Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ*

ಮೇ 8, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಮೇ 8 : ಕ್ಷೇತ್ರ ಪುನರ್ ವಿಂಗಡಣೆಯ ಸಂದರ್ಭ ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರವನ್ನು ರಚಿಸಬೇಕೆಂದು ಆಗ್ರಹಿಸಿ 48 ಗಂಟೆಗಳ ಕಾಲ ಅಹೋರಾತ್ರಿ ಸತ್ಯಾಗ್ರಹ ನಡೆಸಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಿರ್ಧರಿಸಿದೆ.
ಮಡಿಕೇರಿಯ “ಕೊಡವ ಮಂದ್” ನಲ್ಲಿ ಮೇ 12 ರಂದು ಬೆಳಿಗ್ಗೆ 10.30 ಗಂಟೆಯಿAದ ಮೇ 14 ರಂದು ಬೆಳಿಗ್ಗೆ 10.30 ರವರೆಗೆ ಸತ್ಯಾಗ್ರಹ ನಡೆಸಲಾಗುವುದು. ಸತ್ಯಾಗ್ರಹದಲ್ಲಿ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿ, ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರ ನೀಡಬೇಕೆಂದು ಆಗ್ರಹಿಸಿರುವ ಮನವಿ ಪತ್ರವನ್ನು ಭಾರತದ ರಾಷ್ಟಪತಿಗಳು, ಪ್ರಧಾನಮಂತ್ರಿಗಳು ಹಾಗೂ ಮುಖ್ಯ ಚುನಾವಣಾ ಆಯುಕ್ತರಿಗೆ ಸಲ್ಲಿಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡವರಿಗೆ ಮಾತ್ರ ಮೀಸಲಾದ “ವಿಶೇಷ ಸಂಸದೀಯ ಮತ್ತು ವಿಧಾನಸಭಾ ಕ್ಷೇತ್ರ”ಗಳನ್ನು ನೀಡಬೇಕು ಅಥವಾ ಸಿಕ್ಕಿಂನ “ಸಂಘ” ಕ್ಷೇತ್ರದ ಮಾದರಿಯಲ್ಲಿ ಕೊಡವ ಕ್ಷೇತ್ರಗಳನ್ನು ಸೃಷ್ಟಿಸಬೇಕು. ಶೇ.33ರ ಮಹಿಳಾ ಮೀಸಲಾತಿಯೊಳಗೆ ಕೊಡವ ಮಹಿಳೆಯರಿಗೆ ಒಳ ಮೀಸಲಾತಿ ನೀಡಬೇಕೆಂದು ಆಗ್ರಹಿಸಲಾಗುವುದು. 2027ರ ಜನಗಣತಿ ಸಂದರ್ಭ ಕೊಡವರಿಗೆ ಪ್ರತ್ಯೇಕ “ಕೋಡ್” ಮತ್ತು ಕಾಲಂ ನೀಡಬೇಕು. 1871-1931ರವರೆಗೆ ಇದ್ದಂತೆ ಸ್ವತಂತ್ರ ಜನಾಂಗ ಎಂದು ದಾಖಲಿಸಬೇಕು. ವಿಧಿ 25 ಮತ್ತು 26ರ ಅಡಿಯಲ್ಲಿ “ಗನ್-ತೋಕ್” ಧಾರ್ಮಿಕ ಹಕ್ಕನ್ನು ರಕ್ಷಿಸಬೇಕು. ಕೊಡವ ಭಾಷೆಯನ್ನು 8ನೇ ಶೆಡ್ಯೂಲ್ ಗೆ ಸೇರಿಸಿ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಬೇಕು. ತಲಕಾವೇರಿಯನ್ನು