Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಡೊನೇಷನ್ ಹಾವಳಿ ವಿರೋಧಿಸಿ ವಿರಾಜಪೇಟೆಯಲ್ಲಿ ಎಸ್‍ಎಫ್‍ಐ ಪ್ರತಿಭಟನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಡೊನೇಷನ್ ಹಾವಳಿ ವಿರೋಧಿಸಿ ವಿರಾಜಪೇಟೆಯಲ್ಲಿ ಎಸ್‍ಎಫ್‍ಐ ಪ್ರತಿಭಟನೆ

ಮೇ 7, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
oplus_0
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ವಿರಾಜಪೇಟೆ ಮೇ 7 NEWS DESK : ಡೊನೇಷನ್ ಹಾವಳಿ ವಿರೋಧಿಸಿ, ‘ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ ಪ್ರಾಧಿಕಾರ’ವನ್ನು ರಚಿಸುವಂತೆ, ವಂತಿಗೆ ವಸೂಲಿ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮಕೈಗೊಳ್ಳಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‍ಎಫ್‍ಐ) ಕರ್ನಾಟಕ ರಾಜ್ಯ ಸಮಿತಿ ರಾಜ್ಯಾದ್ಯಂತ ನೀಡಿದ ಕರೆಗೆ ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಯಿತು. ವಿರಾಜಪೇಟೆ ತಹಶೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿ ಉಪ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬಳಿಕ ಮಾತನಾಡಿದ ಎಸ್‍ಎಫ್‍ಐ ರಾಜ್ಯ ಉಪಾಧ್ಯಕ್ಷ ಬಸವರಾಜ ಎಸ್ ಅವರು, 2026-27ನೇ ಸಾಲಿನಲ್ಲಿ ರಾಜ್ಯಾದ್ಯಂತ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಈಗಾಗಲೇ ಪ್ರವೇಶಾತಿ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಿದ್ದು, ಈ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಣ ಪ್ರಾಧಿಕಾರ ಸಭೆ ಸೇರಿ, ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ಕುರಿತು ಪಾಲಕರಿಗೆ ಮಾಹಿತಿ ನೀಡಬೇಕಾಗಿತ್ತು. ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಸಮಿತಿಯು ಸಭೆ ಸೇರಿ ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡದಿರುವ ಕಾರಣ 1983ರ ಶಿಕ್ಷಣ ಕಾಯ್ದೆ ಮತ್ತು 2009ರ ಆರ್.ಟಿ.