Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : 272 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
  • *ರಾಜಸೀಟು ಉದ್ಯಾನವನದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಚಾಲನೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಅಂತರ ಕಾಲೇಜು ಥ್ರೋಬಾಲ್ ಪಂದ್ಯಾಟ : ಕ್ರೀಡೆ ಆತ್ಮ ವಿಶ್ವಾಸವನ್ನು ಬೆಳೆಸುತ್ತದೆ : ಪ್ರೊ.ಮೇಜರ್ ರಾಘವ ಬಿ. ಅಭಿಮತ*
  • *ತೈಲ ಬಿಕ್ಕಟ್ಟು : ಬೆಂಗಾವಲು ಪಡೆಯನ್ನು ಹಿಂಪಡೆಯುವಂತೆ ಕೋರಿದ ಶಾಸಕ ಪೊನ್ನಣ್ಣ*
  • *ರಾಜಾಸೀಟ್ ನಲ್ಲಿ ಕಂಗೊಳಿಸಿದ ಕೋವಿ ಮತ್ತು ಕೊಳಲು : ಬಾಸುಮ ಕೊಡಗು ನಿದೇ೯ಶನದ ಹೊಸ ಚಿತ್ರಕ್ಕೆ ಮುಹೂತ೯ ನೆರವೇರಿಸಿದ ಆಯ೯ವಧ೯ನ್ ಗುರೂಜಿ*
  • *ಪಟ್ಟಮಾಡ ಕುಟುಂಬದ ಐನ್ ಮನೆಯಲ್ಲಿ ಗುರುಕಾರೋಣ ತೆರೆ :  ಸಂಪ್ರದಾಯ ಸಂರಕ್ಷಣೆಯಲ್ಲಿ ಐನ್ ಮನೆಗಳ ಪಾತ್ರ ಪ್ರಮುಖ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಡಿಕೇರಿ ಕೊಡವ ಸಮಾಜಕ್ಕೆ ಕೊಡವ ಹೆರಿಟೇಜ್ ಕೇಂದ್ರ ಹಸ್ತಾಂತರಿಸಲು ಮನವಿ*
  • *ಪೊನ್ನಂಪೇಟೆಯಲ್ಲಿ ಟಾಸ್ಕ್ ಪೋರ್ಸ್ ಸಮಿತಿ‌ ಸಭೆ : ಮುಂಗಾರು ಶೀಘ್ರ ಆರಂಭ : ಅಗತ್ಯ ಸಿದ್ಧತೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*
  • *ಅಭಿವೃದ್ಧಿ ಶೂನ್ಯ ಸರಕಾರ ಹಿಜಾಬ್ ರಾಜಕಾರಣಕ್ಕಿಳಿದಿದೆ : ವಿರಾಜಪೇಟೆ ಬಿಜೆಪಿ ಅಸಮಾಧಾನ*
  • *ಹಿಜಾಬ್ ಗೆ ಅನುಮತಿ : ಆದೇಶ ಹಿಂಪಡೆಯಲು ಸೋಮವಾರಪೇಟೆ ಬಿಜೆಪಿ ಆಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪೊನ್ನಂಪೇಟೆಯಲ್ಲಿ ಟಾಸ್ಕ್ ಪೋರ್ಸ್ ಸಮಿತಿ‌ ಸಭೆ : ಮುಂಗಾರು ಶೀಘ್ರ ಆರಂಭ : ಅಗತ್ಯ ಸಿದ್ಧತೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪೊನ್ನಂಪೇಟೆಯಲ್ಲಿ ಟಾಸ್ಕ್ ಪೋರ್ಸ್ ಸಮಿತಿ‌ ಸಭೆ : ಮುಂಗಾರು ಶೀಘ್ರ ಆರಂಭ : ಅಗತ್ಯ ಸಿದ್ಧತೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*

