
ಮಡಿಕೇರಿ ಮೇ 1 NEWS DESK : ಮಡಿಕೇರಿಯ ವಾಂಡರರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ದಿ. ಸಿ.ವಿ.ಶಂಕರ್ ಸ್ವಾಮಿ ಸ್ಮರಣಾರ್ಥ ಏರ್ಪಡಿಸಿಕೊಂಡು ಬರಲಾಗುತ್ತಿರುವ 32ನೇ ವರ್ಷದ ಉಚಿತ ಮಕ್ಕಳ ಬೇಸಿಗೆ ಕ್ರೀಡಾ ಶಿಬಿರದ ಸಮರೋಪ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಮೇ 3 ರಂದು ಬೆಳಿಗ್ಗೆ 8.30 ಗಂಟೆಗೆ ನಡೆಯಲಿದೆ. ವಾಂಡರರ್ಸ್ ಅಧ್ಯಕ್ಷ ಕೋಟೇರ ಮುದ್ದಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾರತ ತಂಡದ ಹಾಕಿ ಆಟಗಾರ ವಿ.ಎಸ್.ವಿನಯ್, ಹಿರಿಯ ಹಾಕಿ ಆಟಗಾರ ಕೆ.ಎ.ಗಣೇಶ್ ಉಪಸ್ಥಿತರಿರುವರು ಎಂದು ಶಿಬಿರದ ಸಂಚಾಲಕ ಬಾಬು ಸೋಮಯ್ಯ ತಿಳಿಸಿದ್ದಾರೆ.









