Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*

ಮೇ 5, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

  

ಮಡಿಕೇರಿ ಮೇ 5 NEWS DESK : ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಮೂಲಕ 5.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಅನ್ನು 19ನೇ ಕರ್ನಾಟಕ ಬೆಟಾಲಿಯನ್ ಎನ್‍ಸಿಸಿ ಕಮಾಂಡಿಂಗ್ ಆಫೀಸರ್ ಕರ್ನಲ್ ರೆಜಿತ್ ಮುಕುಂದನ್ ಮತ್ತು ಕೊಡಗು ವಿ.ವಿ ಉಪ ಕುಲಪತಿ ಫ್ರೋ.ಅಶೋಕ್ ಸಂಗಪ್ಪ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಕರ್ನಲ್ ರೆಜಿತ್ ಮುಕುಂದನ್ ಮಡಿಕೇರಿ ಮುತ್ತ ಮುತ್ತಲಿನ ಪ್ರದೇಶದಲ್ಲಿ ಎನ್‍ಸಿಸಿ ಕೆಡೆಟ್‍ಗಳಿಗೆ ಫೈರಿಂಗ್ ರೇಂಜ್ ಇಲ್ಲದಾಗಿತ್ತು. 19ನೇ ಕರ್ನಾಟಕ ಎನ್‍ಸಿಸಿ ಬೆಟಾಲಿಯನ್‍ಗೆ ಈ ರೈಫಲ್ ಫೈರಿಂಗ್ ರೇಂಜ್ ಅಮೂಲ್ಯವಾಗಿದ್ದು, ಕೆಡೆಟ್‍ಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಫೈರಿಂಗ್ ರೇಂಜ್‍ನ ಅಗತ್ಯತೆಯನ್ನು ಮನಗಂಡು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘ ಕಾಲೇಜು ಮೈದಾನದ ಪಕ್ಕದಲ್ಲೇ ಎನ್‍ಸಿಸಿಗೆ ಕೊಡುಗೆಯಾಗಿ ನೀಡಿರುವುದಕ್ಕೆ ಕರ್ನಲ್ ರೆಜಿತ್ ಮುಕುಂದನ್ ಶ್ಲಾಘನೆ ವ್ಯಕ್ತಪಡಿಸಿದರು. :: ದೇಶ ಸೇವೆಗೆ ಮುಂದಾಗಿ :: ಸಭಾ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದ ಕೊಡಗು ವಿ.ವಿ ಉಪ ಕುಲಪತಿ ಫ್ರೋ.ಅಶೋಕ್ ಸಂಗಪ್ಪ ಆಲೂರು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘ ಕಾಲೇಜಿಗೆ ಹತ್ತಾರು ಕೊಡುಗೆಗಳನ್ನು ನೀಡಿದೆ. ಇದೇ ರೀತಿಯ ಸಹಕಾರ ಮುಂದೆಯೂ ಇರಲಿ ಎಂದು ಆಶಿಸಿದರು. ಬಂದೂಕಿನಿಂದ ಹಾರಿದ ಗುಂಡು ಯಾವ ರೀತಿ ತನ್ನ ಗುರಿಯನ್ನು ತಲುಪುತ್ತದೆಯೋ ಅದೇ ರೀತಿಯಲ್ಲಿ ಎನ್‍ಸಿಸಿ ವಿದ್ಯಾರ್ಥಿಗಳು ತಮ್ಮ ಬದುಕಿನ ಗುರಿಯನ್ನೂ ಹೊಂದಬೇಕು ಎಂದು ಅವರು ಸಲಹೆ ನೀಡಿದರು. ಎನ್‍ಸಿಸಿ ಕೆಡೆಟ್‍ಗಳಾಗಿ ಶಿಸ್ತು ಮತ್ತು ದೇಶ ಭಕ್ತಿಯನ್ನೂ ಮೈಗೂಡಿಸಿಕೊಳ್ಳಲು ಸಾಧ್ಯವಿದೆ. ಹೀಗಾಗಿ ಎಲ್ಲಾ ವಿದ್ಯಾರ್ಥಿಗಳು ಎನ್‍ಸಿಸಿ ಸೇರ್ಪಡೆಯಾಗಬೇಕು. ದೇಶದ ರಕ್ಷಣೆಗೆ ಅಗತ್ಯವಾದಾಗ ದೇಶ ಸೇವೆಗೂ ಮುಂದಾಗಬೇಕು ಎಂದು ಫ್ರೋ.ಅಶೋಕ್ ಸಂಗಪ್ಪ ಕರೆ ನೀಡಿದರು. :: ಜೀವನದಲ್ಲಿ ಗುರಿ ಮುಖ್ಯ :: ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಮುಕ್ಕಾಟಿರ ಎ.