ಮೇ 15, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ ಮೇ 15 NEWS DESK : ಕೊಡಗು ಜಿಲ್ಲೆಯಲ್ಲಿ ಮುಂಗಾರು ಶೀಘ್ರ ಆರಂಭವಾಗುವ ಲಕ್ಷಣಗಳು ಕಾಣುತ್ತಿದ್ದು, ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಸೂಚಿಸಿದ್ದಾರೆ. ಪೊನ್ನಂಪೇಟೆಯ ತಾ.ಪಂ.ಸಭಾಂಗಣದಲ್ಲಿ ನಡೆದ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲ್ಲೂಕು ಮಟ್ಟದ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಜಿಲ್ಲೆಯ ಅಲ್ಲಲ್ಲಿ ಗಾಳಿ ಮಳೆಗೆ ಮರದ ಕೊಂಬೆಗಳು ಬೀಳುತ್ತಿದ್ದು, ಇದರಿಂದ ವಿದ್ಯುತ್ ಹಾಗೂ ಸಾರಿಗೆ ಸಂಪರ್ಕಕ್ಕೆ ಅಡಚಣೆ ಉಂಟಾಗುತ್ತದೆ. ಆದ್ದರಿಂದ ರಸ್ತೆ ಬದಿ ಬೀಳುವ ಕೊಂಬೆಗಳನ್ನು ಕಡಿಯುವುದು, ಚರಂಡಿ ಹೂಳು ತೆಗೆಯುವುದು, ಗುಂಡಿ ಬಿದ್ದ ರಸ್ತೆಗಳನ್ನು ಸರಿಪಡಿಸುವುದು, ಮತ್ತಿತರ ಅಗತ್ಯ ಕ್ರಮವಹಿಸುವಂತೆ ಎ.ಎಸ್.ಪೊನ್ನಣ್ಣ ಅವರು ನಿರ್ದೇಶನ ನೀಡಿದರು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಿಡಿಒಗಳು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ್ದಲ್ಲಿ ತಳಮಟ್ಟದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸಬಹುದಾಗಿದೆ. ಆ ನಿಟ್ಟಿನಲ್ಲಿ ಇಚ್ಛಾಶಕ್ತಿ ತೋರಬೇಕು ಎಂದು ಶಾಸಕರು ತಾಕೀತು ಮಾಡಿದರು.  ಸಾರ್ವಜನಿಕರು ಗ್ರಾಮದ ಮಟ್ಟದಲ್ಲಿ ಆಗಬೇಕಿರುವ ಸಣ್ಣ ಪುಟ್ಟ ಕೆಲಸಗಳಿಗೂ ನನ್ನ ಬಳಿಗೆ ಆಗಮಿಸುತ್ತಾರೆ.  ಆದ್ದರಿಂದ ಗ್ರಾಮ ಪಂಚಾಯತಿ ಮಟ್ಟದಲ್ಲಿಯೇ ಸಂಬಂಧಪಟ್ಟ ಎಂಜಿನಿಯರ್  ಅಥವಾ ಅಧಿಕಾರಿಗಳ ಗಮನಕ್ಕೆ ತಂದರೆ ಸಮಸ್ಯೆಗಳನ್ನು ಪರಿಹರಿಸಬಹುದಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕರು ಒತ್ತಿ  ಹೇಳಿದರು.  ಅಂಗನವಾಡಿ, ಶಾಲಾ-ಕಾಲೇಜುಗಳ ಕಟ್ಟಡಗಳು ಸುಸ್ಥಿತಿ ಬಗ್ಗೆ ಗಮನಹರಿಸಬೇಕು. ಹಳೆಯ ಕಟ್ಟಡಗಳು ಬೀಳುವ ಹಂತದಲ್ಲಿದ್ದರೆ ವರದಿ ನೀಡುವಂತೆ ಸೂಚಿಸಿದರು.  ವಿದ್ಯುತ್ ಹಳೆಯ ಕಂಬಗಳನ್ನು ಬದಲಿಸುವುದು, ವಿದ್ಯುತ್ ಪರಿವರ್ತಕಗಳನ್ನು ದಾಸ್ತಾನು ಮಾಡಿಕೊಂಡು ಅಳವಡಿಸುವುದು ಮತ್ತಿತರ ಕಾರ್ಯದ ಬಗ್ಗೆ ಸೆಸ್ಕ್ ಇಲಾಖೆ ಎಂಜಿನಿಯರ್ ಗಮನಹರಿಸುವಂತೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹೇಳಿದರು.  