Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸ್ಥಳ ಪರಿಶೀಲನೆ*
  • *2ನೇ ಮೊಣ್ಣಂಗೇರಿ ರಸ್ತೆ ಅಭಿವೃದ್ಧಿಗೆ ಶಾಸಕ ಡಾ.ಮಂತರ್ ಗೌಡ ಅವರಿಂದ 35 ಲಕ್ಷ ರೂ.ಅನುದಾನ*
  • *ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ’ :  ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*
  • *ಮೇ 20 ರಂದು ಮಡಿಕೇರಿ ತಾಲ್ಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮ*
  • *ರಾಯ್ ಡೇವಿಡ್ ನಿಧನ*
  • *ಜಮೀಲಗೆ ಮಹಾತಾಯಿ ಪ್ರಶಸ್ತಿ ಪ್ರದಾನ*
  • *ವಿದ್ಯಾರ್ಥಿಗಳಿಗೆ ಪುಸ್ತಕ ಉತ್ತಮ ಸಹಚರರಾಗಿರಬೇಕು : ಪ್ರೊ.ಬಿ.ನಂಜುಂಡ ಸ್ವಾಮಿ*
  • *ಮಡಿಕೇರಿ ಕೊಡವ ಸಮಾಜಕ್ಕೆ ಕೊಡವ ಹೆರಿಟೇಜ್ ಕೇಂದ್ರ ಹಸ್ತಾಂತರಿಸಲು ಮನವಿ*
  • *ಮಡಿಕೇರಿ : 272 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
  • *ರಾಜಸೀಟು ಉದ್ಯಾನವನದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ’ :  ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ’ :  ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಮೇ 16, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 16 NEWS DESK : ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಭಾರತದ ಸರ್ವೋಚ್ಛ ನ್ಯಾಯಾಲಯ ‘ಸಮಾಧಾನ ಸಮಾರೋಹ-2026’ ಎಂಬ ವಿಶೇಷ ಲೋಕ ಅದಾಲತ್‍ನ್ನು ಆ.21, 22 ಮತ್ತು 23 ರಂದು ಮೂರು ದಿನಗಳ ಕಾಲ ಹಮ್ಮಿಕೊಂಡಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದ್ದಾರೆ. ಸರ್ವೋಚ್ಛ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಸಂಧಾನಕ್ಕಾಗಿ ಗುರುತಿಸಿ ಈ ವಿಶೇಷ ಲೋಕ ಅದಾಲತ್ ಆಯೋಜಿಸಿದ್ದು, ಆಸಕ್ತಿವುಳ್ಳವರು ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ನೋಂದಣಿಗೆ ಸಹ ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಸಂಪರ್ಕಿಸುವ ಮೂಲಕ ಸಾರ್ವಜನಿಕರು ತಮ್ಮ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ಇಂದಿನಿಂದಲೇ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಆಯ್ಕೆಯಾದ ವ್ಯಾಜ್ಯಗಳನ್ನು ನೋಂದಾಯಿತ ಕಾನೂನು ಸಮನ್ವಯಕರ ಮಧ್ಯಸ್ಥಿಕೆಯಲ್ಲಿ ತಾವಿರುವ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿಯೇ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅವರು ವಿವರಿಸಿದ್ದಾರೆ. ಬ್ಯಾಂಕಿಂಗ್ ಮತ್ತು ವಿಮಾ ಸಂಬಂಧಿತ ಪ್ರಕರಣಗಳು, ನಾಗರಿಕ ಕಾನೂನು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ಗ್ರಾಹಕ ವ್ಯಾಜ್ಯಗಳು ಮತ್ತು ರೇರಾ, ಕ್ರಿಮಿನಲ್ ಪ್ರಕರಣಗಳು, ಕೌಟುಂಬಿಕ ವಿವಾದಗಳು, ಕಾರ್ಮಿಕ ಮತ್ತು ಕೈಗಾರಿಕಾ ಕಾನೂನುಗಳು ವಿವಾದಗಳು, ಭೂಸ್ವಾಧೀನ ಮತ್ತು ಪುನರ್ವಸತಿ, ಆಸ್ತಿ ತೆರಿಗೆ, ಬಾಡಿಗೆ ನಿಯಂತ್ರಣ ಮತ್ತು ಸಾರ್ವಜನಿಕ ಆವರಣ (ತೆರವುಗೊಳಿಸುವಿಕೆ) ಕಾಯ್ದೆ, ವರ್ಗಾವಣೆ ಅರ್ಜಿಗಳು ಮತ್ತು ಸೇವಾ ಕಾನೂನುಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಇತ್ಯರ್ಥಕ್ಕೆ ಗುರುತಿಸಲಾಗಿದೆ ಎಂದು ಶುಭ ಅವರು ತಿಳಿಸಿದ್ದಾರೆ. ಈ ವಿಶೇಷ ಲೋಕ ಅದಾಲತ್ ಜನಸಾಮಾನ್ಯರಿಗೆ ತಮ್ಮ ಕಾನೂನು ಹೋರಾಟವನ್ನು ತ್ವರಿತವಾಗಿ ಮತ್ತು ಕಡಿಮೆ ವೆಚ್ಚದಲ್ಲಿ ಮುಗಿಸಿಕೊಳ್ಳಲು ಸಿಕ್ಕಿರುವ ಮಹತ್ವದ ಅವಕಾಶವಾಗಿದೆ. ಇದರಿಂದ ಸಮಯ ಮತ್ತು ಹಣ ಉಳಿತಾಯವಾಗುವುದಲ್ಲದೆ, ಉಭಯ ಪಕ್ಷಗಳ ನಡುವೆ ಸೌಹಾರ್ದ ಸಂಬಂಧ ಉಳಿಯಲು ಸಹಕಾರಿಯಾಗಲಿದೆ. ಸಾರ್ವಜನಿಕರು ಈ ಅದಾಲತ್ ಪ್ರಯೋಜನ ಪಡೆಯುವಂತೆ ಮನವಿ ಮಾಡಿದರು.
ಆಸಕ್ತ ಕಕ್ಷಿದಾರರು ಅಥವಾ ಅವರ ವಕೀಲರು ಸರ್ವೋಚ್ಚ ನ್ಯಾಯಾಲಯದ ವೆಬ್‍ಸೈಟ್ ನೀಡಲಾದ ಗೂಗಲ್ ಫಾರ್ಮ್‍ಲಿಂಕ್ https://forms.gle/jqxefqF4BCWzukoP6 ಮೂಲಕ ಮೇ 31, 2026 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಥವಾ ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರದಿಂದ ಪಡೆಯಬಹುದಾಗಿದೆ ಎಂದು ಶುಭ ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ : ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸ್ಥಳ ಪರಿಶೀಲನೆ*