ಕೊಡವರ ಪವಿತ್ರ ಯಾತ್ರಾಸ್ಥಳ ಎಂದು ಘೋಷಿಸಬೇಕು. ಕೊಡವ ಜನಾಂಗೀಯ ಹೆಗ್ಗುರುತು, ಅಪೂರ್ವ ಜಾನಪದ ಪರಂಪರೆಗಳ ನಿಧಿಯಾದ ಮಂದ್ ಮತ್ತು ದೇವಕಾಡುಗಳನ್ನು ಯುನೆಸ್ಕೋ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಸೇರಿಸಬೇಕು. ಕೆಳದಿ ಅರಸರು ಹಾಗೂ ಬ್ರಿಟಿಷರು ವಶಪಡಿಸಿಕೊಂಡ ಮತ್ತು ಹೊರಗಿನವರಿಗೆ ಲೀಸ್ ಅಥವಾ ಮಾರಾಟ ಮಾಡಿದ ಜಮ್ಮಾಮಲೆ ಮತ್ತು ಇತರ ವಂಶಪಾರAಪರ್ಯ ಭೂಮಿಯನ್ನು ವಿಶ್ವ ರಾಷ್ಟç ಸಂಸ್ಥೆಯ ಆದಿಮಸಂಜಾತ ಆಸ್ತಿ ಕಾಯ್ದೆಯಡಿ ಮರಳಿಸಬೇಕು. 1785ರ ದೇವಟ್‌ಪರಂಬ್ ಜನಾಂಗೀಯ ಹತ್ಯೆ ಮತ್ತು ನಾಲ್ನಾಡ್ ಹಾಗೂ ಮಡಿಕೇರಿ ಕೋಟೆಯಲ್ಲಿ ನಡೆದ ಅರಮನೆ ಹತ್ಯಾಕಾಂಡಗಳನ್ನು ಅಂತರಾಷ್ಟ್ರೀಯ ಸ್ಮಾರಕಗಳಾಗಿ ಗುರುತಿಸಬೇಕು. ಉಲುಗುಲಿ, ಮುಳ್ಳುಸೋಗೆ ಮತ್ತು ಲಕ್ಕಡಿಕೋಟೆಗಳಲ್ಲಿ ಕೊಡವ ಯುದ್ಧ ಸ್ಮಾರಕಗಳನ್ನು ನಿರ್ಮಿಸಬೇಕು. ಹೆಲ್ಸಿಂಕಿ ನಿಯಮಗಳು 1966ರ ಪ್ರಕಾರ ಕೊಡವ ಭೂಪ್ರದೇಶಕ್ಕೆ ಕಾವೇರಿ ನೀರಿನ ಪಾಲು ನೀಡಬೇಕು. ಕೊಡವ ಇತಿಹಾಸವನ್ನು ಸುಳ್ಳಾಗಿಸಿದ ಇತಿಹಾಸಕಾರನ ವಿರುದ್ಧ ಕ್ರಮ ಕೈಗೊಳ್ಳಬೇಕು ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಆಡಳಿತ ವ್ಯವಸ್ಥೆಯ ಮುಂದಿಡುವುದಾಗಿ ಎನ್.ಯು.ನಾಚಪ್ಪ ತಿಳಿಸಿದ್ದಾರೆ. “ಹೊಸ ಸೆಂಟ್ರಲ್ ವಿಸ್ಟಾ ಸಂಸತ್ತಿನಲ್ಲಿ 1200ಕ್ಕೂ ಹೆಚ್ಚು ಸೀಟುಗಳಿವೆ. ರಾಷ್ಟç ಸೇವೆ ಮಾಡಿದ ಮತ್ತು ಜನಸಂಖ್ಯೆ ನಿಯಂತ್ರಿಸಿದ ಕೊಡವರನ್ನು ಶಿಕ್ಷಿಸಬೇಡಿ” ಎಂದು ಆಗ್ರಹಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*

ಅಕ್ಟೋಬರ್ 9, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.8 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಅಕ್ಟೋಬರ್, 14 ರಂದು ಬೆಳಗ್ಗೆ 11…

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.