

ಮಡಿಕೇರಿ ಮೇ 15 NEWS DESK : ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ನೀಡಿರುವ ಭದ್ರತಾ ಬೆಂಗಾವಲು ಪಡೆಯನ್ನು ಹಿಂಪಡೆಯುವಂತೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ತೈಲ ಬಿಕ್ಕಟ್ಟು ಸೃಷಿಯಾಗುವ ಆತಂಕ, ಪರಿಸರ ಮಾಲಿನ್ಯ ತಡೆಗಟ್ಟುವ ಹಾಗೂ ದೇಶದಲ್ಲಿ ನಿರ್ಮಾಣವಾಗಿರುವ ಪರಿಸ್ಥಿತಿಯನ್ನು ನಿರ್ವಹಣೆ ಮಾಡಲು ಬೆಂಗಾವಲು ವಾಹನವನ್ನು ಕಡಿತಗೊಳಿಸುವಂತೆ ಉಲ್ಲೇಖಿಸಿ ಎ.ಎಸ್.ಪೊನ್ನಣ್ಣ ಅವರು ಕೊಡಗು ಎಸ್.ಪಿ ಅವರನ್ನು ಪತ್ರದ ಮೂಲಕ ಕೋರಿದ್ದಾರೆ.









