Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೇ 19 ರಂದು ವಿರಾಜಪೇಟೆ, ಸಿದ್ದಾಪುರ ಮತ್ತು ಅಮ್ಮತ್ತಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ*
  • *ಮಡಿಕೇರಿ : ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸ್ಥಳ ಪರಿಶೀಲನೆ*
  • *2ನೇ ಮೊಣ್ಣಂಗೇರಿ ರಸ್ತೆ ಅಭಿವೃದ್ಧಿಗೆ ಶಾಸಕ ಡಾ.ಮಂತರ್ ಗೌಡ ಅವರಿಂದ 35 ಲಕ್ಷ ರೂ.ಅನುದಾನ*
  • *ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ’ :  ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*
  • *ಮೇ 20 ರಂದು ಮಡಿಕೇರಿ ತಾಲ್ಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮ*
  • *ರಾಯ್ ಡೇವಿಡ್ ನಿಧನ*
  • *ಜಮೀಲಗೆ ಮಹಾತಾಯಿ ಪ್ರಶಸ್ತಿ ಪ್ರದಾನ*
  • *ವಿದ್ಯಾರ್ಥಿಗಳಿಗೆ ಪುಸ್ತಕ ಉತ್ತಮ ಸಹಚರರಾಗಿರಬೇಕು : ಪ್ರೊ.ಬಿ.ನಂಜುಂಡ ಸ್ವಾಮಿ*
  • *ಮಡಿಕೇರಿ ಕೊಡವ ಸಮಾಜಕ್ಕೆ ಕೊಡವ ಹೆರಿಟೇಜ್ ಕೇಂದ್ರ ಹಸ್ತಾಂತರಿಸಲು ಮನವಿ*
  • *ಮಡಿಕೇರಿ : 272 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*2ನೇ ಮೊಣ್ಣಂಗೇರಿ ರಸ್ತೆ ಅಭಿವೃದ್ಧಿಗೆ ಶಾಸಕ ಡಾ.ಮಂತರ್ ಗೌಡ ಅವರಿಂದ 35 ಲಕ್ಷ ರೂ.ಅನುದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*2ನೇ ಮೊಣ್ಣಂಗೇರಿ ರಸ್ತೆ ಅಭಿವೃದ್ಧಿಗೆ ಶಾಸಕ ಡಾ.ಮಂತರ್ ಗೌಡ ಅವರಿಂದ 35 ಲಕ್ಷ ರೂ.ಅನುದಾನ*

