
ಮಡಿಕೇರಿ ಮೇ 11 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಮ್ಮೇಳನಾಧ್ಯಕ್ಷರಾದ ಅಬ್ದುಲ್ ರಶೀದ್ ಅವರಿಗೆ ಆಹ್ವಾನ ನೀಡಲಾಯಿತು. 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿಗಳು ಕಥೆಗಾರ ಅಬ್ದುಲ್ ರಶೀದ್ ಅವರ ಹುಣಸೂರಿನ ಬನ್ನಿಕುಪ್ಪೆ ಗ್ರಾಮದ ತೋಟದ ನಿವಾಸಕ್ಕೆ ಭೇಟಿ ನೀಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ ಕೇಶವ ಕಾಮತ್, ಹದಿನೇಳನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಉಪಾಧ್ಯಕ್ಷರು, ಕೊಡಗು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರಾದ ಲೋಕೇಶ್ ಕುಮಾರ್, ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಪಿ.ಎಫ್. ಸಬಾಸ್ಟಿನ್, ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕರು, ಸಮ್ಮೇಳನದ ಆಹಾರ ಸಮಿತಿಯ ಅಧ್ಯಕ್ಷರಾದ ಹರೀಶ್ ಗುಡ್ಡೆಮನೆ ಅವರು ಸಾಂಪ್ರದಾಯಿಕವಾಗಿ ಸಮ್ಮೇಳನದ ಅಧ್ಯಕ್ಷರನ್ನು ಗೌರವಿಸಿ ಸಮ್ಮೇಳನಕ್ಕೆ ಆಹ್ವಾನ ನೀಡಿದರು. ಈ ಸಂದರ್ಭ ಅಬ್ದುಲ್ ರಶೀದ್ ಅವರ ಪತ್ನಿ ಮೋಳಿ ವರ್ಗಿಸ್ ಇದ್ದರು.









