Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡಾ.ಎಂ.ಪಿ.ಸೋನಿಯಾಗೆ ಅಗದ ತಂತ್ರ ವಿಭಾಗದಲ್ಲಿ ಪ್ರಥಮ ರ‍್ಯಾಂಕ್*
  • *ಮಡಿಕೇರಿ : ಮಹಿಳೆಯರು ಮತ್ತು ಮಕ್ಕಳಿಗಾಗಿ ಯೋಜನೆಗಳ ಕುರಿತು ಮಾಹಿತಿ ಕಾರ್ಯಾಗಾರ*
  • *ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕುರಿತು ಕ್ರಿಯಾ ಯೋಜನೆ ತರಬೇತಿ*
  • *ಮೇ 15 ರಂದು ಮಡಿಕೇರಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ*
  • *ವಿರಾಜಪೇಟೆ ಬ್ಲಾಕ್ ಮತ್ತು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ವಲಯಗಳಿಗೆ ನೂತನ ಅಧ್ಯಕ್ಷರುಗಳ ನೇಮಕ*
  • *ಮೇ 15 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ವಿರಾಜಪೇಟೆ ತಾ.ಪಂ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಕೆ.ಆರ್‌.ರಾಜೇಶ್ ನೇಮಕ*
  • *ದೇಹದಾರ್ಢ್ಯ ಸ್ಪರ್ಧೆ ಯಲ್ಲಿ ಕುಶಾಲನಗರದ ಮೊಹಮ್ಮದ್ ನಬ್ ಹಾನ್ ಸಾಧನೆ*
  • *ತೋರ ಗ್ರಾಮದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’ : ಕುಗ್ರಾಮಗಳಿಗೂ ಅಕಾಡೆಮಿ ಕಾರ್ಯಕ್ರಮ ತಲುಪುತ್ತಿರುವುದು ಅರೆಭಾಷೆ ಬೆಳವಣಿಗೆಗೆ ಸಹಕಾರಿ :  ಶಾಸಕ ಎ.ಎಸ್.ಪೊನ್ನಣ್ಣ*
  • *ಕೊಡಗು : ಹೋಂಸ್ಟೇಗಳ ಸರ್ವೆ ಕಾರ್ಯ ಆರಂಭ : ಹೋಂಸ್ಟೇ ಗಳ ನೋಂದಣಿಗೆ ಅವಕಾಶ : ನಿತಿನ್ ಚಕ್ಕಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕುರಿತು ಕ್ರಿಯಾ ಯೋಜನೆ ತರಬೇತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕುರಿತು ಕ್ರಿಯಾ ಯೋಜನೆ ತರಬೇತಿ*