ಕೆಲವು ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ ಪರಿಹರಿಸುವಂತಾಗಬೇಕು. ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಹೆಚ್ಚಿನ ಗಮನ ನೀಡಬೇಕು ಎಂದರು. ರಸ್ತೆ ಬದಿಯ ಗಿಡಗಂಟೆಗಳನ್ನು ಕಡಿಯದಿದ್ದಲ್ಲಿ ಸೆಸ್ಕ್, ಲೋಕೋಪಯೋಗಿ, ಪಂಚಾಯತ್ ರಾಜ್ ಇಲಾಖೆಗೆ ಕೆಲಸ ಹೆಚ್ಚಾಗಲಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಲಿದೆ.  ಆದ್ದರಿಂದ ಈ ಕೆಲಸವನ್ನು ಶೀಘ್ರ ಪೂರ್ಣಗೊಳಿಸುವಂತೆ ಶಾಸಕರು ನಿರ್ದೇಶನ ನೀಡಿದರು. ಹೆಚ್ಚಿನ ಮಳೆಯಿಂದಾಗಿ ಮನೆ ಹಾನಿಯಾದಲ್ಲಿ ಕೂಡಲೇ ಪರಿಹಾರ ವಿತರಿಸಲು ಕ್ರಮವಹಿಸಬೇಕು. ಮಳೆಗಾಲದ ಸಂದರ್ಭದಲ್ಲಿ ಆಹಾರಧಾನ್ಯವನ್ನು ಸಮರ್ಪಕವಾಗಿ ಪೂರೈಸಬೇಕು. ನದಿ, ಹೊಳೆ ಬದಿಯಲ್ಲಿ ವಾಸಿಸುವ ಕುಟುಂಬಗಳಿಗೆ ಮುನ್ನೆಚ್ಚರಿಕೆಯಾಗಿ ಮಾಹಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ ಮಾಡಿದರು.  ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರವಹಿಸಬೇಕು. ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ ದಾಸ್ತಾನು ಇರಬೇಕು ಎಂದು ಶಾಸಕರು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷರಾದ ಪ್ರಶಾಂತ್ ಅವರು ಶ್ರೀಮಂಗಲ ಆಸ್ಪತ್ರೆಯಲ್ಲಿ ಜ್ವರದ ಔಷಧಿಯೇ ಇಲ್ಲ. ಈ ರೀತಿಯಾದರೆ ಹೇಗೆ ಎಂದು ಸಭೆಯ ಗಮನಕ್ಕೆ ತಂದರು.  ಮಳೆಗಾಲದ ಸಂದರ್ಭದಲ್ಲಿ ಜಾನುವಾರು ರಕ್ಷಣೆಗೂ ಗಮನಹರಿಸಬೇಕು. ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆ ಹಾಗೂ ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಶಾಸಕರು ಸೂಚಿಸಿದರು.  ಮಡಿಕೇರಿ ತಾ.ಪಂ.ಇಒ ಶೇಖರ್ ಅವರು ಮಾತನಾಡಿ ಮುಂಗಾರು ಸಂದರ್ಭದಲ್ಲಿ ಮುನ್ನೆಚ್ಚರ ವಹಿಸುವಲ್ಲಿ ಈಗಾಗಲೇ ಹಲವು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಂಚಾಯತ್ ರಾಜ್, ಕಂದಾಯ, ಪೊಲೀಸ್, ಎಂಜಿನಿಯರಿಂಗ್ ವಿಭಾಗ ಸೇರಿದಂತೆ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಈಗಾಗಲೇ ಹಲವು ಕಾರ್ಯ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.   