Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಲಾರಿ ಮಾಲೀಕರ ಸಮಸ್ಯೆಗೆ ಪರಿಹಾರ : ಮೈಸೂರು ನ್ಯೂ ಗೂಡ್ಸ್‌ ಟರ್ಮಿನಲ್‌ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಿದ ಸಂಸದ ಯದುವೀರ್‌ ಒಡೆಯರ್‌*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಲಾರಿ ಮಾಲೀಕರ ಸಮಸ್ಯೆಗೆ ಪರಿಹಾರ : ಮೈಸೂರು ನ್ಯೂ ಗೂಡ್ಸ್‌ ಟರ್ಮಿನಲ್‌ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಿದ ಸಂಸದ ಯದುವೀರ್‌ ಒಡೆಯರ್‌*

ಮೇ 13, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮೈಸೂರು ಮೇ 13 NEWS DESK : ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿ ಯಾದವಗಿರಿ ಗೂಡ್ಸ್‌ ಟರ್ಮಿನಲ್‌ ರಸ್ತೆಯನ್ನು ಲಾರಿಗೆಳಿಗೆ ಸಂಚಾರ ಮುಕ್ತ ಮಾಡಿಸುವಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಯಶಸ್ವಿಯಾಗಿದ್ದಾರೆ. ಯಾದವಗಿರಿ ಬಳಿಯ ಗೂಡ್ಸ್‌ ಟರ್ಮಿನಲ್‌ ರಸ್ತೆಯನ್ನು ಬಂದ್‌ ಮಾಡಿದ್ದರಿಂದ ಲಾರಿಗಳು ಐದಾರು ಕಿಲೋ ಮೀಟರ್‌ ಬಳಸಿ ಬರಬೇಕಾಗಿತ್ತು. ಇದರಿಂದ ಲಾರಿ ಮಾಲೀಕರಿಗೆ ಸಾವಿರಾರು ರೂಪಾಯಿ ನಷ್ಟವಾಗುತ್ತಿತ್ತು. ಈ ಕುರಿತು ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳು ಹತ್ತು ದಿನಗಳ ಹಿಂದೆ ಸಂಸದ ಯದುವೀರ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಯದುವೀರ್‌ ಒಡೆಯರ್‌ ರೈಲ್ವೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ರೈಲ್ವೆ ಗೂಡ್ಸ್‌ ಟರ್ಮಿನಲ್‌ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದರು. ನಂತರ ಮಾತನಾಡಿದ ಸಂಸದ ಯದುವೀರ್‌ ಒಡೆಯರ್‌, ಈ ಸಮಸ್ಯೆ ಕುರಿತು ನನ್ನ ಗಮನಕ್ಕೆ ಬಂದ ಕೂಡಲೇ ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚಿಸಿದೆ. ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಅಧಿಕಾರಿಗಳು ಬೈಪಾಸ್‌ ಮಾದರಿಯಲ್ಲಿರುವ ಟರ್ಮಿನಲ್‌ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದರು ಎಂದರು. ಈ ಟರ್ಮಿನಲ್‌ ದಾರಿ ಸಂಚಾರಕ್ಕೆ ಮುಕ್ತವಾಗಿದ್ದರಿಂದ ಪ್ರತಿಯೊಂದು ಲಾರಿಗೆ ತಿಂಗಳಿಗೆ 10 ಸಾವಿರ ರೂಪಾಯಿ ಉಳಿತಾಯವಾಗಲಿದೆ. ಇದು ಲಾರಿಗಳ ಮಾಲೀಕರಿಗೆ, ಚಾಲಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಯದುವೀರ್‌ ಒಡೆಯರ್‌ ಸ್ಪಷ್ಟಪಡಿಸಿದರು. ಗೂಡ್ಸ್‌ ಟರ್ಮಿನಲ್‌ ಸ್ಥಳಾಂತರವಿಲ್ಲ ::  ಯಾದವಗಿರಿ ಗೂಡ್ಸ್‌ ಟರ್ಮಿನಲ್‌ ಅನ್ನು