ಮೇ 14, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 14 NEWS DESK : ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಯು, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ, ಕರ್ನಾಟಕ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಾಯತ್ತ ಸಂಸ್ಥೆಯಾಗಿದ್ದು, ಕರ್ನಾಟಕ ಸರ್ಕಾರದ ನಿರ್ದೇಶನದಂತೆ “ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆ(ಕೆಎಸ್‍ಎಪಿಸಿಸಿ)ಯನ್ನು ಸಿದ್ಧಪಡಿಸಿ 2024ರಲ್ಲಿ ಕೇಂದ್ರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ಅನುಮೋದನೆ ಪಡೆದಿದೆ. ಈ ಯೋಜನೆಯಡಿಯಲ್ಲಿ ಹವಾಮಾನ ಬದಲಾವಣೆಯ ಕುರಿತ ಕಾರ್ಯ ಅಂಶಗಳನ್ನು ಆಧರಿಸಿ, ವಿವಿಧ ಇಲಾಖೆಗಳು 2025-2030ರ ಅವಧಿಗೆ ಪ್ರಮುಖ ಕಾರ್ಯಕ್ಷಮತಾ ಸೂಚಕಗಳನ್ನು ಗುರಿಗಳೊಂದಿಗೆ ನಿಗದಿಪಡಿಸಿವೆ. ಈ ಸೂಚಕಗಳ ಪರಿಣಾಮಕಾರಿ  ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರೆ ಪಾಲುದಾರ ಸಂಸ್ಥೆಗಳ ಸಾಮಥ್ರ್ಯ ವೃದ್ಧಿ ಅತ್ಯವಶ್ಯಕವಾಗಿದೆ.
ಈ ಹಿನ್ನಲೆಯಲ್ಲಿ, ಎಂಪ್ರಿ ಸಂಸ್ಥೆಯು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಸಹಯೋಗದೊಂದಿಗೆ 2025-26ನೇ ಸಾಲಿನಲ್ಲಿ ರಾಜ್ಯದ 22 ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿದೆ. ಇದರ ಮುಂದುವರಿದ ಭಾಗವಾಗಿ, 2026-27ನೇ ಸಾಲಿನಲ್ಲಿ ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ವಿಸ್ತರಿಸಲಾಗುತ್ತಿದೆ. ಈ ಸರಣಿಯಲ್ಲಿ ಗುರುವಾರ ಕೊಡಗು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತರಬೇತಿ ಕಾರ್ಯಾಗಾರ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮುಖ್ಯ ಯೋಜನಾಧಿಕಾರಿಗಳಾದ ಅಬ್ದುಲ್ ನಬಿ ಅವರು ಹಾಗೂ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಎಂಪ್ರಿ ಸಂಸ್ಥೆಯ ಸಂಶೋಧನಾ ವಿಜ್ಞಾನಿಗಳಾದ ಡಾ.ಶೃತಿ ಅವರು ಹಾಗೂ ಬೆಂಗಳೂರಿನ ಜಲ ಸಂಪನ್ಮೂಲ ತಜ್ಞರು ಎಸಿಐಡಬ್ಲ್ಯುಆರ್‍ಎಂ ಡಾ.ಶಶಿಕುಮಾರ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಆನಂದ್ ಪ್ರಕಾಶ್ ಮೀನಾ ಅವರು ಮಾತನಾಡಿ ಹವಾಮಾನ ಬದಲಾವಣೆಗೆ ಅನೇಕ ಕಾರಣಗಳಿದ್ದು, ಈ ಬಗ್ಗೆ ಕಾಲ ಕಾಲಕ್ಕೆ ಮಾಹಿತಿ ನೀಡುವಂತಾಗಬೇಕು ಎಂದರು. ಕೆಪಿಐಗಳ ಅನುಷ್ಠಾನಕ್ಕೆ ತರಲು ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದನ್ನು ತಿಳಿಸಿ, ತರಬೇತಿ ಆಯೋಜಿಸಿದ ಎಂಪ್ರಿ, ಕೆಎಸ್‍ಸಿಎಸ್‍ಟಿ ಗೆ ಪ್ರಶಂಸೆಯನ್ನು ತಿಳಿಸಿ ತರಬೇತಿಯ ಪೂರ್ಣ ಉಪಯೋಗ ಪಡೆಯಲು ಭಾಗವಹಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮುಖ್ಯ ಯೋಜನಾಧಿಕಾರಿ ಅಬ್ದುಲ್ ನಬಿ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ತರಬೇತಿ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಣ ಸಂಸ್ಥೆಗಳ ಸದಸ್ಯರು ಹಾಗೂ ಇತರೆ ಪಾಲುದಾರರು ಭಾಗವಹಿಸಿದ್ದರು. ಡಾ.ಶೃತಿ ಅವರು “ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆ” ಕುರಿತು ಸವಿಸ್ತಾರವಾಗಿ ವಿವರಣೆ ನೀಡಿದರು. ಕಾರ್ಯನೀತಿ, ಕಾರ್ಯತಂತ್ರಗಳು, ವಿವಿಧ ಇಲಾಖೆಗಳ ಪಾತ್ರ ಹಾಗೂ ಅಲ್ಪಾವಧಿಯ ಹವಾಮಾನ ಮಾಲಿನ್ಯಕಾರಕಗಳ ಪರಿಣಾಮಗಳು ಮತ್ತು ಜಿಲ್ಲಾಸ್ಥರದ ದತ್ತಾಂಶಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಜಲ ಸಂಪನ್ಮೂಲ ವಲಯಕ್ಕೆ ಸಂಬಂಧಿಸಿದ ಹವಾಮಾನ ಕ್ರಿಯಾ ಯೋಜನೆ ಕುರಿತು ಜಲ ಸಂಪನ್ಮೂಲ ತಜ್ಞರು ಎಸಿಐಡಬ್ಲ್ಯುಆರ್‍ಎಂ ಬೆಂಗಳೂರು, ಡಾ. ಶಶಿಕುಮಾರ್ ಎನ್ ಅವರು ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದ ಯಶಸ್ಸಿಗೆ ಎನ್.ಆರ್.ಡಿ.ಎಂ.ಎಸ್ ಅಧಿಕಾರಿಗಳಾದ ಕುಮಾರಿ ಇಂಚರಾ ಅವರು ಉತ್ತಮ ಸಹಕಾರ ನೀಡಿದರು ಹಾಗೂ ದತ್ತಾಂಶ ಹಾಗೂ ಇಲಾಖೆಗಳು ಎನ್‍ಆರ್‍ಡಿಎಂಎಸ್ ಉಪಯೋಗ ಹೇಗೆ ಪಡೆಯಬೇಕು ಎಂಬ ಕುರಿತು ತಿಳಿಸಿದರು. ಎಂಪ್ರಿ ಸಂಸ್ಥೆಯ, ತರಬೇತಿ ಸಹಾಯಕರಾದ ರಾಘವೇಂದ್ರ ಎನ್. ಹಾಗೂ ಶ್ರೀಶೈಲ್, ಇಐಎಸಿಪಿ ಅವರು ಕಾರ್ಯಕ್ರಮದ ವ್ಯವಸ್ಥಾಪನೆ ಮತ್ತು ನಿರ್ವಹಣೆಯಲ್ಲಿ ಮಹತ್ವದ ಪಾತ್ರವಹಿಸಿ, ಕಾರ್ಯಕ್ರಮದ ಗುರಿಗಳನ್ನು ಯಶಸ್ವಿಯಾಗಿ ಸಾಧಿಸಲು ಸಹಕರಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಡಾ.ಎಂ.ಪಿ.ಸೋನಿಯಾಗೆ ಅಗದ ತಂತ್ರ ವಿಭಾಗದಲ್ಲಿ ಪ್ರಥಮ ರ‍್ಯಾಂಕ್*