ಮೇ 16, 2026

*2ನೇ ಮೊಣ್ಣಂಗೇರಿ ರಸ್ತೆ ಅಭಿವೃದ್ಧಿಗೆ ಶಾಸಕ ಡಾ.ಮಂತರ್ ಗೌಡ ಅವರಿಂದ 35 ಲಕ್ಷ ರೂ.ಅನುದಾನ*

ಮೇ 16, 2026

*ಮೇ 20 ರಂದು ಮಡಿಕೇರಿ ತಾಲ್ಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮ*

ಮೇ 16, 2026

*2ನೇ ಮೊಣ್ಣಂಗೇರಿ ರಸ್ತೆ ಅಭಿವೃದ್ಧಿಗೆ ಶಾಸಕ ಡಾ.ಮಂತರ್ ಗೌಡ ಅವರಿಂದ 35 ಲಕ್ಷ ರೂ.ಅನುದಾನ*

ಮೇ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 16 NEWS DESK  : ಮಡಿಕೇರಿ ವಿಧಾನಸಭಾ ಕ್ಷೇತ್ರದ ಅತ್ಯಂತ ಕುಗ್ರಾಮ ಎಂದೇ ಬಿಂಬಿತರಾಗಿರುವ ಗಾಳಿಬೀಡು ಪಂಚಾಯತ್…

*ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ’ :  ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಮೇ 16, 2026

*ಮೇ 20 ರಂದು ಮಡಿಕೇರಿ ತಾಲ್ಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮ*

ಮೇ 16, 2026

*ರಾಯ್ ಡೇವಿಡ್ ನಿಧನ*

ಮೇ 16, 2026

*ಜಮೀಲಗೆ ಮಹಾತಾಯಿ ಪ್ರಶಸ್ತಿ ಪ್ರದಾನ*

ಮೇ 15, 2026

*ವಿದ್ಯಾರ್ಥಿಗಳಿಗೆ ಪುಸ್ತಕ ಉತ್ತಮ ಸಹಚರರಾಗಿರಬೇಕು : ಪ್ರೊ.ಬಿ.ನಂಜುಂಡ ಸ್ವಾಮಿ*

ಮೇ 15, 2026

*ಮಡಿಕೇರಿ ಕೊಡವ ಸಮಾಜಕ್ಕೆ ಕೊಡವ ಹೆರಿಟೇಜ್ ಕೇಂದ್ರ ಹಸ್ತಾಂತರಿಸಲು ಮನವಿ*

ಮೇ 15, 2026

*ಮಡಿಕೇರಿ : 272 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮೇ 15, 2026

*ರಾಜಸೀಟು ಉದ್ಯಾನವನದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಚಾಲನೆ*

ಮೇ 15, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಅಂತರ ಕಾಲೇಜು ಥ್ರೋಬಾಲ್ ಪಂದ್ಯಾಟ : ಕ್ರೀಡೆ ಆತ್ಮ ವಿಶ್ವಾಸವನ್ನು ಬೆಳೆಸುತ್ತದೆ : ಪ್ರೊ.ಮೇಜರ್ ರಾಘವ ಬಿ. ಅಭಿಮತ*

ಮೇ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.