
ಸುಂಟಿಕೊಪ್ಪ ಮೇ 6 NEWS DESK : ಸಂತ ಅಂತೋಣಿ ದೇವಾಲಯದ ವಾರ್ಷಿಕ ಮಹೋತ್ಸವವು ಮೇ 10 ರವರೆಗೆ ನಡೆಯಲಿದೆ ಎಂದು ಧರ್ಮಗುರುಗಳಾದ ವಿಜಯಕುಮಾರ್ ತಿಳಿಸಿದ್ದಾರೆ. ಧ್ವಜಾರೋಹಣ ನೇರವೇರಿಸುವ ಮೂಲಕ ವಾರ್ಷಿಕೋತ್ಸವಕ್ಕೆ ಮೈಸೂರು ಧರ್ಮಕ್ಷೇತ್ರದ ವಿದ್ಯಾಸಂಸ್ಥೆಗಳ ಕಾರ್ಯದರ್ಶಿಯಾದ ರೇ.ಫಾ. ಎಡ್ವರ್ಡ್ ವಿಲಿಯಂ ಸಲ್ಡಾನಾ ಚಾಲನೆ ನೀಡಿದರು. ಬಲಿಪೂಜೆ ಹಾಗೂ ಆರಾಧನೆಯನ್ನು ಕೆ.ಆರ್.ಪೇಟೆಯ ಬಾಲ ಯೇಸುವಿನ ದೇವಾಲಯದ ಧರ್ಮಗುರುಗಳಾದ ಟಿ.ಪೌಲೂಸ್ ಹಾಗೂ ದೇವಾಲಯದ ಧರ್ಮಗುರುಗಳಾದ ವಿಜಯಕುಮಾರ್ ಅವರುಗಳು ನೆರವೇರಿಸಿದರು. ಮೇ 9 ರಂದು ಮಕ್ಕಳಿಗೆ ನೂತನ ಪರಮ ಪ್ರಸಾದ ಸಂಸ್ಕಾರ ಮತ್ತು ಅಡಂಬರ ದಿವ್ಯ ಬಲಿಪೂಜೆಯನ್ನು ಏಕಾರ್ಡ್ ಎಸ್ಟೇಟ್ ಸಹಾಯಕ ಧರ್ಮಗುರುಗಾಳದ ಚಾಲ್ರ್ಸ್ ಪೆರಿಯನಾಗಮ್ ಅವರು ನೇರವೇರಿಸಲಿದ್ದಾರೆ. ಮೇ 10 ರಂದು ಸಂಜೆ 5.30 ಗಂಟೆಗೆ ಸಂತ ಅಂತೋಣಿಯವರ ಹಬ್ಬದ ಅಂಗವಾಗಿ ಅಡಂಬರ ಗಾಯನ ಬಲಿಪೂಜೆಯನ್ನು ಮೈಸೂರು ಧರ್ಮಕ್ಷೇತ್ರ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡಾ. ಎಸ್‍ಜೆ ಫ್ರಾನ್ಸಿಸ್ ಸೆರಾವೋ ನೇರವೇರಿಸಲಿದ್ದಾರೆ. ಪಾಲಕ ಸಂತ ಅಂತೋಣಿಯವರ ತೆರಿನ ಮೆರವಣಿಗೆಯ ನಂತರ ಪರಮ ಪ್ರಸಾದ ಆರಾಧನೆಯನ್ನು ಮೈಸೂರು ಧರ್ಮಕ್ಷೇತ್ರದ ಧರ್ಮಾಧಿಕಾರಿ ಡಾ. ಎಸ್‍ಜೆ ಫ್ರಾನ್ಸಿಸ್ ಸೆರಾವೋ ಅವರು ನೆರವೇರಿಸಲಿದ್ದಾರೆ ಎಂದು ದೇವಾಲಯದ ಧರ್ಮಗುರುಗಳಾದ ವಿಜಯಕುಮಾರ್ ತಿಳಿಸಿದ್ದಾರೆ. ವಾರ್ಷಿಕೋತ್ಸವದ ಅಂಗವಾಗಿ ದೇವಾಲಯವನ್ನು ಬಣ್ಣದ ಹೂ ಹಾಗೂ ವಿದ್ಯುತ್ ದೀಪಗಳಿಂದ ಅಲಂಕಾರಿಸಲಾಗಿದೆ.









