
ಮಡಿಕೇರಿ ಮೇ 19 NEWS DESK : 2025-26ನೇ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಗಳಿಸಿದ ಜಿಲ್ಲೆಯ ಪ್ರೌಢ ಶಾಲೆಗಳಿಗೆ ಕನ್ನಡಸಿರಿ ಸ್ನೇಹ ಬಳಗದ ಕೊಡಗು ಜಿಲ್ಲಾ ಘಟಕದ ವತಿಯಿಂದ ಸಾಧನಸಿರಿ ಪ್ರಶಸ್ತಿ ಪ್ರದಾನ ಸಮಾರಂಭ ಮೇ 22 ರಂದು ಮಡಿಕೇರಿಯ ಗಾಂಧಿ ಭವನದಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡಸಿರಿ ಸ್ನೇಹ ಬಳಗದ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ಬಿ.ಎಸ್ ಅವರು ಬೆಳಿಗ್ಗೆ 10.30 ಗಂಟೆಗೆ ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಪೆರಿಗ್ರಿನ್ ಎಸ್.ಮಚಾಡೊ ಅವರು ಅಭಿನಂದನಾ ನುಡಿಯಾಡಲಿದ್ದಾರೆ. ರೋಟರಿ ಸಂಸ್ಥೆ ಕುಶಾಲನಗರದ ಸಹಾಯಕ ರಾಜ್ಯಪಾಲ ಎಂ.ಡಿ.ರಂಗಸ್ವಾಮಿ ಅವರು ಪ್ರಾಸ್ತಾವಿಕ ನುಡಿಗಳಾಡಲಿದ್ದಾರೆ. ಅತಿಥಿಗಗಳಾಗಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬಸವರಾಜ್, ಡಯಟ್ ಸಂಸ್ಥೆಯ ಉಪ ನಿರ್ದೇಶಕ ರಾಮಚಂದ್ರ ರಾಜೇ ಅರಸ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಆರ್.ಪಿ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ, ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಜೆ.ಆನಂದ್, ಕರ್ನಾಟಕ ರಾಜ್ಯ ಪ್ರೌಢ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಹೆಚ್.ಬಿ.ಕುಮಾರ್, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಪಿ.ಎಸ್.ರವಿ ಕೃಷ್ಣ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಟಿ.ಆರ್.ರತ್ನಕುಮಾರ್, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಡಿ.ಚಂದನ, ವಿಶೇಷ ಆಹ್ವಾನಿತರಾಗಿ ಮಡಿಕೇರಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಕುಡೆಕಲ್ ಸಂತೋಷ್, ಸೋಮವಾರಪೇಟೆ ಮಾಜಿ ಅಧ್ಯಕ್ಷ ಜವರಪ್ಪ, ಕೊಡವ ತಕ್ಕ್ ಎಳ್ತ್ ಕಾರಡ ಕೂಟದ ಅಧ್ಯಕ್ಷ ಚೆಟ್ಟಂಗಡ ರವಿ ಸುಬ್ಬಯ್ಯ, ಹಿರಿಯ ಸಾಹಿತಿ ಕಿಗ್ಗಾಲು ಗಿರೀಶ್, ಲೇಖಕ ವೈಲೇಶ್ ಹಾಗೂ ಹಿರಿಯ ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ ಪಾಲ್ಗೊಳ್ಳಲಿದ್ದಾರೆ ಎಂದು ಲೋಕೇಶ್ ಸಾಗರ್ ತಿಳಿಸಿದರು. ಶೇ.100ರಷ್ಟು ಫಲಿತಾಂಶ ಗಳಿಸಿದ ಜಿಲ್ಲೆಯ ಪ್ರೌಢ ಶಾಲೆಗಳ ಮುಖ್ಯಸ್ಥರನ್ನು ಸನ್ಮಾನಿಸಿ ಗೌರವಿಸಲಾಗುವುದು ಮತ್ತು ಶಾಲೆಗಳಿಗೆ ಸುಮಾರು 2 ಸಾವಿರ ಪುಸ್ತಕಗಳನ್ನು ವಿತರಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಬಳಗದ ಸದಸ್ಯರುಗಳಾದ ಎಂ.ಧನಂಜಯ, ನಾಗರಾಜ ಶೆಟ್ಟಿ ಹಾಗೂ ರಮೇಶ್ ಕೆ.ಎಸ್ ಉಪಸ್ಥಿತರಿದ್ದರು.









