
ಮಡಿಕೇರಿ ಮೇ 3 NEWS DESK : ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೊಡಗು ಪತ್ರಿಕಾ ಭವನದ ಸಭಾಂಗಣದಲ್ಲಿ ಮೇ 5 ರಂದು ಸಂಜೆ 5 ಗಂಟೆಗೆ ಏರ್ಪಡಿಸಲಾಗಿದೆ. 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಮೇ 29 ಮತ್ತು 30 ರಂದು ಕುಶಾಲನಗರ ತಾಲೂಕಿನ ಸುಂಟಿಕೊಪ್ಪದಲ್ಲಿ ನಡೆಯಲಿದೆ. ಆ ಸಮ್ಮೇಳನದ ಲಾಂಛನವನ್ನು ಕೂಡ ಈ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ ಕೇಶವ ಕಾಮತ್ ವಹಿಸಲಿದ್ದಾರೆ. ಸಂಸ್ಥಾಪನಾ ದಿನದ ಕುರಿತು ಭಾಗಮಂಡಲ ಕಾವೇರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಬಿ ಬಿ ಶಿವಪ್ಪ ಉಪನ್ಯಾಸ ನೀಡಲಿದ್ದಾರೆ ಸಮ್ಮೇಳನದ ಲಾಂಛನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಬಿಡುಗಡೆಗೊಳಿಸಲಿದ್ದಾರೆ. ಸಂಸ್ಥಾಪನಾ ದಿನದ ಅಂಗವಾಗಿ ಕನ್ನಡ ನಾಡು ನುಡಿ ಗಾಗಿ ಸೇವೆ ಸಲ್ಲಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾ ಅಧ್ಯಕ್ಷರಾದ ಎಂ.ಎಸ್ ಪೂವಯ್ಯ ಮೂರ್ನಾಡು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಡಾ. ಮೇಚಿರ ಸುಭಾಷ್ ನಾಣ್ಯಯ್ಯ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ,ರು ಸೋಮವಾರಪೇಟೆಯ ಸಾಂದೀಪನೀನ ಶಾಲೆಯ ಅಧ್ಯಕ್ಷರು ಆದ ಎಂ.ಟಿ. ದಾಮೋದರ್, ನಿವೃತ್ತ ಪ್ರಾಂಶುಪಾಲರು, ಪತ್ರಕರ್ತರು ಆದ ಡಾ. ಜೆ. ಸೋಮಣ್ಣ, ನಿವೃತ್ತ ಪ್ರಾಂಶುಪಾಲರಾದ ಕೆ.ಜಿ. ದಿವಾಕರ್ ಮತ್ತು ಕೃಷಿಕರು ಹಾಗೂ ಕಲಾವಿದರಾದ ಕುಶಾಲನಗರದ ಎಂ ಎನ್ ಕಾಳಪ್ಪ ರವರನ್ನು ಸನ್ಮಾನಿಸಲಾಗುವುದ. ಈ ಸನ್ಮಾನ ಕಾರ್ಯಕ್ರಮವನ್ನು ಗ್ರಾಹಕ ನ್ಯಾಯಾಲಯದ ಮಾಜಿ ಅಧ್ಯಕ್ಷರೂ, ಪ್ರಸ್ತುತ ಕೊಡಗು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರಾದ ಎ. ಲೋಕೇಶ್ ಕುಮಾರ್ ನೆರವೇರಿಸಲಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ ಮುನೀರ್ ಅಹ್ಮದ್, ಪಿ.ರೇವತಿ ರಮೇಶ್, ಕೋಶಾಧಿಕಾರಿಗಳಾದ ಎಸ್.ಎಸ್ ಸಂಪತ್ ಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಬಿ.ಎಂ.ವಾಸು ರೈ, ಕೆ ಎನ್ ದೇವರಾಜ್, ಸಹಕಾರ್ಯದರ್ಶಿಗಳಾದ ಎ ವಿ ಮಂಜುನಾಥ್, ಜಲಜಾ ಶೇಖರ್, ಮಡಿಕೇರಿ ತಾಲೂಕು ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್,ಸೋಮವಾರಪೇಟೆ ತಾಲೂಕು ಅಧ್ಯಕ್ಷರಾದ ಎಸ್.ಡಿ ವಿಜೇತ್, ಕುಶಾಲನಗರ ತಾಲೂಕು ಅಧ್ಯಕ್ಷರಾದ ಕೆ.ಎಸ್ ನಾಗೇಶ್, ವಿರಾಜಪೇಟೆ ತಾಲೂಕು ಅಧ್ಯಕ್ಷರಾದ ಡಿ.ರಾಜೇಶ್ ಪದ್ಮನಾಭ, ಪೊನ್ನಂಪೇಟೆ ತಾಲೂಕು ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ ಭಾಗವಹಿಸಲಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.








