
ಮಡಿಕೇರಿ ಮೇ 12 NEWS DESK : ಜೀಪೊಂದು ಪ್ರಪಾತಕ್ಕೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಣ್ಣನೂರು ನಿವಾಸಿ ಬಾಲಕೃಷ್ಣನ್ (50) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಸೋಮವಾರ ರಾತ್ರಿ ವಿರಾಜಪೇಟೆಯಿಂದ ಕೇರಳ ರಾಜ್ಯದ ಕಣ್ಣನೂರಿಗೆ ತೆರಳುತ್ತಿದ್ದಾಗ ಜೀಪು ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಮಗುಚಿ ಬಿದ್ದಿದೆ. ತೀವ್ರವಾಗಿ ಗಾಯಗೊಂಡ ಬಾಲಕೃಷ್ಣನ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪೆರಂಬಾಡಿ ಚೆಕ್ ಪೋಸ್ಟ್‌ನಿಂದ ಸುಮಾರು 5 ಕಿ.ಮೀ ದೂರದಲ್ಲಿರುವ ಪ್ರಪಾತದಲ್ಲಿ ಜೀಪು ಸಹಿತ ಬಾಲಕೃಷ್ಣನ್ ಅವರ ಮೃತ ದೇಹ ಪತ್ತೆಯಾಗಿದೆ. ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.









