
ವಿರಾಜಪೇಟೆ ಮೇ 3 NEWS DESK : ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಅರ್ಥಶಾಸ್ತ್ರ ವಿಭಾಗದ ಪ್ರಾದ್ಯಾಪಕರಾದ ಬೆನೆಡಿಕ್ಟ್ ಆರ್ ಸಲ್ಡಾನ ಅವರು ಸೇವೆಯಿಂದ ವಯೋ ನಿವೃತ್ತರಾಗಿದ್ದು, ಅವರನ್ನು ಕಾವೇರಿ ಕಾಲೇಜು ವಿರಾಜಪೇಟೆ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಗೋಣಿಕೊಪ್ಪಲು ಕಾವೇರಿ ಕಾಲೇಜು ಹಾಗೂ ವಿರಾಜಪೇಟೆ ಕಾವೇರಿ ಕಾಲೇಜುಗಳಲ್ಲಿ ಅರ್ಥಶಾಸ್ತ್ರ ಪ್ರಾದ್ಯಾಪಕರಾಗಿ ಹಾಗೂ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾಗಿಯು ಸೇವೆಯನ್ನು ಸಲ್ಲಿಸಿದ್ದಾರೆ. ಸುದೀರ್ಘವಾದ 30 ವರ್ಷಗಳ ಪ್ರಾದ್ಯಾಪಕ ಸೇವೆಯ ಜೊತೆಯಲ್ಲಿ ಮಂಗಳೂರು ಹಾಗೂ ಕೊಡಗು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಬಿ.ಓ.ಇ ಆಗಿಯು ಸೇವೆಯನ್ನು ಸಲ್ಲಿಸಿರುತ್ತಾರೆ. ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ಉಪ ಪ್ರಾಂಶುಪಾಲೆ ಡಾ. ಕೆ.ಜಿ.ವೀಣಾ ನಿವೃತ್ತರಾದ ಬೆನೆಡಿಕ್ಟ್ ಆರ್ ಸಲ್ಡಾನ ರನ್ನು ಸನ್ಮಾನಿಸಿ, ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕಾವೇರಿ ಎಜುಕೇಶನ್ ಸೊಸೈಟಿ ಉಪಾಧ್ಯಕ್ಷರಾದ ಕೆ.ಎಂ.ಬೆಳ್ಳಿಯಪ್ಪ ಕಾವೇರಿ ಪಿ ಯು ಕಾಲೇಜಿನ ಪ್ರಾಂಶುಪಾಲೆ ಎಂ.ಕೆ.ಪದ್ಮ, ಐ ಕ್ಯೂ ಎ ಸಿ ಸಂಯೋಜಕ ಎಲ್.ಆರ್.ರಾಘವೇಂದ್ರ, ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಲಾ ಪ್ರಾಂಶುಪಾಲೆ ವಿನಿತ, ಉಪನ್ಯಾಸಕರು, ಸಿಬ್ಬಂದಿಗಳು, ಸಲ್ಡಾನ ಕುಟುಂಬಸ್ಥರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.