ಅಪ್ಪಯ್ಯ, ವಿದ್ಯಾರ್ಥಿ ಜೀವನದಲ್ಲಿ ತಾವು ಎನ್‍ಸಿಸಿ ಮೂಲಕ ಪಡೆದ ತರಬೇತಿ, ವಿವಿಧ ಕ್ಯಾಂಪ್‍ಗಳಲ್ಲಿ ಪಡೆದ ಅನುಭವಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಎನ್‍ಸಿಸಿ ‘ಸಿ’ ಸರ್ಟಿಫಿಕೇಟ್ ಮೂಲಕ ತಾವು ಪೊಲೀಸ್ ಇಲಾಖೆಗೆ ಭರ್ತಿಯಾಗಿ ಕೊಡಗು ಜಿಲ್ಲೆ ಸಹಿತ ರಾಜ್ಯದ ವಿವಿಧ ಭಾಗಗಳಲ್ಲಿ ಸಲ್ಲಿಸಿದ ಸೇವೆಗಳನ್ನು ವಿವರಿಸಿದರು. ವಿದ್ಯಾರ್ಥಿ ಜೀವನದಲ್ಲಿಯೇ ಭವಿಷ್ಯದ ಬಗ್ಗೆ ನಿಖರ ಗುರಿ ಹೊಂದಬೇಕೆಂದು ಅವರು ಸಲಹೆ ನೀಡಿದರು. ಈ ಹಿಂದೆ ಜಿಲ್ಲೆಯಲ್ಲಿದ್ದ ಫೈರಿಂಗ್ ರೇಂಜ್‍ಗಳು ಪ್ರಸ್ತುತ ಒತ್ತುವರಿಗೆ ತುತ್ತಾಗಿರುವ ಬಗ್ಗೆ ಅವರು ವಿಷಾಧ ವ್ಯಕ್ತಪಡಿಸಿದರು. ಇದೀಗ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಮೈದಾನದಲ್ಲಿಯೇ ಫೈರಿಂಗ್ ರೇಂಜ್ ನಿರ್ಮಿಸಿರುವುದಕ್ಕೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘವನ್ನು ಅಭಿನಂದಿಸಿದರು. :: ಕಾಲೇಜಿನ ಕೊಡುಗೆ ಅಮೂಲ್ಯ :: ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಕೊಡವ ಮಕ್ಕೆಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಭಾರತೀಯ ಸೇನೆ ಸೇರಿದಂತೆ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಶ್ರೀಲಂಕಾದಲ್ಲಿ ನಡೆದಿದ್ದ ಕಾರ್ಯಾಚರಣೆಯಲ್ಲಿ ಇದೇ ಕಾಲೇಜಿನ ಮಾಜಿ ವಿದ್ಯಾರ್ಥಿ, ಸೇನಾಧಿಕಾರಿ ಪುಟ್ಟಿಚಂಡ ಎಸ್.ಗಣಪತಿ ಅವರು ಮೊದಲ ‘ಮಹಾವೀರ ಚಕ್ರ’ ಪ್ರಶಸ್ತಿಗೂ ಪಾತ್ರರಾಗಿದ್ದಾರೆ. ಇಂತಹ ಹತ್ತಾರು ಅಮೂಲ್ಯ ಸೇನಾಧಿಕಾರಿಗಳ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ದೇಶಕ್ಕೆ ಕೊಡುಗೆಯಾಗಿ ನೀಡಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿಗೆ ಹಳೇ ವಿದ್ಯಾರ್ಥಿ ಸಂಘದ ಸಹಕಾರ, ಬೆಂಬಲ ಸದಾ ಇರಲಿದೆ ಎಂದು ಅಭಯ ನೀಡಿದರು. :: ಸಂಘ ಕಾಲೇಜಿಗೆ ಬೆನ್ನೆಲುಬು :: ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಫ್ರೋ. ಬಿ.ರಾಘವ ಮಾತನಾಡಿ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘ ಕಾಲೇಜಿಗೆ ಬೆನ್ನೆಲುಬಾಗಿ ನಿಂತಿದೆ. ಸಂಘದ ಸಹಕಾರದಿಂದ ಕಾಲೇಜಿನಲ್ಲಿ ಹಲವಾರು ಅಭಿವೃದ್ದಿ ಕಾರ್ಯಗಳನ್ನು ಮಾಡಲಾಗಿದೆ. ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಎಲ್ಲಾ ಮಾಜಿ ವಿದ್ಯಾರ್ಥಿಗಳು ಹಳೇ ವಿದ್ಯಾರ್ಥಿ ಸಂಘದ ಸದಸ್ಯತ್ವವನ್ನು ಪಡೆಯುವ ಮೂಲಕ ಸಂಘವನ್ನು ಮತ್ತಷ್ಟು ಬಲಪಡಿಸಬೇಕು. ಇದರಿಂದ ಕಾಲೇಜಿನ ಭವಿಷ್ಯಕ್ಕೂ ಸಹಕಾರಿಯಾಗಲಿದೆ ಎಂದು ಹೇಳಿದರು. ಎನ್‍ಸಿಸಿ ಬಂದೂಕು ತರಬೇತಿಗೆ ಬೇಕಾಗಿದ್ದ ರೈಫಲ್ ರೇಂಜ್ ಅನ್ನು ಸಕಾಲದಲ್ಲಿ ಹಳೇ ವಿದ್ಯಾರ್ಥಿ ಸಂಘ ನಿರ್ಮಿಸಿ ಕಾಲೇಜಿಗೆ ಕೊಡುಗೆಯಾಗಿ ನೀಡಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಕೂಡ ವಿದ್ಯಾರ್ಥಿಗಳು ಸದಾಕಾಲ ಪಾದರಸದಂತೆ ಚಟುವಟಿಕೆಯಿಂದ ಇರಬೇಕು ಎಂದು ಅವರು ಕಿವಿ ಮಾತು ಹೇಳಿದರು. :: ಸ್ಪರ್ಧಾ ತರಬೇತಿಯೂ ನಡೆಯಲಿ :: ಕಾಲೇಜಿನ ಮಾಜಿ ವಿದ್ಯಾರ್ಥಿ, ವಕೀಲರಾದ ಮುಂಡಂಡ ಸುದೈಯ್ ನಾಣಯ್ಯ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಶೂಟಿಂಗ್ ಕ್ರೀಡೆಯೂ ಮುನ್ನಲೆಯಲ್ಲಿದೆ. ಇದೀಗ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಮೂಲಕ ನಿರ್ಮಿಸಲಾಗಿರುವ ಫೈರಿಂಗ್ ರೇಂಜ್‍ನಲ್ಲಿ ರಾಜ್ಯ ರಾಷ್ಟ್ರ ಮಟ್ಟದ ಶೂಟಿಂಗ್ ಕ್ರೀಡೆಗಳಿಗೆ ತರಬೇತಿಯನ್ನು ನೀಡಬಹುದಾಗಿದೆ. ಆ ನಿಟ್ಟಿನಲ್ಲಿ ಚಿಂತಿಸಿದಲ್ಲಿ ಶೂಟಿಂಗ್ ಕ್ರೀಡಾಪಟುಗಳಿಗೂ ಕೂಡ ಅನುಕೂಲವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. :: ಸನ್ಮಾನದ ಗೌರವ :: ಕಾರ್ಯಕ್ರಮದಲ್ಲಿ 19ನೇ ಕರ್ನಾಟಕ ಬೆಟಾಲಿಯನ್ ಎನ್‍ಸಿಸಿ ಕಮಾಂಡಿಂಗ್ ಆಫೀಸರ್ ಕರ್ನಲ್ ರೆಜಿತ್ ಮುಕುಂದನ್, ಕೊಡಗು ವಿ.ವಿ ಉಪ ಕುಲಪತಿ ಫ್ರೋ.ಅಶೋಕ್ ಸಂಗಪ್ಪ ಆಲೂರು, ಪ್ರಾಂಶುಪಾಲರಾದ ಮೇಜರ್ ಫ್ರೋ. ಬಿ.ರಾಘವ, ನಿವೃತ್ತ ಎಸ್.ಪಿ. ಮುಕ್ಕಾಟಿರ ಎ.ಅಪ್ಪಯ್ಯ, ವಕೀಲರಾದ ಮುಂಡಂಡ ಸುದೈಯ್ ನಾಣಯ್ಯ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜ್ಜಿರ ಅಪ್ಪಯ್ಯ, ರೈಫಲ್ ರೇಂಜ್ ಗುತ್ತಿಗೆದಾರ ಪರಮೇಶ್, ಎನ್‍ಸಿಸಿ ಅಧಿಕಾರಿಗಳು ಮತ್ತು ಸೇನಾ ಸಿಬ್ಬಂದಿಗಳನ್ನು ಇದೇ ಸಂದರ್ಭ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಮೂಲಕ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಹಳೇ ವಿದ್ಯಾರ್ಥಿ ಸಂಘದ ಪ್ರಮುಖರಾದ ಬೊಟ್ಟಂಗಡ ಗಣಪತಿ, ಶ್ಯಾಮ್, ಪತ್ರಕರ್ತ ಚಂದನ್ ನಂದರಬೆಟ್ಟು, ಸಾಹಿತಿ ರಶ್ಮಿ ಮೇದಪ್ಪ, ಉದ್ಯಮಿ ದಮಯಂತಿ, ಕಾಲೇಜಿನ ಉಪನ್ಯಾಸಕರಾದ ರವಿಶಂಕರ್, ಕೃಷ್ಣ, ಕಾಲೇಜು ಸಿಬ್ಬಂದಿಗಳು, ಎನ್‍ಸಿಸಿ ಕೆಡೆಟ್‍ಗಳು ಹಾಜರಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.