Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಯಕತ್ವದ ಕೊರತೆಯಿಂದಲೇ ಆಮದು ನಾಯಕರು ಶಾಸಕರಾಗಿದ್ದಾರೆ : ಸೋಮವಾರಪೇಟೆ ಬಿಜೆಪಿ ಟೀಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಯಕತ್ವದ ಕೊರತೆಯಿಂದಲೇ ಆಮದು ನಾಯಕರು ಶಾಸಕರಾಗಿದ್ದಾರೆ : ಸೋಮವಾರಪೇಟೆ ಬಿಜೆಪಿ ಟೀಕೆ*

ಮೇ 20, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಮೇ 20 : ಕೊಡಗು ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ, ಬಿಜೆಪಿಗೆ ಕಾರ್ಯಕರ್ತರ ನಾಯಕತ್ವವೇ ದೊಡ್ಡ ಶಕ್ತಿಯಾಗಿದೆ. ಬಿಜೆಪಿಗೆ ನಾಯಕತ್ವದ ಕೊರತೆ ಇರಬಹುದೆಂದು ಇತ್ತೀಚೆಗೆ ಮಡಿಕೇರಿ ಕ್ಷೇತ್ರದ ಶಾಸಕರು ನೀಡಿರುವ ಹೇಳಿಕೆ ಖಂಡನೀಯವೆoದು ಸೋಮವಾರಪೇಟೆ ಬಿಜೆಪಿ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸದೃಢ ಹಿರಿಯ ಮುಖಂಡರ ನೇತೃತ್ವದಲ್ಲಿ ಬಿಜೆಪಿಯಲ್ಲಿರುವ ದೊಡ್ಡ ಸಂಖ್ಯೆಯ ಕಾರ್ಯಕರ್ತರೇ ನಾಯಕರಾಗಿದ್ದಾರೆ. ಆದರೆ ಕಾರ್ಯಕರ್ತರೇ ಇಲ್ಲದ ಕೊಡಗು ಕಾಂಗ್ರೆಸ್ ನಾಯಕತ್ವದ ಕೊರತೆಯನ್ನು ಎದುರಿಸುತ್ತಿದೆ. ಹೊರ ಜಿಲ್ಲೆಯಿಂದ ಬಂದು ಇಲ್ಲಿ ಶಾಸಕರಾಗಿರುವ ಮಡಿಕೇರಿ ಶಾಸಕರಿಗೆ ಇದು ಮರೆತು ಹೋಗಿದೆ. ಬಿಜೆಪಿ ಎಂದಿಗೂ ಆಮದು ನಾಯಕರನ್ನು ಶಾಸಕರನ್ನಾಗಿ ಮಾಡಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಬಿಜೆಪಿಯ ನಾಯಕತ್ವದ ಬಗ್ಗೆ ಮಾತನಾಡಿ ಕಾಲಹರಣ ಮಾಡುವ ಬದಲು ತಮ್ಮ ಕ್ಷೇತ್ರದ ಅಭಿವೃದ್ಧಿಯ ಕುರಿತು ಶಾಸಕರು ಚಿಂತನೆ ಹರಿಸುವುದು ಸೂಕ್ತ. ಮಳೆಗಾಲ ಆರಂಭಗೊಳ್ಳಲು ಕೇವಲ ಎರಡು ವಾರಗಳಿರುವಾಗ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿರುವ ಶಾಸಕರ ಮೂರು ವರ್ಷಗಳ ಸಾಧನೆಯ ಬಗ್ಗೆ ಮಡಿಕೇರಿ ಕ್ಷೇತ್ರದ ಜನರಿಗೆ ಬೇಸರವಿದೆ. ರಸ್ತೆಗಳ ಅವ್ಯವಸ್ಥೆಯಿಂದ ಜನರು ಬೇಸತ್ತು ಹೋಗಿದ್ದಾರೆ. ಪ್ರವಾಸಿತಾಣಗಳಲ್ಲಿ ಪ್ರವಾಸಿಗರಿಗೆ ಸುರಕ್ಷತೆ ಇಲ್ಲದಾಗಿದೆ, ಅಧಿಕಾರಿಗಳ ಮೇಲೆ ಹಿಡಿತ ಸಾಧಿಸುವಲ್ಲಿ ಶಾಸಕರು ವಿಫರಾಗುತ್ತಿದ್ದಾರೆ. ಅರಣ್ಯ ಅಧಿಕಾರಿಗಳ ನಿರ್ಲಕ್ಷö್ಯದಿಂದ ದುಬಾರೆ ಸಾಕಾನೆ ಶಿಬಿರದಲ್ಲಿ ಆನೆ ದಾಳಿಯಿಂದ ಅಮಾಯಕ ಮಹಿಳೆ ಸಾವಿಗೀಡಾಗಿದ್ದಾರೆ. ಪ್ರವಾಸಿಗರಿಂದ ಶುಲ್ಕದ ರೂಪದಲ್ಲಿ ಸಾವಿರಾರು