ದೇವಸ್ಥಾನಕ್ಕೆ ತೆರಳುವ ನೂತನ ರಸ್ತೆ ಲೋಕಾರ್ಪಣೆ ಮಾಡಿದ ಶಾಸಕರು, ಭಕ್ತಾದಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ತಮ್ಮ ಅನುದಾನದ 3 ಲಕ್ಷದಲ್ಲಿ ರಸ್ತೆಯನ್ನು ನಿರ್ಮಿಸಿ ಕೊಟ್ಟಿದ್ದು, ಲೋಕಾರ್ಪಣೆಯನ್ನು ಗೊಳಿಸಿ ಶುಭ ಹಾರೈಸಿದರು. ತಕ್ಕ ಮುಖ್ಯಸ್ಥರು, ಪಕ್ಷದ ಮುಖಂಡರು ಮಂಡೆಟೀರ ಅನಿಲ್, ಮಂಡೆಪಂಡ ರೋಷನ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು.









