
ಮಡಿಕೇರಿ ಮೇ 6 NEWS DESK : ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ರಾಜ್ಯ ಮಟ್ಟದ ತತ್ವಪದ ವಿಮರ್ಶಾ ಲೇಖನ ಸ್ಪರ್ಧೆಯನ್ನು ಏರ್ಪಡಿಸಲು ಉದ್ದೇಶಿಸಿದೆ. 18 ರಿಂದ 40 ವರ್ಷ ವಯೋಮಿತಿಯುಳ್ಳವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ಪರ್ಧೆಗೆ ಅಧ್ಯಯನ ಕೇಂದ್ರವು ನೀಡಿರುವ ವಿಷಯಗಳಲ್ಲಿ ಯಾವುದಾದರು ಒಂದು ವಿಷಯವನ್ನು ಆಯ್ಕೆ ಮಾಡಿ ವಿಮರ್ಶಾ ಲೇಖನವನ್ನು ರಚಿಸಿ ಸ್ಪರ್ಧೆಗೆ ಆಹ್ವಾನ ನೀಡಿದ ದಿನಾಂಕದಿಂದ ಒಂದು ತಿಂಗಳ ಒಳಗೆ ಅಂದರೆ ಜೂನ್, 05 ರೊಳಗೆ ಭಾಗವಹಿಸುವ ಸ್ಪರ್ಧಿಯು ಅರ್ಜಿ ಮತ್ತು ವಿಮರ್ಶಾ ಲೇಖನವನ್ನು ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಈ ವಿಳಾಸಕ್ಕೆ ಕಳುಹಿಸಿಕೊಡಬೇಕು.
ಅರ್ಜಿಯನ್ನು ಮತ್ತು ಲೇಖನವನ್ನು ಅಂಚೆ, ಕೊರಿಯರ್, ಇ-ಮೇಲ್ ಅಥವಾ ಖುದ್ದಾಗಿ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ವೆಬ್‍ಸೈಟ್ https://kanakadasaresearchcenter.karnataka.gov.in/ ನಲ್ಲಿ ಅಪ್‍ಲೋಡ್ ಮಾಡಲಾಗಿದ್ದು, ಅರ್ಜಿಯನ್ನು ವೆಬ್‍ಸೈಟ್‍ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ 9743545865 ನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸದಸ್ಯ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.