ಗ್ರಾ.ಪಂ ಮಟ್ಟದಲ್ಲಿಯೂ ಸಹ ಆಡಳಿತ ಅಧಿಕಾರಿಗಳು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ, ಹಲವು ಸಲಹೆ ಮಾರ್ಗದರ್ಶನ ನೀಡಲಾಗಿದೆ ಎಂದರು. ಪ್ರವಾಹ ಪೀಡಿತ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಮುನ್ನೆಚ್ಚರ ವಹಿಸುವ ನಿಟ್ಟಿನಲ್ಲಿ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.  ವಿರಾಜಪೇಟೆ ತಹಶೀಲ್ದಾರರಾದ ಪ್ರವೀಣ್ ಕುಮಾರ್ ಅವರು ಮಾತನಾಡಿ ಮುಂಗಾರು ಸಂದರ್ಭದಲ್ಲಿ ಮುನ್ನೆಚ್ಚರ ವಹಿಸುವ ಬಗ್ಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಲಾಲು ಅಪ್ಪಣ್ಣ ಅವರು ಮಾತನಾಡಿ ಬಿರುನಾಣಿ, ಬಿ.ಶೆಟ್ಟಿಗೇರಿ ವ್ಯಾಪ್ತಿಯಲ್ಲಿ ಮಳೆ ಆರಂಭವಾದ ನಂತರ ಜಂಗಲ್ ಕಟ್ಟಿಂಗ್, ಗುಂಡಿ ಮುಚ್ಚುವುದು, ಚರಂಡಿ ಸ್ವಚ್ಚಗೊಳಿಸುವುದು ಸೇರಿದಂತೆ ಯಾವುದೇ ರೀತಿಯ ಕೆಲಸ ಮಾಡಲು ಕಷ್ಟಸಾಧ್ಯ, ಆದ್ದರಿಂದ ಮಳೆ ಆರಂಭಕ್ಕೂ ಮೊದಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದರು.ಕುಡಿಯುವ ನೀರು ವಿಭಾಗದ ಎಂಜಿನಿಯರ್ ಭಾಸ್ಕರ ಅವರು ಮಾತನಾಡಿ ಕುಡಿಯುವ ನೀರು ಕಾಮಗಾರಿಗೆ ಸರ್ಕಾರದಿಂದ ಒಂದುವರೆ ಕೋಟಿ ರೂ ಅನುದಾನ ಬಿಡುಗಡೆ ಆಗಿದ್ದು,  ಕಾಮಗಾರಿ ಸಂಬಂಧ ಅನುಮೋದನೆ ನೀಡಬೇಕಿದೆ ಎಂದು ಕೋರಿದರು. ಪೊನ್ನಂಪೇಟೆ  ತಹಶೀಲ್ದಾರರಾದ ಸಂಜನಾ, ತಾ.ಪಂ.ಇಒ, ಮಹಿಳಾ ಮತ್ತು  ಅಭಿವೃದ್ಧಿ, ಸೆಸ್ಕ್, ಲೋಕೋಪಯೋಗಿ, ಪಂಚಾಯತ್ ರಾಜ್, ವಿರಾಜಪೇಟೆ ಪುರಸಭೆ ಮುಖ್ಯಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ, ಪೊಲೀಸ್ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮಳೆಗಾಲದ ಸಂದರ್ಭದಲ್ಲಿ ಕೈಗೊಂಡ  ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ನೀಡಿದರು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ : 272 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮೇ 15, 2026

