
ಗೋಣಿಕೊಪ್ಪಲು ಮೇ 13 NEWS DESK : ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲ್ಲೂಕು ಪಂಚಾಯಿತಿಯ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಕೆ.ಆರ್.ರಾಜೇಶ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಕಾರ್ಯ ನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಸಿ.ಅಪ್ಪಣ್ಣ ಅವರು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲ್ಲೂಕಿಗೆ ವರ್ಗಾವಣೆಗೊಂಡ ಹಿನ್ನೆಲೆ, ಮಾಲ್ದಾರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಆರ್‍ರಾಜೇಶ್ ಅವರನ್ನು ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ನಿಯುಕ್ತಿಗೊಳಿಸಲಾಗಿದೆ. ತಾಲ್ಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ, ಅರುವತ್ತೊಕ್ಲು, ಕಿರುಗೂರು ಪಂಚಾಯ್ತಿ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಿರುವ ರಾಜೇಶ್, ಈ ಹಿಂದೆ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.