ಮೇ 14, 2026

*ಮಡಿಕೇರಿ : ಮಹಿಳೆಯರು ಮತ್ತು ಮಕ್ಕಳಿಗಾಗಿ ಯೋಜನೆಗಳ ಕುರಿತು ಮಾಹಿತಿ ಕಾರ್ಯಾಗಾರ*

ಮೇ 14, 2026

*ಮೇ 15 ರಂದು ಮಡಿಕೇರಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ*

ಮೇ 14, 2026

*ಮಡಿಕೇರಿ : ಮಹಿಳೆಯರು ಮತ್ತು ಮಕ್ಕಳಿಗಾಗಿ ಯೋಜನೆಗಳ ಕುರಿತು ಮಾಹಿತಿ ಕಾರ್ಯಾಗಾರ*

ಮೇ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 14 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ…

*ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕುರಿತು ಕ್ರಿಯಾ ಯೋಜನೆ ತರಬೇತಿ*

ಮೇ 14, 2026

*ಮೇ 15 ರಂದು ಮಡಿಕೇರಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ*

ಮೇ 14, 2026

*ವಿರಾಜಪೇಟೆ ಬ್ಲಾಕ್ ಮತ್ತು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ವಲಯಗಳಿಗೆ ನೂತನ ಅಧ್ಯಕ್ಷರುಗಳ ನೇಮಕ*

ಮೇ 14, 2026

*ಮೇ 15 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 13, 2026

*ವಿರಾಜಪೇಟೆ ತಾ.ಪಂ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಕೆ.ಆರ್‌.ರಾಜೇಶ್ ನೇಮಕ*

ಮೇ 13, 2026

*ದೇಹದಾರ್ಢ್ಯ ಸ್ಪರ್ಧೆ ಯಲ್ಲಿ ಕುಶಾಲನಗರದ ಮೊಹಮ್ಮದ್ ನಬ್ ಹಾನ್ ಸಾಧನೆ*

ಮೇ 13, 2026

*ತೋರ ಗ್ರಾಮದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’ : ಕುಗ್ರಾಮಗಳಿಗೂ ಅಕಾಡೆಮಿ ಕಾರ್ಯಕ್ರಮ ತಲುಪುತ್ತಿರುವುದು ಅರೆಭಾಷೆ ಬೆಳವಣಿಗೆಗೆ ಸಹಕಾರಿ :  ಶಾಸಕ ಎ.ಎಸ್.ಪೊನ್ನಣ್ಣ*

ಮೇ 13, 2026

*ಕೊಡಗು : ಹೋಂಸ್ಟೇಗಳ ಸರ್ವೆ ಕಾರ್ಯ ಆರಂಭ : ಹೋಂಸ್ಟೇ ಗಳ ನೋಂದಣಿಗೆ ಅವಕಾಶ : ನಿತಿನ್ ಚಕ್ಕಿ*

ಮೇ 13, 2026

*ಲಾರಿ ಮಾಲೀಕರ ಸಮಸ್ಯೆಗೆ ಪರಿಹಾರ : ಮೈಸೂರು ನ್ಯೂ ಗೂಡ್ಸ್‌ ಟರ್ಮಿನಲ್‌ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಿದ ಸಂಸದ ಯದುವೀರ್‌ ಒಡೆಯರ್‌*

ಮೇ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.