Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪಾಲಂಗಾಲ : ಹ್ಯಾಂಗಿಂಗ್ ಸೋಲಾರ್ ಪೆನ್ಸಿಂಗ್ ಕಾಮಗಾರಿಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪಾಲಂಗಾಲ : ಹ್ಯಾಂಗಿಂಗ್ ಸೋಲಾರ್ ಪೆನ್ಸಿಂಗ್ ಕಾಮಗಾರಿಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ

ಮೇ 13, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮೇ 13 NEWS DESK :  ಕ್ಷೇತ್ರದ ಜನತೆಯನ್ನು ದಶಕಗಳಿಂದ ಕಾಡುತ್ತಿರುವ ಆನೆ-ಮಾನವ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ, ಈಗಾಗಲೇ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಹಲವಾರು ಪ್ರಮುಖ ನಿರ್ಣಯಗಳನ್ನು ಕೈಗೊಂಡು, ಕ್ಷೇತ್ರಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ. ಅದರ ಭಾಗವಾಗಿ ವಿರಾಜಪೇಟೆ ತಾಲೂಕು ಪಾಲಂಗಾಲ ಗ್ರಾಮಕ್ಕೆ ಆಗಮಿಸಿದ ಶಾಸಕರು, ಈ ಭಾಗದಲ್ಲಿ ಅರಣ್ಯ ಇಲಾಖೆ ವತಿಯಿಂದ ಆನೆ ಹಾವಳಿ ತಡೆಗಟ್ಟಲು ರೂ.28 ಲಕ್ಷ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಹ್ಯಾಂಗಿಂಗ್ ಸೋಲಾರ್ ಪೆನ್ಸಿಂಗ್ ಕಾಮಗಾರಿಗೆ ಚಾಲನೆ ನೀಡಿದರಲ್ಲದೆ, ಈಗಾಗಲೇ ಈ ಸಂಬಂಧ ನಡೆಯುತ್ತಿರುವ ಕಾಮಗಾರಿಯ ವೀಕ್ಷಣೆ ಹಾಗೂ ಅಧಿಕಾರಿಗಳಿಂದ ಇದರ ಬಗ್ಗೆ ಸಂಪೂರ್ಣ ವಿವರಣೆಗಳನ್ನು ಪಡೆದರು. ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆ ವತಿಯಿಂದ ಅರಣ್ಯ ಗಂಚಿನಲ್ಲಿ ವಾಸಿಸುತ್ತಿರುವ ಮಹಿಳೆಯರು ಸ್ವಾವಲಂಬಿ ಆಗಲು ನೀಡುವ ಹೊಲಿಗೆ ಯಂತ್ರ ಹಾಗೂ ಇತರ ಸೌಲತ್ತುಗಳನ್ನು ಶಾಸಕರು ವಿತರಿಸಿದರು.  ಬಳಿಕ ಮಾತನಾಡಿದ ಶಾಸಕರು, ತನ್ನ ಕೋರಿಕೆ ಹಾಗೂ ಪ್ರಯತ್ನದ ಮೇರೆಗೆ, ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರು ಈಗಾಗಲೇ ಮಾನವ-ಪ್ರಾಣಿ ಸಂಘರ್ಷ ತಡೆಗಟ್ಟುವ ಸಲುವಾಗಿ ನೂರಾರು ಕೋಟಿ ಅನುದಾನವನ್ನು ಒದಗಿಸಿದ್ದು, ಕ್ಷೇತ್ರಾದ್ಯಂತ ತೀವ್ರತೆಗೆ ಅನುಸಾರವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಇದರಲ್ಲಿ ಸೋಲಾರ್ ಫೆನ್ಸಿಂಗ್, ಸೋಲಾರ್ ಹ್ಯಾಂಗಿಂಗ್ ಸೆನ್ಸಿಂಗ್, ರೈಲ್ವೆ ಬ್ಯಾರಿಕೇಡ್ ಅಳವಡಿಕೆ, ಆನೆ ಕಂದಕ ನಿರ್ಮಾಣ, ಅರಣ್ಯ ಇಲಾಖೆಯವರಿಗೆ ನೂತನ ಹಾಗೂ ಆಧುನಿಕ ಪ್ಯಾಟ್ರೋಲಿನ್ ವಾಹನಗಳು, ಅರಣ್ಯ ಇಲಾಖೆಗೆ ಹೆಚ್ಚಿನ ಅನುಭವಿ ಹಾಗೂ ತರಬೇತಿ ಪಡೆದಿರುವ ಸಿಬ್ಬಂದಿಗಳು ಮಾತ್ರವಲ್ಲದೆ ಇನ್ನೂ ಹಲವು ಸೌಲಭ್ಯಗಳನ್ನು ಕಲ್ಪಿಸಿದೆ. ಅರಣ್ಯ ಇಲಾಖೆಯೊಂದಿಗೆ ಸಾರ್ವಜನಿಕರು ಜಾಗೃತಿವಹಿಸಿಕೊಂಡು, ಅರಣ್ಯ ಅಂಚಿನಲ್ಲಿರುವ ನಿವಾಸಿಗಳು ವಿಶೇಷ ಜಾಗೃತಿಯಿಂದ ತಮ್ಮ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಅರಣ್ಯ ಅಧಿಕಾರಿಗಳು ಸಹ ಜನರೊಂದಿಗೆ ಸ್ನೇಹದಿಂದ ವರ್ತಿಸಿ, ಜನರೊಂದಿಗೆ ಉತ್ತಮ ಒಡನಾಟ ಇರಿಸಿಕೊಂಡಲ್ಲಿ ಇಂತಹ ಸಂಘರ್ಷಗಳನ್ನು ತಡೆಗಟ್ಟುವುದು ಮತ್ತಷ್ಟು ಸುಲಭವಾಗಲಿದೆ ಎಂದು ಕಿವಿಮಾತು ಹೇಳಿದರು. ಈ ಸಂದರ್ಭ ವಲಯ ಅಧ್ಯಕ್ಷರು ನಡಿಕೇರಿಯಂಡ ಮಹೇಶ್, ಕೆಡಿಪಿ ಸದಸ್ಯರು ಪ್ರಶಾಂತ್, ತಾಲೂಕು ಅಲ್ಪಸಂಖ್ಯಾತರ ಅಧ್ಯಕ್ಷರು ರಫೀಕ್, ಬೂತ್ ಅಧ್ಯಕ್ಷರು ವಿಜಯ್ ಕುಮಾರ್, ಮಾಜಿ ಅಧ್ಯಕ್ಷರು ಜೆಫ್ರೀ ಉತ್ತಪ್ಪ, ಇಸ್ಮಾಯಿಲ್, ಆಲಿ, ಮಳೇಟೀರ ಶುಭ ಸುಬ್ಬಯ್ಯ, ಪಕ್ಷದ ಮುಖಂಡರು ಬಾಚಮಾಂಡ ಲವ ಚಿಣ್ಣಪ್ಪ,ಕಲಿಯಂಡ ಸಂಪನ್ ಅಯ್ಯಪ್ಪ, ಸೂರಜ್ ಹೊಸೂರು, ಕುಂಡಚ್ಚಿರ ಮಂಜು ದೇವಯ್ಯ, ಜಿತನ್, ಧ್ಯಾನಿ, ಪಾಲಂಗಾಲ ಬೂತ್ ಅಧ್ಯಕ್ಷರು ಜಾಲು ಚೆಂಗಪ್ಪ,ಮಿಟ್ಟು ಅಯ್ಯಪ್ಪ, ಹರಿದಾಸ್, ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಗೆ ಚಾಲನೆ