ರೂಪಾಯಿ ಸಂಗ್ರಹಿಸುವ ಅರಣ್ಯ ಇಲಾಖೆ ಕನಿಷ್ಠ ಸುರಕ್ಷತಾ ವ್ಯವಸ್ಥೆಯನ್ನು ಕೂಡ ಕಲ್ಪಿಸಿಲ್ಲ. ಅಪಾಯಗಳು ಸಂಭವಿಸಿದಾಗ ತುರ್ತು ಸ್ಪಂದನೆಯ ಕಾರ್ಯಪಡೆಗಳಿಲ್ಲ. ಸಾಕಾನೆಗಳ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿರುವ ಕಂಠಿ ಕಾರ್ಯಪ್ಪ, ಈ ರೀತಿಯ ಕೊರತೆಗಳ ಬಗ್ಗೆ ಶಾಸಕರು ಅಧ್ಯಯನ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಬದಲು ಇತರ ಪಕ್ಷಗಳ ಯೋಗಕ್ಷೇಮದ ಬಗ್ಗೆ ಚಿಂತೆ ಮಾಡುವುದು ಸರಿಯಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಸುಂಟಿಕೊಪ್ಪ ಸಮೀಪ ಹೇರೂರು ಗ್ರಾಮದಲ್ಲಿ ಅಕ್ರಮ ಚರ್ಚ್ ತಲೆ ಎತ್ತಿದೆ. ಚರ್ಚ್ನ ಉದ್ಘಾಟನೆಗೆ ತಮಿಳುನಾಡಿನಿಂದ ಮತಾಂತರಿಗಳು ಬಂದಿದ್ದಾರೆ. ಇದು ಜಿಲ್ಲೆಯಲ್ಲಿ ಮತಾಂತರದ ಪಿಡುಗು ವ್ಯಾಪಿಸುತ್ತಿರುವುದಕ್ಕೆ ಸಾಕ್ಷಿಯಾಗಿದೆ, ಯಾವುದೇ ಆತಂಕವಿಲ್ಲದೆ ಅಕ್ರಮ ಚರ್ಚ್ ನಿರ್ಮಾಣಗೊಳ್ಳುತ್ತದೆ ಮತ್ತು ಮತಾಂತರ ನಡೆಯುತ್ತದೆ ಎಂದರೆ ಇದಕ್ಕೆ ಬೆಂಬಲವಾಗಿ ರಾಜ್ಯ ಸರಕಾರ ನಿಂತಿದೆ ಎನ್ನುವ ಅನುಮಾನ ಮೂಡುತ್ತದೆ. ತಮ್ಮ ಕ್ಷೇತ್ರದಲ್ಲಿ ನಡೆಯುತ್ತಿರುವ ಈ ರೀತಿಯ ಅಕ್ರಮಗಳ ಬಗ್ಗೆ ಶಾಸಕರು ಉತ್ತರ ನೀಡಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ. *ರೂ.50 ಲಕ್ಷ ಪರಿಹಾರ ನೀಡಿ* ದುಬಾರೆಯಲ್ಲಿ ಮೃತಪಟ್ಟ ಅಮಾಯಕ ಮಹಿಳೆಯ ಕುಟುಂಬಕ್ಕೆ ರಾಜ್ಯ ಸರಕಾರ ರೂ.50 ಲಕ್ಷ ಪರಿಹಾರ ನೀಡಬೇಕು, ಕ್ಷೇತ್ರದ ಶಾಸಕರು ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಪ್ರವಾಸಿತಾಣ ದುಬಾರೆಯಲ್ಲಿ ಶುಲ್ಕದ ರೂಪದಲ್ಲಿ ಪ್ರವಾಸಿಗರಿಂದ ಸಂಗ್ರಹವಾಗುತ್ತಿರುವ ಹಣದ ವಾರ್ಷಿಕ ಲೆಕ್ಕಪತ್ರವನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಬೇಕು. ಆ ಮೂಲಕ ಅರಣ್ಯ ಸಚಿವರು ಹಾಗೂ ಶಾಸಕರು ಪಾರದರ್ಶಕತೆಯನ್ನು ಸಾಬೀತುಪಡಿಸಬೇಕು ಎಂದು ಕಂಠಿ ಕಾರ್ಯಪ್ಪ ಆಗ್ರಹಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.8: ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ (ಸಂಪುಟ ದರ್ಜೆ) ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ…

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.