Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ವೃತ್ತಿ ಕೌಶಲ್ಯ ಹೆಚ್ಚಿಸಿಕೊಂಡು ಸ್ವ ಉದ್ಯೋಗ ಪಡೆಯಿರಿ : ನಗರಸಭೆ ಅಧ್ಯಕ್ಷೆ ಪಿ.ಕಲಾವತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ವೃತ್ತಿ ಕೌಶಲ್ಯ ಹೆಚ್ಚಿಸಿಕೊಂಡು ಸ್ವ ಉದ್ಯೋಗ ಪಡೆಯಿರಿ : ನಗರಸಭೆ ಅಧ್ಯಕ್ಷೆ ಪಿ.ಕಲಾವತಿ*

ಮೇ 7, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

 

ಮಡಿಕೇರಿ ಮೇ 7 NEWS DESK : ಜೀವನದ ಉನ್ನತ ಹಂತಕ್ಕೇರಲು ಕಲಿಕೆ ಒಂದೇ ಗುರಿಯಾಗಬೇಕು. ಆ ನಿಟ್ಟಿನಲ್ಲಿ ಮಹಿಳೆಯರು ಹೊಸ ಕೌಶಲ್ಯ ಕಲಿಯುವ ಮೂಲಕ ವೃತ್ತಿ ಜೀವನದಲ್ಲಿ ಮತ್ತು ವೈಯಕ್ತಿಕ ಜೀವನದಲ್ಲಿ ಗೌರವ ಹಾಗೂ ಅವಕಾಶ ಗಿಟ್ಟಿಸಿಕೊಳ್ಳಬೇಕು ಎಂದು ಮಡಿಕೇರಿ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಕರೆ ನೀಡಿದರು. ಬೆಂಗಳೂರಿನ ನಬಾರ್ಡ್ ಸಂಸ್ಥೆ ವತಿಯಿಂದ ಮೈಸೂರಿನ ಓಡಿಪಿ ಸಂಸ್ಥೆಯ ಸಹಯೋಗದಲ್ಲಿ ನಗರದ ದಾಸವಾಳ ರಸ್ತೆಯಲ್ಲಿರುವ ಬಸಪ್ಪ ಶಿಶುವಿಹಾರ ಸಭಾಂಗಣದಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ಕಿರು ಉದ್ಯಮಶೀಲತೆ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಸಂಘ-ಸಂಸ್ಥೆಗಳು ಮಹಿಳೆಯರ ಕೌಶಲ್ಯವನ್ನು ವೃದ್ಧಿಪಡಿಸಲು ಸಹಕಾರಿಯಾಗಿದೆ. ಸಾಧನೆಯ ಹಾದಿಯಲ್ಲಿ ಒತ್ತಡ ಸಹಜ. ಆದರೆ ಶಾಂತ ಮತ್ತು ನಗುಮುಖದ ಮನಸ್ಥಿತಿಯು ಆತಂಕವನ್ನು ಕಡಿಮೆಮಾಡಿ ಸರಿಯಾದ ನಿರ್ಧಾರ ತೆಗೆದುಕೊಳ್ಳಲು ಸಹಕರಿಸುತ್ತದೆ. ಅಲ್ಲದೇ ಮುಖದಲ್ಲಿನ ನಗು ನಮ್ಮಲ್ಲಿರುವ ಧನಾತ್ಮಕ ಚಿಂತನೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿ ಸಮಾಜದಲ್ಲಿ ಅಥವಾ ಕೆಲಸದ ಸ್ಥಳದಲ್ಲಿ ಗೌರವವನ್ನು ತಂದುಕೊಡುತ್ತದೆ. ಕಷ್ಟಗಳನ್ನು ಮೆಟ್ಟಿ ನಿಲ್ಲುವ ದೊಡ್ಡ ಶಕ್ತಿಯಾಗಿ ನಮಗೆ ಸಹಾಯ ಮಾಡುತ್ತದೆ. ಆದ್ದರಿಂದ ಮಹಿಳೆಯರು ತಮಗೆ ಸಿಗುವ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಜೀವನದಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನುಗ್ಗಬೇಕು ಎಂದು ಪಿ.