
ಮಡಿಕೇರಿ ಮೇ 5 NEWS DESK : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪತ್ರಿಕಾ ಪ್ರವಾಸದ ಉಪಯೋಗಕ್ಕಾಗಿ ಹೊಸದಾಗಿ ಕೊಡಗು ಜಿಲ್ಲೆಗೆ ಒದಗಿಸಲಾಗಿರುವ ಮಿನಿ ಬಸ್‍ಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ನಗರದ ಜಿ.ಪಂ.ಭವನದ ಆವರಣದಲ್ಲಿ ಮಂಗಳವಾರ ಹಸಿರು ನಿಶಾನೆ ತೋರಿದರು. ಜಿಲ್ಲೆಯ ಪತ್ರಕರ್ತರು, ಶಾಸಕದ್ವಯರು ಹಾಗೂ ಸರ್ಕಾರ ಹೀಗೆ ಎಲ್ಲರ ಪ್ರಯತ್ನದಿಂದ ಜಿಲ್ಲೆಗೆ 32 ಆಸನದ ಮಿನಿ ಬಸ್ ಹಂಚಿಕೆ ಮಾಡಿದೆ ಎಂದು ಸಚಿವರು ತಿಳಿಸಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಮಿನಿ ಬಸ್‍ನ್ನು ಸ್ವತ: ಚಾಲನೆ ಮಾಡಿ ಉದ್ಘಾಟಿಸಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ಪತ್ರಕರ್ತರು ಇತರರು ಇದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಸ್ವಾಗತಿಸಿದರು.









