
ಮಡಿಕೇರಿ ಮೇ 7 NEWS DESK : ಹುಲಿ ದಾಳಿಗೆ ಹಸುವೊಂದು ಬಲಿಯಾದ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಬಿ.ಶೆಟ್ಟಿಗೇರಿಯಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಬಿ.ಶೆಟ್ಟಿಗೇರಿ ಗ್ರಾಮದ ನಿವಾಸಿ ನಾಮೇರ ಜಯ ಎಂಬುವವರಿಗೆ ಸೇರಿದ ಹಸು ಹುಲಿ ದಾಳಿಯಿಂದ ಸಾವನ್ನಪ್ಪಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಕಾಡಾನೆ ಮತ್ತು ಹುಲಿ ದಾಳಿ ನಿರಂತರವಾಗಿದ್ದರೂ ಸರಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.









