
ಮಡಿಕೇರಿ ಮೇ 13 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಬಾರಿಕಾಡು ಗ್ರಾಮದಲ್ಲಿ ರೂ.30 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಸಾರ್ವಜನಿಕರು ಇದರ ಸದ್ಬಳಕೆಯನ್ನು ಮಾಡುತ್ತ ನಾಡಿದ ಒಳಿತಿಗಾಗಿ ಪ್ರತಿಯೊಬ್ಬರು ಶ್ರಮಿಸಬೇಕೆಂದು ಕರೆ ನೀಡಿದರು. ಈ ಸಂದರ್ಭ ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಕೆಡಿಪಿ ಸದಸ್ಯರು ಪ್ರಶಾಂತ್, ಪ್ರಚಾರ ಸಮಿತಿಯ ಅಧ್ಯಕ್ಷರು ಮತೀನ್, ತಾಲೂಕು ಅಲ್ಪಸಂಖ್ಯಾತರ ಅಧ್ಯಕ್ಷರು ರಫೀಕ್, ಮಾಜಿ ಪುರಸಭೆ ಅಧ್ಯಕ್ಷರು ದೇಚಮ್ಮ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರು ಅಧ್ಯಕ್ಷರು ಶಬೀರ್, ಬೂತ್ ಅಧ್ಯಕ್ಷರು ವಿಜಯ್ ಕುಮಾರ್, ಮಾಜಿ ಅಧ್ಯಕ್ಷರು ಜೆಫ್ರೀ ಉತ್ತಪ್ಪ, ಇಸ್ಮಾಯಿಲ್, ಆಲಿ, ಮಳೇಟೀರ ಶುಭ ಸುಬ್ಬಯ್ಯ, ಸೂರಜ್ ಹೊಸೂರು, ಕುಂಡಚ್ಚಿರ ಮಂಜು ದೇವಯ್ಯ, ಜಿತನ್, ಧ್ಯಾನಿ, ಪಾಲಂಗಾಲ ಬೂತ್ ಅಧ್ಯಕ್ಷರು ಜಾಲು ಚೆಂಗಪ್ಪ,ಮಿಟ್ಟು ಅಯ್ಯಪ್ಪ, ಹರಿದಾಸ್,ಹಾಗೂ ಪ್ರಮುಖರು ಉಪಸ್ಥಿತರಿದ್ದರು.