ನವೆಂಬರ್ 4, 2026

ಕನ್ನಡ ಭಾಷೆಯ ಉಳಿವು ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ; ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ; ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ನವೆಂಬರ್ 4, 2026

ಮೂರ್ನಾಡು ಭಾರತೀಯ ನೃತ್ಯ ಕಲಾ ಶಾಲೆಗೆ ಶೇ.100ರಷ್ಟು ಫಲಿತಾಂಶ; ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 4, 2026

ಕನ್ನಡ ಭಾಷೆಯ ಉಳಿವು ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ; ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ; ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ನವೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ನ. 4: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಸಂಘದ ವತಿಯಿಂದ ವಿರಾಜಪೇಟೆ ಮಹಿಳಾ ಸಮಾಜದಲ್ಲಿ ಶಾಲಾ-ಕಾಲೇಜು…

ಮೂರ್ನಾಡು ಭಾರತೀಯ ನೃತ್ಯ ಕಲಾ ಶಾಲೆಗೆ ಶೇ.100ರಷ್ಟು ಫಲಿತಾಂಶ; ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 4, 2026

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಡ್ಡಂಡ ಕಾರ್ಯಪ್ಪ ಅವರಿಗೆ ಮಸಿ ಬಳಿದ ಘಟನೆ ಖಂಡನೀಯ: ಬಿಜೆಪಿ ರೈತ ಮೋರ್ಚಾ

ನವೆಂಬರ್ 4, 2026

ಬಾಲ್ಯದಿಂದಲೇ ಸ್ವಚ್ಛತೆಯ ಹವ್ಯಾಸ ಬೆಳೆಸುವುದು ಅವಶ್ಯ: ಸೀತಾಲಕ್ಷ್ಮಿ

ನವೆಂಬರ್ 4, 2026

ಪೇರಿಯಂಡ ಪೆಮ್ಮಯ್ಯ ದಂಪತಿ ಸ್ಥಾಪಿಸಿದ ಪ್ರಥಮ ವರ್ಷದ ಸಾಹಿತ್ಯ ಪ್ರಶಸ್ತಿಗೆ ಡಾ. ಕೋರನ ಸರಸ್ವತಿ ಆಯ್ಕೆ

ನವೆಂಬರ್ 3, 2026

ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಸಾಹಿತಿ ಉಳುವಂಗಡ ಕಾವೇರಿ ಉದಯ್ ಆಯ್ಕೆ

ನವೆಂಬರ್ 3, 2026

ಸಾಹಿತಿ ನಾ. ಡಿಸೋಜಾ ವಿಶ್ವಮಾನವತ್ವ ಮೇಳೈಸಿದ ದಾರ್ಶನಿಕ: ಎಸ್.ಐ. ಮುನೀರ್ ಅಹಮದ್

ನವೆಂಬರ್ 3, 2026

ಸರ್ವದೈವತ ಪದವಿ ಪೂರ್ವ ಕಾಲೇಜಿನ ಮೂರು ತಂಡಗಳು ರಾಜ್ಯಮಟ್ಟಕ್ಕೆ ಆಯ್ಕೆ

ನವೆಂಬರ್ 3, 2026

ಶಿಕ್ಷಣ ಇಲಾಖೆಯ ವಿಶೇಷ ಸಭೆ ಹಾಗೂ ಸಂವಾದಕ್ಕೆ ಜ್ಞಾನಗಂಗಾ ಶಾಲೆಯ ಬಿ.ಎಸ್. ನಿಂಗಪ್ಪ ಆಯ್ಕೆ

ನವೆಂಬರ್ 3, 2026

ತಂತ್ರಜ್ಞಾನ ಆಧಾರಿತ ಕೃಷಿ ಮಾರುಕಟ್ಟೆ ಕುರಿತು ರೈತ ಕ್ಷೇತ್ರ ಪಾಠಶಾಲೆ

ನವೆಂಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.