Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಜಿಲ್ಲೆಯಾದ್ಯಂತ ಜೂ.28 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ : ಯಶಸ್ಸಿಗೆ ಸಹಕರಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜಿಲ್ಲೆಯಾದ್ಯಂತ ಜೂ.28 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ : ಯಶಸ್ಸಿಗೆ ಸಹಕರಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ

ಮೇ 21, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಮೇ 21 NEWS DESK : ಜಿಲ್ಲೆಯಾದ್ಯಂತ ಜೂ.28 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಇದರ ಯಶಸ್ಸಿಗೆ ಎಲ್ಲಾ ಇಲಾಖೆಗಳು, ಸಂಘ ಸಂಸ್ಥೆಗಳು ಕೈಜೋಡಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಲ್ಸ್ ಪೋಲಿಯೋ ಲಸಿಕೆಯು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಜೂ.28 ರಿಂದ ಜು.1 ವರೆಗೆ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಅಗತ್ಯ ಸಿಬ್ಬಂದಿಗಳ ನಿಯೋಜನೆ, ವಾಹನ ನಿಯೋಜನೆ, ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಪೋಲಿಯೋ ಹನಿ ನೀಡುವ ಕಾರ್ಯಕ್ರಮ ಯಶಸ್ಸುಗೊಳಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿ, ಜಿಲ್ಲೆಯಲ್ಲಿ 5 ವರ್ಷದವರೆಗಿನ ಒಟ್ಟು 32,702 ಮಕ್ಕಳಿದ್ದು, ನಗರ ವ್ಯಾಪ್ತಿಯಲ್ಲಿ 3,275, ಗ್ರಾಮೀಣ ಭಾಗದಲ್ಲಿ 29,427 ಮಕ್ಕಳಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 5,65,338 ಜನಸಂಖ್ಯೆ ಇದ್ದು, ನಗರ ವ್ಯಾಪ್ತಿಯಲ್ಲಿ 55,179, ಗ್ರಾಮೀಣ ಭಾಗದಲ್ಲಿ 5,10,159 ಜನ ಸಂಖ್ಯೆ ಇದೆ. ಇವರಲ್ಲಿ ವಲಸಿಗ ಮಕ್ಕಳ ಸಂಖ್ಯೆ 4,112 ಮತ್ತು ಸ್ಥಿರವಾಸಿತ ವಲಸೆ ಜನಸಂಖ್ಯೆಯು 15,788 ಸೇರಿ ಒಟ್ಟು 19,900 ಇರುತ್ತದೆ ಎಂದು ಅವರು ಮಾಹಿತಿ ನೀಡಿದರು. ಎಲ್ಲಾ ಶಾಲೆಗಳಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಜೂ.26 ರಂದು ಜಾಥಾ ಮಾಡಿ ಜನರಲ್ಲಿ ಜಾಗೃತಿ ಮೂಡಿಸಲಾಗುವುದು, ಜೂ.28 ರಂದು ಬೆಳಗ್ಗೆ 8 ರಿಂದ ಬೂತ್ ಮಟ್ಟದಲ್ಲಿ ಪೋಲಿಯೋ ಹನಿ ನೀಡಲಾಗುತ್ತದೆ ಎಂದು ಹೇಳಿದರು. ಜಿಲ್ಲೆಗೆ ಪ್ರಾವಾಸಿಗರ ಸಂಖ್ಯೆ ಹೆಚ್ಚಾಗಿರುವುದರಿಂದ ಹಾಗೂ ಸ್ಥಿರವಾಸಿತ ವಲಸೆ ಮಕ್ಕಳ ಸಂಖ್ಯೆಯೂ ಹೆಚ್ಚಿರುವುದರಿಂದ ಮೂರು ದಿನಗಳ ಕಾಲ ನಗರ, ಪಟ್ಟಣ ಪ್ರದೇಶ ಭೇಟಿ ನೀಡಿ ಪೆÇಲಿಯೊ ಹನಿ ನೀಡಲಾಗುತ್ತದೆ. ಜಿಲ್ಲೆಯಲ್ಲಿ ಒಟ್ಟು 1,36,214 ಮನೆಗಳಿದ್ದು, ಈ ಎಲ್ಲಾ ಮಕ್ಕಳಿಗೆ ಲಸಿಕೆ ನೀಡಲು ಜಿಲ್ಲೆಯಲ್ಲಿ ಒಟ್ಟು 470 ಬೂತ್‍ಗಳನ್ನು ಗುರುತಿಸಲಾಗಿದೆ. 