Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
  • *ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*
  • *ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹೊದ್ದೂರು : ಗ್ರಾಮೀಣ ಮಕ್ಕಳಿಗೆ ಅರಿವು ಬೇಸಿಗೆ ಶಿಬಿರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹೊದ್ದೂರು : ಗ್ರಾಮೀಣ ಮಕ್ಕಳಿಗೆ ಅರಿವು ಬೇಸಿಗೆ ಶಿಬಿರ*

ಮೇ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 7 NEWSD DESK : ಹೊದ್ದೂರು ಗ್ರಾಮ ಪಂಚಾಯಿತಿಯಲ್ಲಿ ದಿಶಾ ಸಂಸ್ಥೆಯ ಸಹಯೋಗದಲ್ಲಿ ಗ್ರಾಮೀಣ ಮಕ್ಕಳಿಗೆ ಸಾಮಾಜಿಕ ಜವಾಬ್ದಾರಿಯನ್ನು ಹೆಚ್ಚಿಸುವ ಉದ್ದೇಶದಿಂದ ‘ಅರಿವು’ ಎಂಬ ಹೆಸರಿನಡಿ ಐದು ದಿನಗಳ ವಿಶೇಷ ಬೇಸಿಗೆ ಶಿಬಿರ ನಡೆಯಿತು. ಅರಿವು ಬೇಸಿಗೆ ಶಿಬಿರದ ಮೊದಲ ದಿನವನ್ನು “ಸಾಮಾಜಿಕ ಜವಾಬ್ದಾರಿ” ಎಂಬ ಮಹತ್ವದ ವಿಷಯದೊಂದಿಗೆ ಉತ್ಸಾಹಭರಿತವಾಗಿ ನಡೆಸಲಾಯಿತು. ಶಿಬಿರದ ಆರಂಭದಲ್ಲಿ ಮಕ್ಕಳಿಗೆ ಶಿಬಿರದ ಉದ್ದೇಶ, ನಿಯಮಗಳು ಹಾಗೂ ದಿನಚರಿಯ ಕುರಿತು ಪರಿಚಯ ನೀಡಲಾಯಿತು. ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ಬೆಳವಣಿಗೆಗೆ “ಆಲಿಸುವಿಕೆ ಮತ್ತು ಸಂವಹನದ ಮಹತ್ವ” ಕುರಿತು ಮಾರ್ಗದರ್ಶನ ನೀಡಲಾಯಿತು. ಇತರರ ಮಾತುಗಳನ್ನು ಗಮನದಿಂದ ಆಲಿಸುವುದು, ವಿನಯದಿಂದ ಮಾತನಾಡುವುದು, ಪರಸ್ಪರ ಗೌರವದಿಂದ ನಡೆದುಕೊಳ್ಳುವುದು ಎಂಬ ಮೌಲ್ಯಗಳನ್ನು ಮಕ್ಕಳಿಗೆ ತಿಳಿಸಲಾಯಿತು. ಗ್ರಾ.ಪಂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್.ವಿ.ವತ್ಸಲಕುಮಾರಿ ಮಾತನಾಡಿ, ಸಾಮಾಜಿಕ ಜವಾಬ್ದಾರಿಗಳ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿದರು. ಆಹಾರದ ಮೌಲ್ಯವನ್ನು ಅರಿತು ವ್ಯರ್ಥ ಮಾಡಬಾರದು, ನೀರನ್ನು ಸಂರಕ್ಷಿಸಬೇಕು, ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಕಾಪಾಡಬೇಕು ಹಾಗೂ ಎಲ್ಲರ ಮೇಲೂ ದಯೆ ಮತ್ತು ಸಹಾನುಭೂತಿ ತೋರಬೇಕು ಎಂಬ ವಿಷಯಗಳನ್ನು ಸರಳವಾಗಿ ಹಾಗೂ ಉದಾಹರಣೆಗಳ ಮೂಲಕ ಮಕ್ಕಳಿಗೆ ತಿಳಿಸಿದರು. ಶಿಬಿರದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರೀತಂ ಪೊನ್ನಪ್ಪ ಶಿಬಿರದಲ್ಲಿ ಸಾಮಾಜಿಕ ಜವಾಬ್ದಾರಿ, ಆರೋಗ್ಯಯುತ ಆಹಾರ, ಭೂಮಿ ಮತ್ತು ನಾನು, ಪ್ರಕೃತಿ ಮತ್ತು ಪರಂಪರೆ, ನೈತಿಕತೆ ಮತ್ತು ಮೌಲ್ಯಗಳು ಎಂಬ ಒಟ್ಟು ಐದು ಆಶಯಗಳ ಮೇಲೆ ಐದು ದಿನಗಳ ಶಿಬಿರವಿದ್ದು, ಇಲ್ಲಿ ಮಕ್ಕಳು ಬರೆಯಲ್ಲ, ಓದಲ್ಲ ಆದರೆ ಚಟುವಟಿಕೆಗಳ ಮೂಲಕ ಅನುಭವಿಸಿ ಕಲಿಯುತ್ತಾರೆ ಹಾಗೂ ಮುಂದಿನ ದಿನಗಳಲ್ಲಿ ಇಲ್ಲಿ ಕಲಿತದನ್ನು ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ’ ಎಂದರು. ಆಡಳಿತಾಧಿಕಾರಿಗಳು ‘ ಜೀವನ ಬದ್ಧತೆ, ಮೌಲ್ಯಗಳು ಹಾಗೂ ಭವಿಷ್ಯದ ಕನಸುಗಳ ಬಗ್ಗೆ ನೀತಿ ಕಥೆಗಳ ಮೂಲಕ ಶಿಬಿರಾರ್ಥಿ ಮಕ್ಕಳಿಗೆ ಕಿವಿ ಮಾತು ಹೇಳಿದರು. ನಿಕಟಪೂರ್ವ ಗ್ರಾ.ಪಂ ಅಧ್ಯಕ್ಷರಾದ ಶ್ರೀ ಹೆಚ್ ಎ ಹಂಸರವರು ಶಿಬಿರದ ಯಶಸ್ವಿಗೆ ಹಾರೈಸಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ ಆಡಳಿತಾಧಿಕಾರಿ ಪಿ.ಪಿ.ಕವಿತ , ಗ್ರಾ.ಪಂ ನಿಕಟಪೂರ್ವ ಅಧ್ಯಕ್ಷ ಹೆಚ್.ಎ.ಹಂಸ, ದಿಶಾ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ  ಕುಸುಂ ಮತ್ತು ಪ್ರೀತಂ ಪೊನ್ನಪ್ಪ ಉಪಸ್ಥಿತರಿದ್ದರು. ಮಕ್ಕಳು ವಿವಿಧ ಸಾಮಾಜಿಕ ಜವಾಬ್ದಾರಿಗಳ ವಿಷಯಗಳ ಮೇಲೆ ಪಾತ್ರಾಭಿನಯ ಪ್ರದರ್ಶಿಸಿದರು. ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡುವುದು, ನೀರು ಉಳಿಸುವುದು, ಆಹಾರ ವ್ಯರ್ಥ ಮಾಡದಿರುವುದು, ಹಿರಿಯರಿಗೆ ಸಹಾಯ ಮಾಡುವುದು, ಪ್ರಾಣಿಗಳ ಮೇಲೆ ಕರುಣೆ ತೋರಿಸುವುದು ಮುಂತಾದ ವಿಷಯಗಳನ್ನು ಅಭಿನಯಿಸಿದರು. ಮಕ್ಕಳ ಸ ಆತ್ಮವಿಶ್ವಾಸ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಮೊದಲ ದಿನದ ಚಟುವಟಿಕೆಗಳು ಮಕ್ಕಳಲ್ಲಿ ಸಾಮಾಜಿಕ ಮೌಲ್ಯಗಳು, ಶಿಸ್ತಿನ ಅರಿವು ಹಾಗೂ ಸಹಾನುಭೂತಿ ಬೆಳೆಸುವಲ್ಲಿ ಯಶಸ್ವಿಯಾದವು. ಶಿಬಿರದ ಮೊದಲ ದಿನವು ಮಕ್ಕಳಿಗೆ ಹೊಸ ಅನುಭವ ಮತ್ತು ಉತ್ತಮ ಸಂದೇಶಗಳನ್ನು ನೀಡುವ ಮೂಲಕ ಅರ್ಥಪೂರ್ಣವಾಗಿ ನೆರವೇರಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24:-ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‍ಐಆರ್)-2026 ರ ಪರಿಷ್ಕøತ ವೇಳಾ ಪಟ್ಟಿಯ ಕರಡು ಮತದಾರರ ಪಟ್ಟಿಯನ್ನು…

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.