ಸ್ಥಳಾಂತರ ಮಾಡಲಾಗುತ್ತದೆ ಎಂಬ ವದಂತಿ ಹರಡಿದೆ. ಆದರೆ ಇದು ಕಪೋಲಕಲ್ಪಿತ. ಈ ರೀತಿಯ ಯಾವುದೇ ಪ್ರಸ್ತಾವನೆ ರೈಲ್ವೆ ಇಲಾಖೆ ಮುಂದಿಲ್ಲ ಎಂದರು. ಈ ಗೂಡ್ಸ್‌ ಟರ್ಮಿನಲ್‌ ಸ್ಥಳಾಂತರ ಸ್ಥಳಾಂತರವಾಗುವುದಿಲ್ಲ, ವಂದೇಭಾರತ್‌ ರೈಲ್ವೆ ನಿರ್ವಹಣೆಗೂ ಇದು ಬಳಕೆಯಾಗಲಿದೆ. ಇಂಥ ವದಂತಿಗಳನ್ನು ಯಾರೂ ಹಬ್ಬಿಸಬಾರದು. ಗೂಡ್ಸ್‌ ಟರ್ಮಿನಲ್‌ ಇಲ್ಲೇ ಇರಲಿದೆ ಎಂದು ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟಪಡಿಸಿದರು. ಲಾರಿ ಮಾಲೀಕರ ಸಂಘದ ಅಧ್ಯಕ್ಷ ಶಾಹೀದ್‌, ಯಾದವಗಿರಿ ನಿವಾಸಿಗಳ ಸಂಘದ ಅಧ್ಯಕ್ಷ ಎಸ್ ಕೆ ದಿನೇಶ್, ಸಾಮಾಜಿಕ ಉದ್ಯಮಿ ನಿಖಿಲೇಶ್, ಜಿಲ್ಲಾ ಸಂಘದ ಅಧ್ಯಕ್ಷ ಕೋದಂಡರಾಮ್ ಮತ್ತು ಇತರರು ಉಪಸ್ಥಿತರಿದ್ದರು. :: ಸಂಸದ ಯದುವೀರ್‌ ನಮ್ಮ ಪಾಲಿಗೆ ಆಪತ್ಬಾಂಧವರು :: ಇದೇ ಸಂದರ್ಭದಲ್ಲಿ ಮಾತನಾಡಿದ ಲಾರಿ ಮಾಲೀಕರ ಸಂಘದ ಅಧ್ಯಕ್ಷರಾದ ಶಾಹೀದ್‌, ಹಲವಾರು ವರ್ಷಗಳಿಂದ ಈ ಕುರಿತು ಸಮಸ್ಯೆ ಎದುರಿಸುತ್ತಿದ್ದೇವು. ಈ ಬಗ್ಗೆ ಹಿಂದಿನ ಸಂಸದರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ ಎಂದು ತಿಳಿಸಿದ್ದಾರೆ. ನಮ್ಮ ಸಂಸದರಿಗೆ ಹತ್ತು ದಿನಗಳ ಹಿಂದಷ್ಟೇ ಹೋಗಿ ಮನವಿ ಸಲ್ಲಿಸಿದೆವು. ಕೂಡಲೇ ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಟರ್ಮಿನಲ್‌ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ. ಇವರ ಋಣವನ್ನು ನಾವು ಯಾವತ್ತೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ. :: ಮೈಸೂರಿಗೆ ಇಂಥ ಜನಪ್ರತಿನಿಧಿಗಳು ಬೇಕು :: ನಮ್ಮ ಮಹಾರಾಜರು ಎಂದರೆ ಜನಾನುರಾಗಿಗಳು. ಈಗ ಜನಪ್ರತಿನಿಧಿಯಾಗಿ ಜನಸೇವೆಯಲ್ಲಿ ತೊಡಗಿದ್ದಾರೆ. ಇಂಥವರು ನಮ್ಮ ಜನಪ್ರತಿಧಿಗಳಾಗಿರಬೇಕು. ಇವರಿಗೆ ನಮ್ಮ ಸಂಪೂರ್ಣ ಬೆಂಬಲ ಎಂದು ಶಾಹೀದ್‌ ಘೋಷಿಸಿದಾಗ ಸಭೆಯಲ್ಲಿದ್ದವರು ಕೂಡ ದನಿ ಗೂಡಿಸಿದರು. ಪ್ರತಿ ದಿನ 600ಕ್ಕೂ ಹೆಚ್ಚು ಲಾರಿಗಳು ಈ ಟರ್ಮಿನಲ್‌ ರಸ್ತೆಯಲ್ಲಿ ಈಗ ಸಂಚರಿಸುತ್ತದೆ. ಐದಾರು ಕಿಲೋ ಮೀಟರ್‌ ಕಡಿಮೆಯಾಗುತ್ತದೆ. ಇದರಿಂದ ಸಾವಿರಾರು ರೂಪಾಯಿ ಹಣ ಉಳಿತಾಯವಾಗುತ್ತದೆ. ಸಂಸದರ ನೆರವನ್ನು ನಾವು ಸದಾ ಸ್ಮರಿಸುತ್ತೇವೆ ಎಂದು ಶಾಹೀದ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*

ಅಕ್ಟೋಬರ್ 9, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.8 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಅಕ್ಟೋಬರ್, 14 ರಂದು ಬೆಳಗ್ಗೆ 11…

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.