ಇ ಕಾಯ್ದೆಯನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡುವುದರ ಮೂಲಕ ಹಗಲು ದರೋಡೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುತ್ತಿವೆ. ಈಗಾಗಲೆ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಹೆಸರಲ್ಲಿ ಡೊನೇಷನ್ ಹಣವನ್ನು ಮನಬಂದತೆ ವಸೂಲಿ ಮಾಡಲು ಮುಂದಾಗಿದ್ದಾರೆ. ಬಡ ಹಿಂದುಳಿದ, ದಲಿತ ಅಲ್ಪಸಂಖ್ಯಾತರ ಮಕ್ಕಳು ಖಾಸಗಿ ಶಾಲೆಗಳಲ್ಲಿ ಡೊನೇಷನ್ ಪಿಡುಗಿನಿಂದ ಶಾಲೆಗಳಲ್ಲಿ ಓದುವುದು ಅಸಾದ್ಯವಾಗಿದೆ ಎಂದರು. ಕಾರ್ಯದರ್ಶಿ ವಿಜಯಕುಮಾರ್ ಮಾತನಾಡಿ, ಪ್ರವೇಶ ಪರೀಕ್ಷೆ ನಡೆಸುವ ಶಾಲೆಗಳಿಗೆ 25 ಸಾವಿರ ರೂ ದಂಡ ಹಾಕಬೇಕೆಂದು ಹೇಳಿದೆ. ವಿದ್ಯಾರ್ಥಿಗಳ ಸಂಖ್ಯೆ, ಕಲಿಕಾ ಮಾಧ್ಯಮ, ಶುಲ್ಕದ ವಿವರ, ಕ್ರೀಡಾಂಗಣ, ಶೌಚಾಲಯ, ಶಿಕ್ಷಕರ ಸಂಖ್ಯೆ, ಮುಂತಾದ ಮಾಹಿತಿಯನ್ನು ಶಾಲಾ ಆವರಣದಲ್ಲಿ ಫ್ಲೆಕ್ಸ್ ಪ್ರಕಟಿಸಬೇಕೆಂದು ಹಾಗೂ ಇದೇ ಮಾಹಿತಿಯನ್ನು ಇಲಾಖೆ ವೆಬ್‍ಸೈಟ್‍ನಲ್ಲಿ ಪ್ರಕಟಿಸಬೇಕೆಂದು ಶಿಕ್ಷಣ ಇಲಾಖೆ ಆದೇಶಿಸಿದೆ. ಆದರೆ, ಇದನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಜಾರಿ ಮಾಡಿಲ್ಲ ಎಂದು ಆರೋಪಿಸಿದರು. ಶಾಲೆಗಳಲ್ಲಿ ಪ್ರವೇಶ ಪರೀಕ್ಷೆ ನಡೆಸುವುದರ ಜೊತೆಗೆ ಪುಸ್ತಕ ಸಾಮಾಗ್ರಿಗಳನ್ನು ಆಯಾ ಶಾಲೆಗಳಲ್ಲಿ ತೆಗೆದುಕೊಳ್ಳಬೇಕೆಂದು ಪಾಲಕರಿಗೆ ಹೇಳಿ ಹೆಚ್ಚಿನ ದರದಲ್ಲಿ ಕೊಟ್ಟು ಶಾಲೆಗಳನ್ನು ಅಂಗಡಿಯಾಗಿ ಮಾರ್ಪಟ್ಟು ಮಾಡಿದ ಶಾಲೆಗಳ ವಿರುದ್ಧ ಮಾನ್ಯತೆಯನ್ನು ರದ್ದು ಮಾಡಿ ಅಂತಹ ಶಾಲೆಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಅನಧಿಕೃತ ಟ್ಯೂಷನ್ ಸೆಂಟರ್‍ಗಳನ್ನು ಮುಚ್ಚಬೇಕು ಮತ್ತು ತಕ್ಷಣವೆ ಜಿಲ್ಲಾ ಶಿಕ್ಷಣ ಶುಲ್ಕ ನಿಯಂತ್ರಣ ಪ್ರಾಧಿಕಾರ ಸಭೆ ಸೇರಿಸಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್.ಎಫ್.ಐ) ಕರ್ನಾಟಕ ರಾಜ್ಯ ಸಮಿತಿ ಒತ್ತಾಯಿಸುತ್ತದೆ ಎಂದರು. ಮನವಿಯಲ್ಲಿ ಡೊನೆಷನ್ ನಿಯಂತ್ರಣಕ್ಕೆ ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ ಪ್ರಾಧಿಕಾರ’ (ಡೊನೇಷನ್ ವಿರೋಧಿ ಸಮಿತಿ) ವನ್ನು ತಕ್ಷಣ ರಚಿಸಬೇಕು. ವಂತಿಗೆ ವಸೂಲಿಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ಮೇಲೆ. ಕ್ರಮಕೈಗೊಳ್ಳಬೇಕು. ಜಿಲ್ಲಾ ಮತ್ತು ತಾಲೂಕ ಮಟ್ಟದಲ್ಲಿ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ ನೇತೃತ್ವದಲ್ಲಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಮತ್ತು