ಮೇ 16, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 16 NEWS DESK  : ಮಡಿಕೇರಿ ವಿಧಾನಸಭಾ ಕ್ಷೇತ್ರದ ಅತ್ಯಂತ ಕುಗ್ರಾಮ ಎಂದೇ ಬಿಂಬಿತರಾಗಿರುವ ಗಾಳಿಬೀಡು ಪಂಚಾಯತ್ ವ್ಯಾಪ್ತಿಯ 2 ನೇ ಮೊಣ್ಣಂಗೇರಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿಗೆ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ರವರು 35 ಲಕ್ಷ ರೂಗಳ ಭರಪೂರ ಅನುದಾನವನ್ನು ನೀಡಿದ್ದಾರೆ. ಅತ್ಯಂತ ದುರ್ಗಮವಾದ ಹಾದಿಗಳನ್ನು ಹೊಂದಿರುವ 2 ನೇ ಮೊಣ್ಣಂಗೇರಿ ಗ್ರಾಮ 2018 ರ ಪ್ರಕೃತಿ ವಿಕೋಪದಲ್ಲಿ ಬಹು ಸಂಕಷ್ಟಕ್ಕೆ ಒಳಗಾದ ಪ್ರದೇಶವಾಗಿದ್ದು, ಅಲ್ಲಿನ ಜನರ ಕೋರಿಕೆ ಮೇರೆಗೆ ಶಾಸಕರು 35 ಲಕ್ಷ ರೂ ವೆಚ್ಚದ ರಸ್ತೆ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ಸಲ್ಲಿಸಿದರು. ಕ್ಷೇತ್ರದ ಪ್ರತಿಯೊಬ್ಬ ಪ್ರಜೆಯು ಸರ್ಕಾರದ ಸೌಲಭ್ಯ ಪಡೆಯಲು ಅರ್ಹನಾಗಿದ್ದು ಅದನ್ನು ಒದಗಿಸುವ ಕರ್ತವ್ಯ ಜನಪ್ರತಿನಿಧಿಯ ಜವಾಬ್ದಾರಿ ಎಂದು ಮಾತನಾಡಿದ ಡಾ|| ಮಂತರ್ ಗೌಡ ರವರು ಕುಗ್ರಾಮ ಎಂದು ಅಪಖ್ಯಾತಿ ಹೊಂದಿರುವ 2 ನೇ ಮೊಣ್ಣಂಗೇರಿ ಗ್ರಾಮವನ್ನು ಸುಗ್ರಾಮವಾಗಿಸಲು ಬದ್ದನಾಗಿದ್ದೇನೆ ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು. ಶೀಘ್ರದಲ್ಲಿಯೇ ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ನಿರ್ವಹಿಸುವಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು. ಸದ್ಯದಲ್ಲಿಯೇ ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಗ್ರಾಮಕ್ಕೆ ಕರೆಸಿ ಜನಸ್ಪಂದನ ಸಭೆ ನಡೆಸುವುದಾಗಿ ಮಾಹಿತಿ ನೀಡಿದರು. ಗ್ರಾಮದ ಜನರು ಜಮೀನಿನ ಹಕ್ಕು ಪತ್ರ, ವಿದ್ಯುತ್, ಸುಸಜ್ಜಿತ ರಸ್ತೆ ಮುಂತಾದ ಮೂಲಭೂತ ಸೌಕರ್ಯದಿಂದ ವಂಚಿತರಾಗಿರುವ ಬಗ್ಗೆ ಪ್ರಮುಖರಾದ ಹೆಚ್.ಎ.ಹಂಸ ಮಾಹಿತಿ ನೀಡಿದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ಅವರು ಮಾತನಾಡಿ 2021-22 ರ ಮಳೆಗಾಲದಲ್ಲಿ ಡಾ.ಮಂತರ್ ಗೌಡ ರವರು ಈ ಭಾಗದಲ್ಲಿ ಮಳೆಯಿಂದ ಹಾನಿಯಾದಾಗ ಸ್ಥಳಕ್ಕೆ ಬಂದು ಜೆಸಿಬಿ ವ್ಯವಸ್ಥೆ ಮಾಡಿ ಟಾರ್ಪಾಲ್ ವಿತರಣೆ ಮಾಡಿ ಗ್ರಾಮಸ್ಥರಿಗೆ ನೆರವು ನೀಡಿದ್ದರು. ಈಗ ಶಾಸಕರಾಗಿ ಆಯ್ಕೆಯಾಗಿ ಸರ್ಕಾರದಿಂದ ಅನುದಾನ ಒದಗಿಸಿ ನುಡಿದಂತೆ ನಡೆದಿದ್ದಾರೆ ಎಂದು ಶ್ಲಾಘಿಸಿದರು. ಸ್ಥಳೀಯರಾದ ಮುದಿಯಾರ್ ಗಣೇಶ್ ರವರು ಡಾ ಮಂತರ್ ಗೌಡರವರು ಸಮಸ್ಯೆಗಳಿಗೆ ಸ್ಪಂದಿಸುವ ವಾಗ್ದಾನ ಮಾಡಿದ್ದು ಅದನ್ನು ಪ್ರಾಮಾಣಿಕವಾಗಿ ಪೂರ್ಣಗೊಳಿಸಲು ಮುಂದಾಗಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.
ಮುಖ್ಯಸ್ಥರಾದ ಬಷೀರ್ ರವರು ಶಾಸಕರು ತಮ್ಮ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ನೀಡಿದ್ದು ಅದಕ್ಕಾಗಿ ಗ್ರಾಮದ ಜನತೆ ಅಭಾರಿಯಾಗಿದ್ದೇವೆ ಎಂದು ಹೇಳಿದರು. ಗ್ರಾಮಸ್ಥರು ಹತ್ತಾರು ಬೇಡಿಕೆಗಳನ್ನು ಶಾಸಕರಿಗೆ ಸಲ್ಲಿಸಿದರು. ಸುಭಾಶ್ ಆಳ್ವ, ಪಂಚಾಯತ್ ಮಾಜಿ ಅಧ್ಯಕ್ಷರಾದ ಪುಷ್ಪ, ಪ್ರಮುಖರಾದ ಕೋಚನ ಹರಿಪ್ರಸಾದ್, ಆರ್.ಪಿ.ಚಂದ್ರಶೇಖರ್, ಬಾಳಾಡಿ ಪ್ರತಾಪ್, ವಿ.ಜಿ.ಮೋಹನ್, ಕವನ್ ಕೊತ್ತೋಳಿ, ದಿನೇಶ್ ಶೆಟ್ಟಿ, ಅರ್ಜುನ್, ಸ್ಥಳೀಯರಾದ ಕುಡಿಯರ ಚೌರ, ದಮಯಂತಿ, ಭವಾನಿ, ಚೈತ್ರ, ಅಶ್ವಥ್, ಜನಾರ್ದನ, ಜಾನಕಿ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೇ 19 ರಂದು ವಿರಾಜಪೇಟೆ, ಸಿದ್ದಾಪುರ ಮತ್ತು ಅಮ್ಮತ್ತಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ*