*ರಾಜಸೀಟು ಉದ್ಯಾನವನದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಚಾಲನೆ*

ಮೇ 15, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಅಂತರ ಕಾಲೇಜು ಥ್ರೋಬಾಲ್ ಪಂದ್ಯಾಟ : ಕ್ರೀಡೆ ಆತ್ಮ ವಿಶ್ವಾಸವನ್ನು ಬೆಳೆಸುತ್ತದೆ : ಪ್ರೊ.ಮೇಜರ್ ರಾಘವ ಬಿ. ಅಭಿಮತ*

ಮೇ 15, 2026

*ರಾಜಸೀಟು ಉದ್ಯಾನವನದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಚಾಲನೆ*

ಮೇ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 15 NEWS DESK : ರಾಜಸೀಟು ಉದ್ಯಾನವನದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು…

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಅಂತರ ಕಾಲೇಜು ಥ್ರೋಬಾಲ್ ಪಂದ್ಯಾಟ : ಕ್ರೀಡೆ ಆತ್ಮ ವಿಶ್ವಾಸವನ್ನು ಬೆಳೆಸುತ್ತದೆ : ಪ್ರೊ.ಮೇಜರ್ ರಾಘವ ಬಿ. ಅಭಿಮತ*

ಮೇ 15, 2026

*ತೈಲ ಬಿಕ್ಕಟ್ಟು : ಬೆಂಗಾವಲು ಪಡೆಯನ್ನು ಹಿಂಪಡೆಯುವಂತೆ ಕೋರಿದ ಶಾಸಕ ಪೊನ್ನಣ್ಣ*

ಮೇ 15, 2026

*ರಾಜಾಸೀಟ್ ನಲ್ಲಿ ಕಂಗೊಳಿಸಿದ ಕೋವಿ ಮತ್ತು ಕೊಳಲು : ಬಾಸುಮ ಕೊಡಗು ನಿದೇ೯ಶನದ ಹೊಸ ಚಿತ್ರಕ್ಕೆ ಮುಹೂತ೯ ನೆರವೇರಿಸಿದ ಆಯ೯ವಧ೯ನ್ ಗುರೂಜಿ*

ಮೇ 15, 2026

*ಪಟ್ಟಮಾಡ ಕುಟುಂಬದ ಐನ್ ಮನೆಯಲ್ಲಿ ಗುರುಕಾರೋಣ ತೆರೆ :  ಸಂಪ್ರದಾಯ ಸಂರಕ್ಷಣೆಯಲ್ಲಿ ಐನ್ ಮನೆಗಳ ಪಾತ್ರ ಪ್ರಮುಖ : ಶಾಸಕ ಎ.ಎಸ್.ಪೊನ್ನಣ್ಣ*

ಮೇ 15, 2026

*ಮಡಿಕೇರಿ ಕೊಡವ ಸಮಾಜಕ್ಕೆ ಕೊಡವ ಹೆರಿಟೇಜ್ ಕೇಂದ್ರ ಹಸ್ತಾಂತರಿಸಲು ಮನವಿ*

ಮೇ 15, 2026

*ಪೊನ್ನಂಪೇಟೆಯಲ್ಲಿ ಟಾಸ್ಕ್ ಪೋರ್ಸ್ ಸಮಿತಿ‌ ಸಭೆ : ಮುಂಗಾರು ಶೀಘ್ರ ಆರಂಭ : ಅಗತ್ಯ ಸಿದ್ಧತೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*

ಮೇ 15, 2026

*ಅಭಿವೃದ್ಧಿ ಶೂನ್ಯ ಸರಕಾರ ಹಿಜಾಬ್ ರಾಜಕಾರಣಕ್ಕಿಳಿದಿದೆ : ವಿರಾಜಪೇಟೆ ಬಿಜೆಪಿ ಅಸಮಾಧಾನ*

ಮೇ 15, 2026

*ಹಿಜಾಬ್ ಗೆ ಅನುಮತಿ : ಆದೇಶ ಹಿಂಪಡೆಯಲು ಸೋಮವಾರಪೇಟೆ ಬಿಜೆಪಿ ಆಗ್ರಹ*

ಮೇ 15, 2026

*ಶಾಸಕ ಪೊನ್ನಣ್ಣ ಮಧ್ಯಸ್ಥಿಕೆ : ರಾಜೀನಾಮೆ ಹಿಂಪಡೆದ ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷರು*

ಮೇ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.