ಶಿಕ್ಷಣ ಇಲಾಖೆ ಮುಖ್ಯಸ್ಥರು, ಪಾಲಕರು, ವಿದ್ಯಾರ್ಥಿ ಸಂಘಟನೆಯ ಪ್ರತಿನಿಧಿಗಳ ಜಂಟಿ ಸಭೆಯನ್ನು ಕರೆಯಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿರುವ ಕೇಂದ್ರೀಯ ಶಾಸನ ಜಾರಿಗೆ ತರಬೇಕು. ಸರ್ಕಾರ ನಿಗದಿಗೊಳಿಸಿರುವ ಪ್ರವೇಶ ಶುಲ್ಕದ ವಿವರವನ್ನು ಮಾಧ್ಯಮಗಳ ಮೂಲಕ ಮತ್ತು ಬಿತ್ತಿಪತ್ರ. ಕರಪತ್ರಗಳ ಮೂಲಕ ಪ್ರಚಾರ ಪಡಿಸಬೇಕು. ಶಿಕ್ಷಣ ಸಂಸ್ಥೆಗಳು ಪ್ರತಿತಿಂಗಳಿಗೊಮ್ಮೆ ಪಾಲಕರ ಸಭೆ ಕರೆದು ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸುವಂತೆ ನಿರ್ದೇಶಿಸಬೇಕು. ಜಿಲ್ಲಾಧಿಕಾರಿಗಳು ಡೊನೆಷನ್ ನಿಯಂತ್ರಣಕ್ಕೆ ‘ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ ಪ್ರಾಧಿಕಾರ ರಚನೆ ಕುರಿತು 15 ದಿನಗಳ ಒಳಗಾಗಿ ಪಾಲಕರು ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಶಿಕ್ಷಣ ಇಲಾಖೆಯ ಮುಖ್ಯಸ್ಥರು, ವಿದ್ಯಾರ್ಥಿ ಸಂಘಟನೆ ಪ್ರತಿನಿಧಿಗಳ ಜಂಟಿಸಭೆ ಕರೆಯಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿಗದಿಪಡಿಸಿದ ಶುಲ್ಕದ ವಿವರಗಳನ್ನು ಶಾಲಾ- ಕಾಲೇಜುಗಳ ಮುಂದೆ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರದರ್ಶಿಸಬೇಕು. ನಿಯಮ ಮೀರಿ ಡೊನೇಷನ್ ಪಡೆದ ಖಾಸಗಿ ಶಿಕ್ಷಣ ಸಂಸ್ಥೆಗೆ ಶಿಕ್ಷಣ ಹಕ್ಕು ಕಾ0iÉ್ದುಯ ಪ್ರಕಾರ ದಂಡ ಮತ್ತು ಶಿಕ್ಷೆಗೊಳಪಡಿಸಬೇಕು. ಡೋನೆಷನ್ ಹಾವಳಿ ತಡೆಗಟ್ಟಿ ಡೇರಾ ಕಮೀಟಿ ರಚಿಸಿ. ಅನಧಿಕೃತ ಖಾಸಗಿ ಶಾಲಾ ಕಾಲೇಜುಗಳನ್ನು ನಿಯಂತ್ರಿಸಿ. ಅನಧಿಕೃತ ಟ್ಯೂಷನ್ ಸೆಂಟರ್‍ಗಳನ್ನು ಮುಚ್ಚಬೇಕು ಎಂದು ಆಗ್ರಹಿಸಿದರು. ವೈಎಫ್‍ಐ ರಾಜ್ಯಾಧ್ಯಕ್ಷೆ ಲವಿತ್ರ ವಸ್ತ್ರದ್, ಎಸ್‍ಎಫ್‍ಐ ರಾಜ್ಯ ಜಂಟಿ ಕಾರ್ಯದರ್ಶಿ ವಿನುಷ್ ರಮಣ, ಅನಂತರಾಜ್, ಮುಖಂಡರಾದ ರಮೇಶ್ ವಿರಾಪೂರ, ಮಂಜುನಾಥ ಡಗ್ಗಿ, ಸಾದಿಕ್, ಚಂದ್ರಶೇಖರ್, ರಾಘವೇಂದ್ರ, ದಿಲೀಪ್, ಮಿಥುನ್ ಎಮ್, ಸಾಕ್ಷಿ ಎಸ್, ಗೌತಮಿ ಎಮ್, ಎ.ಸಿ. ಸಾಬು ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಸೋಮವಾರಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದತ್ತಿನಿಧಿ ಕಾರ್ಯಕ್ರಮ; ವಿವಿಧ ವಿಷಯಗಳ ಕುರಿತು ಉಪನ್ಯಾಸ, ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆಗಳ ಸ್ಪರ್ಧೆ