32 ಸಂಚಾರಿ ತಂಡ, 1 ಮೊಬೈಲ್ ಸಂಚಾರಿ ತಂಡ ರಚಿಸಲಾಗಿದೆ. ಒಟ್ಟು 1946 ಲಸಿಕೆದಾರರನ್ನು ಗುರುತಿಸಲಾಗಿದ್ದು, ಮನೆ ಮನೆ ಭೇಟಿ ನೀಡಲು ಒಟ್ಟು 973 ತಂಡಗಳನ್ನು ರಚಿಸಲಾಗಿದೆ. ಒಟ್ಟು 85 ಮೇಲ್ವಿಚಾರಕರನ್ನು ಗುರುತಿಸಲಾಗಿದೆ. ಇವರುಗಳಿಗೆ ಈಗಾಗಲೇ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಿಂದ ತರಬೇತಿ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ವಿವರಿಸಿದರು. ಶಾಲಾ ಶಿಕ್ಷಣ ಇಲಾಖೆ ಜಾಗೃತಿ ಜಾಥಾ ಏರ್ಪಡಿಸುವುದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೂಲಕ ಗ್ರಾಮ ಮಟ್ಟದಲ್ಲಿ ಅರಿವು ಮೂಡಿಸುವುದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಪಡೆಯುವಂತೆ ಮಾಹಿತಿ ನೀಡುವುದು. ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಸ್ತ್ರೀ ಶಕ್ತಿ ಗುಂಪುಗಳ ಪದಾಧಿಕಾರಿಗಳು ಲಸಿಕಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಶೇಕಡವಾರು ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಅವರು ಮನವಿ ಮಾಡಿದರು. ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ಮೂಲಕ ಸ್ಥಳೀಯ ನಗರ, ಪಟ್ಟಣ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಲಸಿಕೆ ಪಡೆಯುವಂತಾಗಲು ಜನ ಜಾಗೃತಿ ಮೂಡಿಸುವುದು, ತಮ್ಮ ವ್ಯಾಪ್ತಿಯಲ್ಲಿ ಬ್ಯಾನರ್‍ಗಳನ್ನು ಬರೆಸಿ ಹಾಗೂ ಬಿತ್ತಿ ಪತ್ರಗಳನ್ನು ಮುದ್ರಿಸಿ ಪ್ರದರ್ಶಿಸುವುದು, ಪ್ರಾದೇಶಿಕ ಸಾರಿಗೆ ಇಲಾಖೆ ಮೂಲಕ ಅಗತ್ಯ ವಾಹನಗಳ ನಿಯೋಜನೆ ಮಾಡುವುದು, ಬಸ್ ನಿಲ್ದಾಣಗಳಲ್ಲಿ ಹಾಗೂ ಇತರೆ ಸ್ಥಳಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆ ಪಡೆಯಲು ಅರಿವು ಮೂಡಿಸುವುದು, ಕಾರ್ಮಿಕ ಇಲಾಖೆ ಮೂಲಕ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಪಡೆಯುವಂತೆ ಮಾಹಿತಿ ನೀಡುವುದು. ವೈದ್ಯಕೀಯ ಶಿಕ್ಷಣ ಇಲಾಖೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೊತೆ ಕೈಜೋಡಿಸುವುದು, ವಿವಿಧ ಸಂಘ, ಸಂಸ್ಥೆಗಳು ಪಲ್ಸ್ ಪೋಲಿಯೋ ಯಶಸ್ಸಿಗೆ ಕೈಜೋಡಿಸುವುದು, ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಇರುವ ಗ್ರಾಮಗಳು, ಲಸಿಕೆ ನೀಡುವ ಸ್ಥಳ ಹಾಗೂ ದಿನಾಂಕವನ್ನು ಕರಪತ್ರದಲ್ಲಿ ಮುದ್ರಿಸಿ ವಿತರಿಸುವುದು, ಹಾಗೆಯೇ ವಿವಿಧ ಧಾರ್ಮಿಕ ಮುಖಂಡರು ಸಹ ಪಲ್ಸ್ ಪೋಲಿಯೋ ಲಸಿಕೆ ಮಹತ್ವ ಬಗ್ಗೆ ಜಾಗೃತಿ ಮೂಡಿಸುವುದು. ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಸಂಚಾರಿ ಘಟಕಕ್ಕೆ ಸ್ಥಳಾವಕಾಶ ನೀಡಿ ಲಸಿಕೆ ಪಡೆಯಲು ಅವಕಾಶ ಮಾಡುವುದು. ಹೀಗೆ ವಿವಿಧ ಇಲಾಖೆಗಳು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಅವರು ಕೋರಿದರು.

 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.8: ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ (ಸಂಪುಟ ದರ್ಜೆ) ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ…

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.