ಕಲಾವತಿ ಅವರು ಸಲಹೆ ನೀಡಿದರು. ಮಡಿಕೇರಿ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ಟಿ.ಭಾಗ್ಯ ನಂದಮ್ ಮಾತನಾಡಿ, ಕಲೆ ಮತ್ತು ಕೌಶಲ್ಯ ಎಂಬುದು ಮನುಷ್ಯನ ಸೃಜನಶೀಲತೆ ಮತ್ತು ಸಾಮಥ್ರ್ಯದ ಎರಡು ಪ್ರಮುಖ ಮುಖವಾಗಿದ್ದು, ಮಹಿಳೆಯರು ಕೌಶಲ್ಯಾಭಿವೃದ್ಧಿ ಹೆಚ್ಚಿಸಿಕೊಂಡು ಸ್ವಾವಲಂಭಿ ಬದುಕು ಸಾಧಿಸಬೇಕು ಎಂದರು. ಜಗತ್ತು ವೇಗವಾಗಿ ಬದಲಾಗುತ್ತಿದೆ. ಹೊಸ ವಿಷಯ ಕಲಿಯುವ ಹಂಬಲವಿದ್ದರೆ ಮಾತ್ರ ನಾವು ಕಾಲಕ್ಕೆ ತಕ್ಕಂತೆ ಬದಲಾಗಲು ಮತ್ತು ಬೆಳೆಯಲು ಸಾಧ್ಯ. ಇಂದಿನ ಆಧುನಿಕ ತಂತ್ರಜ್ಞಾನ ಮತ್ತು ಆಲೋಚನೆಗಳಿಗೆ ಹೊಂದಿಕೊಳ್ಳಬೇಕು. ಯಾವುದೇ ಹಂತದಲ್ಲೂ ಹೊಸ ಕೌಶಲ್ಯ ಮೈಗೂಡಿಸಿಕೊಳ್ಳಬಹುದು ಎಂದು ವಿವರಿಸಿದರು. ಪ್ರಸ್ತುತ ದಿನಗಳಲ್ಲಿ ಏನೇ ಮಾಡಿದರೂ ಅದು ಫ್ಯಾಷನ್ ಎಂಬ ಹೆಸರನ್ನು ಪಡೆದುಕೊಂಡಿದೆ. ಫ್ಯಾಷನ್ ಪ್ರಪಂಚವು ಸಾಂಪ್ರದಾಯಿಕ ಮತ್ತು ಆಧುನಿಕತೆಯ ಸಮ್ಮಿಲನವಾಗಿದ್ದು, ಹಿಂದಿನ ಸಾಂಪ್ರದಾಯಿಕ ಉಡುಪುಗಳಿಗೆ ಆಧುನಿಕ ಸ್ಪರ್ಶ ನೀಡುವುದು ಇಂದಿನ ದೊಡ್ಡ ಟ್ರೆಂಡ್ ಆಗಿದೆ. ಆದ್ದರಿಂದ ಮಹಿಳೆಯರು ಮನಸ್ಸಿನಲ್ಲಿ ಆಲೋಚಿಸಿದ್ದನ್ನು ಚಾಲ್ತಿಗೆ ತರಬೇಕು. ಜಗತ್ತಿನಲ್ಲಿ ಬದಲಾವಣೆ ಮುಖ್ಯ ಬದಲಾವಣೆಯಿಂದ ಅಭಿವೃದ್ಧಿ ಹೊಂದಲು ಸಾಧ್ಯ. ಆ ನಿಟ್ಟಿನಲ್ಲಿ ಕೌಶಲ್ಯ ಅಭಿವೃದ್ಧಿ ಪಡಿಸಲು ನಬಾರ್ಡ್ ಕಾರ್ಯ ನಿರ್ವಹಿಸುತ್ತಿದ್ದು, ಅದನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಟಿ.ಭಾಗ್ಯ ನಂದಮ್ ಹೇಳಿದರು. ಕೊಡಗು ನಬಾರ್ಡ್‍ನ ಜಿಲ್ಲಾ ಅಭಿವೃದ್ಧಿ ಅಧಿಕಾರಿ ವಿ.ರಮೇಶ್ ಬಾಬು ಮಾತನಾಡಿ, ಕಲೆಯನ್ನು ಯಾರು ಕಸಿದುಕೊಳ್ಳಲು ಸಾಧ್ಯವಿಲ್ಲ. ಕಲೆ ಇದ್ದರೆ ಎಲ್ಲರೂ ನಮ್ಮ ಬಳಿ ಬರುತ್ತಾರೆ. ನಮ್ಮೊಂದಿಗೆ ಕಲೆ ಇದ್ದರೆ ಅದನ್ನು ಮುಂದಿನ ಪೀಳಿಗೆಗೂ ತಲುಪಿಸಲು ಸಾಧ್ಯವಾಗುತ್ತದೆ. ಸಾಮಾಜಿಕ ಜಾಲತಾಣ ಸದುಯೋಗಪಡಿಸಿಕೊಂಡು ತಾವು ತಯಾರಿಸಿದ ಉತ್ಪನ್ನಗಳನ್ನು ಪ್ರಚಾರಪಡಿಸಬಹುದು ಅಥವಾ ಮಾರಾಟ ಮಾಡಬಹುದು ಎಂದು ತಿಳಿಸಿದರು. ನಬಾರ್ಡ್ ಸಂಸ್ಥೆಯ ವತಿಯಿಂದ ಕೊಡಗಿನ ವಿವಿಧೆಡೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೈಸೂರು ಓಡಿಪಿ ಸಂಸ್ಥೆಯ ಸಹಾಯಕ ನಿರ್ದೇಶಕರಾದ ಫಾದರ್ ಜಾನ್ ಪೆರ್ನಾಂಡಿಸ್ ಅವರು ಮೈಸೂರಿನ ಓಡಿಪಿ ಸಂಸ್ಥೆಯು ಒಂದು ಸ್ವಯಂ ಸೇವಾ ಸಂಸ್ಥೆಯಾಗಿದ್ದು, ಸಮಾಜದ ಹಿಂದುಳಿದ, ಬಡ ಜನರ ಸಮಗ್ರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ. ಇದು 1984ರಲ್ಲಿ ಸ್ಥಾಪಿಸಲಾಗಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಶ್ರಮಿಸುತ್ತಿದೆ. ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಭಿಗಳನ್ನಾಗಿ ಮಾಡುತ್ತಿದೆ. ಕೌಶಲ್ಯ ತರಬೇತಿ ಆಯೋಜಿಸುವುದರಲ್ಲಿ ನಬಾರ್ಡ್ ಪಾತ್ರ ಪ್ರಮುಖ. ಮಹಿಳೆಯರು ಎಂದರೆ ಅಡುಗೆ ಮನೆಗೆ ಮಾತ್ರ ಸಿಮೀತರು ಎಂಬ ಭಾವನೆ ಇದೆ. ಅದರೆ ಮಹಿಳೆಯರಿಗೆ ಕೌಶಲ್ಯ ಇದ್ದರೆ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಮೈಸೂರು ಓಡಿಪಿ ಸಂಸ್ಥೆಯ ಕೌಶಲ್ಯಾಭಿವೃದ್ಧಿ ಯೋಜನೆಯ ಸಂಯೋಜಕರಾದ ಲಲಿತಾ ಅವರು ಮಾತನಾಡಿ, ನಬಾರ್ಡ್ ಸಂಸ್ಥೆ ಕಳೆದ ಐದು ವರ್ಷದಿಂದ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ. ಅಲ್ಲದೇ ಹಲವು ಮಹಿಳೆಯರನ್ನು ಸ್ವಾವಲಂಬಿಗಳಾಗಿ ಮಾಡಿದೆ. ಪ್ರತಿಯೊಬ್ಬರಲ್ಲಿ ಕಲೆ ಇರುತ್ತದೆ. ಕೌಶಲ್ಯದಿಂದ ಮಹಿಳೆಯರು ಮನೆಯಿಂದಲೇ ಆರ್ಥಿಕ ಸ್ವಾವಲಂಬಿಗಳಾಗಬಹುದು. ಆದ್ದರಿಂದ ಮಹಿಳೆಯರು ಉಚಿತವಾಗಿ ಸಿಗುವ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಓಡಿಪಿ ಸಂಸ್ಥೆಯ ಜಿಲ್ಲಾ ವಲಯ ಸಂಯೋಜಕಿ ಜಾಯ್ಸ್ ಮೆನೆಜೆಸ್ ನಿರೂಪಿಸಿದರು. ಕಾರ್ಯಕರ್ತೆ ವಿಜಯ ನಾರಾಯಣ ಸ್ವಾಗತಿಸಿದರು. ಸದಸ್ಯೆ ತಾರಾ ವಂದಿಸಿದರು. ಓಡಿಪಿ ಸಂಸ್ಥೆಯ ಸಂಯೋಜಕರಾದ ಮೇರಿ ಎಲಿಜಬೆತ್, ಸದಸ್ಯರಾದ ಮನೋರಮೆ, ಮೀನಕುಮಾರಿ, ದಮಯಂತಿ, ತರಬೇತುದಾರರಾದ ಹೀನಾ ಮತ್ತು ರಾಧ, ಶಿಬಿರಾರ್ಥಿಗಳು ಇತರರು ಇದ್ದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*

ಅಕ್ಟೋಬರ್ 9, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.8 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಅಕ್ಟೋಬರ್, 14 ರಂದು ಬೆಳಗ್ಗೆ 11…

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.