ನವೆಂಬರ್ 4, 2026

ಕಕ್ಕಬ್ಬೆ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆ

ನವೆಂಬರ್ 4, 2026

ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ; ಕದಿರು ಬಿಡುವ ಹಂತದಲ್ಲಿದ್ದ ಭತ್ತದ ಬೆಳೆ ನಾಶ; ರೈತರಿಗೆ ಅಪಾರ ನಷ್ಟ

ನವೆಂಬರ್ 4, 2026

ಕಕ್ಕಬ್ಬೆ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆ

ನವೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ನ.4: ಹಾಸನದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ವಿಭಾಗ ಮಟ್ಟದ ಕ್ರೀಡಾಕೂಟದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಆಂಗ್ಲ ಮಾಧ್ಯಮ…

ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ; ಕದಿರು ಬಿಡುವ ಹಂತದಲ್ಲಿದ್ದ ಭತ್ತದ ಬೆಳೆ ನಾಶ; ರೈತರಿಗೆ ಅಪಾರ ನಷ್ಟ

ನವೆಂಬರ್ 4, 2026

ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಗೆ ಚಾಲನೆ

ನವೆಂಬರ್ 4, 2026

ಕನ್ನಡ ಭಾಷೆಯ ಉಳಿವು ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ; ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ; ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ನವೆಂಬರ್ 4, 2026

ಮೂರ್ನಾಡು ಭಾರತೀಯ ನೃತ್ಯ ಕಲಾ ಶಾಲೆಗೆ ಶೇ.100ರಷ್ಟು ಫಲಿತಾಂಶ; ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 4, 2026

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಡ್ಡಂಡ ಕಾರ್ಯಪ್ಪ ಅವರಿಗೆ ಮಸಿ ಬಳಿದ ಘಟನೆ ಖಂಡನೀಯ: ಬಿಜೆಪಿ ರೈತ ಮೋರ್ಚಾ

ನವೆಂಬರ್ 4, 2026

ಬಾಲ್ಯದಿಂದಲೇ ಸ್ವಚ್ಛತೆಯ ಹವ್ಯಾಸ ಬೆಳೆಸುವುದು ಅವಶ್ಯ: ಸೀತಾಲಕ್ಷ್ಮಿ

ನವೆಂಬರ್ 4, 2026

ಪೇರಿಯಂಡ ಪೆಮ್ಮಯ್ಯ ದಂಪತಿ ಸ್ಥಾಪಿಸಿದ ಪ್ರಥಮ ವರ್ಷದ ಸಾಹಿತ್ಯ ಪ್ರಶಸ್ತಿಗೆ ಡಾ. ಕೋರನ ಸರಸ್ವತಿ ಆಯ್ಕೆ

ನವೆಂಬರ್ 3, 2026

ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಸಾಹಿತಿ ಉಳುವಂಗಡ ಕಾವೇರಿ ಉದಯ್ ಆಯ್ಕೆ

ನವೆಂಬರ್ 3, 2026

ಸಾಹಿತಿ ನಾ. ಡಿಸೋಜಾ ವಿಶ್ವಮಾನವತ್ವ ಮೇಳೈಸಿದ ದಾರ್ಶನಿಕ: ಎಸ್.ಐ. ಮುನೀರ್ ಅಹಮದ್

ನವೆಂಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.