ಮೇ 16, 2026

*ಮಡಿಕೇರಿ : ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸ್ಥಳ ಪರಿಶೀಲನೆ*

ಮೇ 16, 2026

*ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ’ :  ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಮೇ 16, 2026

*ಮಡಿಕೇರಿ : ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸ್ಥಳ ಪರಿಶೀಲನೆ*

ಮೇ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 16 NEWS DESK : ನಗರದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ…

*2ನೇ ಮೊಣ್ಣಂಗೇರಿ ರಸ್ತೆ ಅಭಿವೃದ್ಧಿಗೆ ಶಾಸಕ ಡಾ.ಮಂತರ್ ಗೌಡ ಅವರಿಂದ 35 ಲಕ್ಷ ರೂ.ಅನುದಾನ*

ಮೇ 16, 2026

*ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ’ :  ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಮೇ 16, 2026

*ಮೇ 20 ರಂದು ಮಡಿಕೇರಿ ತಾಲ್ಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮ*

ಮೇ 16, 2026

*ರಾಯ್ ಡೇವಿಡ್ ನಿಧನ*

ಮೇ 16, 2026

*ಜಮೀಲಗೆ ಮಹಾತಾಯಿ ಪ್ರಶಸ್ತಿ ಪ್ರದಾನ*

ಮೇ 15, 2026

*ವಿದ್ಯಾರ್ಥಿಗಳಿಗೆ ಪುಸ್ತಕ ಉತ್ತಮ ಸಹಚರರಾಗಿರಬೇಕು : ಪ್ರೊ.ಬಿ.ನಂಜುಂಡ ಸ್ವಾಮಿ*

ಮೇ 15, 2026

*ಮಡಿಕೇರಿ ಕೊಡವ ಸಮಾಜಕ್ಕೆ ಕೊಡವ ಹೆರಿಟೇಜ್ ಕೇಂದ್ರ ಹಸ್ತಾಂತರಿಸಲು ಮನವಿ*

ಮೇ 15, 2026

*ಮಡಿಕೇರಿ : 272 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮೇ 15, 2026

*ರಾಜಸೀಟು ಉದ್ಯಾನವನದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಚಾಲನೆ*

ಮೇ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.