Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಮೇ 11, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮೇ 11 NEWS DESK : ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸಲಾಗುತ್ತಿದೆ. ಅದರಂತೆ 2026ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಶೇ.90 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮಾತ್ರ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವುದು. ವಿದ್ಯಾರ್ಥಿಗಳು 2026 ರ ಎಸ್‍ಎಸ್‍ಎಲ್‍ಸಿ/ಪಿಯುಸಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ-ತಾಯಿ ಕರ್ನಾಟಕ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು. https://powermedia.info ಲಿಂಕ್ ಮುಖಾಂತರ ಅರ್ಜಿ ಸಲ್ಲಿಸುವುದು. ಸಂಘವು ನಿಗದಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ/ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು ಮತ್ತು ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ದೃಢೀಕರಿಸಿ ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡುವುದು. ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾನಿಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಯ ನೌಕರರು ಅರ್ಜಿ ಸಲ್ಲಿಸುವಂತಿಲ್ಲ. ವಿದ್ಯಾರ್ಥಿಯ ಇತ್ತೀಚಿನ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಶಾಲಾ ಕಾಲೇಜಿನ ದೃಢೀಕೃತ ಅಂಕಪಟ್ಟಿ, ಸಂಘವು ನೀಡಿರುವ ನಮೂನೆಯಲ್ಲಿ ಕಚೇರಿ ಮುಖ್ಯಸ್ಥರ ದೃಢೀಕರಣ ಮತ್ತು ಶಾಖಾ ಸಂಘದ ದೃಢೀಕರಣ ಪತ್ರವನ್ನು ಅಪ್‍ಲೋಡ್ ಮಾಡದಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಆನ್‍ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಪೂರ್ಣವಾಗಿ ಭರ್ತಿ ಮಾಡತಕ್ಕದ್ದು. ಅರ್ಜಿ ಸಲ್ಲಿಸಲು ಮೇ, 25 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ರಾಜ್ಯ ಸಂಘದ ದೂ.ಸಂ.080-22354783/84 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಗಿರಿಗೌಡ ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಸೋಮವಾರಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದತ್ತಿನಿಧಿ ಕಾರ್ಯಕ್ರಮ; ವಿವಿಧ ವಿಷಯಗಳ ಕುರಿತು ಉಪನ್ಯಾಸ, ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆಗಳ ಸ್ಪರ್ಧೆ

ನವೆಂಬರ್ 4, 2026

ಕಕ್ಕಬ್ಬೆ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆ

ನವೆಂಬರ್ 4, 2026

ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ; ಕದಿರು ಬಿಡುವ ಹಂತದಲ್ಲಿದ್ದ ಭತ್ತದ ಬೆಳೆ ನಾಶ; ರೈತರಿಗೆ ಅಪಾರ ನಷ್ಟ

ನವೆಂಬರ್ 4, 2026

ಕಕ್ಕಬ್ಬೆ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆ

ನವೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ನ.4: ಹಾಸನದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ವಿಭಾಗ ಮಟ್ಟದ ಕ್ರೀಡಾಕೂಟದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಆಂಗ್ಲ ಮಾಧ್ಯಮ…

ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ; ಕದಿರು ಬಿಡುವ ಹಂತದಲ್ಲಿದ್ದ ಭತ್ತದ ಬೆಳೆ ನಾಶ; ರೈತರಿಗೆ ಅಪಾರ ನಷ್ಟ

ನವೆಂಬರ್ 4, 2026

ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಗೆ ಚಾಲನೆ

ನವೆಂಬರ್ 4, 2026

ಕನ್ನಡ ಭಾಷೆಯ ಉಳಿವು ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ; ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ; ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ನವೆಂಬರ್ 4, 2026

ಮೂರ್ನಾಡು ಭಾರತೀಯ ನೃತ್ಯ ಕಲಾ ಶಾಲೆಗೆ ಶೇ.100ರಷ್ಟು ಫಲಿತಾಂಶ; ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 4, 2026

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಡ್ಡಂಡ ಕಾರ್ಯಪ್ಪ ಅವರಿಗೆ ಮಸಿ ಬಳಿದ ಘಟನೆ ಖಂಡನೀಯ: ಬಿಜೆಪಿ ರೈತ ಮೋರ್ಚಾ

ನವೆಂಬರ್ 4, 2026

ಬಾಲ್ಯದಿಂದಲೇ ಸ್ವಚ್ಛತೆಯ ಹವ್ಯಾಸ ಬೆಳೆಸುವುದು ಅವಶ್ಯ: ಸೀತಾಲಕ್ಷ್ಮಿ

ನವೆಂಬರ್ 4, 2026

ಪೇರಿಯಂಡ ಪೆಮ್ಮಯ್ಯ ದಂಪತಿ ಸ್ಥಾಪಿಸಿದ ಪ್ರಥಮ ವರ್ಷದ ಸಾಹಿತ್ಯ ಪ್ರಶಸ್ತಿಗೆ ಡಾ. ಕೋರನ ಸರಸ್ವತಿ ಆಯ್ಕೆ

ನವೆಂಬರ್ 3, 2026

ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಸಾಹಿತಿ ಉಳುವಂಗಡ ಕಾವೇರಿ ಉದಯ್ ಆಯ್ಕೆ

ನವೆಂಬರ್ 3, 2026

ಸಾಹಿತಿ ನಾ. ಡಿಸೋಜಾ ವಿಶ್ವಮಾನವತ್ವ ಮೇಳೈಸಿದ ದಾರ್ಶನಿಕ: ಎಸ್.ಐ. ಮುನೀರ್ ಅಹಮದ್

ನವೆಂಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.